ಬ್ರೇಕಿಂಗ್ ನ್ಯೂಸ್
31-08-20 06:15 pm Headline Karnataka News Network ದೇಶ - ವಿದೇಶ
ದೆಹಲಿ, ಆಗಸ್ಟ್ 31: ಕಳೆದ ಹಲವು ದಿನಗಳಿಂದ ತೀವ್ರ ಅನಾರೋಗ್ಯ ಸಮಸ್ಯೆಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ರಾಷ್ಟ್ರಪತಿ, ರಾಜಕೀಯ ಧುರೀಣ ಪ್ರಣಬ್ ಮುಖರ್ಜಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಆರೋಗ್ಯದಲ್ಲಿ ಏರುಪೇರಾಗಿದ್ದ ಕಾರಣ 84 ವರ್ಷದ ಪ್ರಣಬ್ ಮುಖರ್ಜಿ ಅವರನ್ನು ಭಾರತೀಯ ಸೇನೆಯ ರೀಸರ್ಚ್ ಅಂಡ್ ರೆಫೆರೆಲ್ (ಆರ್ ಅಂಡ್ ಆರ್) ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲದೆ, ಅವರ ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿ ಸಮಸ್ಯೆ ಉದ್ಭವವಾಗಿತ್ತು. ಹೀಗಾಗಿ ಪ್ರಣಬ್ ಅವರಿಗೆ ತುರ್ತಾಗಿ ಮಿದುಳು ಚಿಕಿತ್ಸೆಯನ್ನು ಮಾಡಲಾಗಿತ್ತು.
ಆದರೆ, ಮಿದುಳು ಶಸ್ತ್ರ ಚಿಕಿತ್ಸೆ ಮಾಡುವ ಮುನ್ನ ನಡೆಸಲಾಗಿದ್ದ ಕೊರೋನಾ ಪರೀಕ್ಷೆಯಲ್ಲಿ ಅವರಿಗೆ ಪಾಸಿಟಿವ್ ಬಂದಿತ್ತು. ಆದರೂ ಮಿದುಳು ಶಸ್ತ್ರ ಚಿಕಿತ್ಸೆಯನ್ನು ಮುಗಿಸಿ ಅವರಿಗೆ ಕೃತಕ ಉಸಿರಾಟದ ವ್ಯವಸ್ಥೆ (ವೆಂಟಿಲೇಟರ್ ಸಪೋರ್ಟ್) ಮಾಡುವ ಮೂಲಕ ತೀವ್ರ ನಿಗಾ ವಹಿಸಲಾಗಿತ್ತು. ಈ ವೇಳೆ ಅವರು ಶಾಶ್ವತ ಕೋಮಾಕ್ಕೆ ಜಾರಿದ್ದರು.
ಬಂಗಾಳದಲ್ಲಿ 1935, ಡಿಸೆಂಬರ್ 11ರಂದು ಜನಿಸಿದ ಪ್ರಣಬ್ ಮುಖರ್ಜಿ ಕಾಂಗ್ರೆಸ್ ಮೂಲಕ ರಾಜಕೀಯ ಜೀವನ ಪ್ರಾರಂಭಿಸಿದರು. 2012ರಿಂದ 2017ರವರೆಗೆ ಭಾರತದ 13ನೇ ರಾಷ್ಟ್ರಪತಿಯಾಗಿ ಅತ್ಯುನ್ನತ ಹುದ್ದೆ ಅಲಂಕರಿಸಿದ್ದಾರೆ. ರಾಷ್ಟ್ರಪತಿಗಳಾಗುವ ಮುನ್ನ ಅವರು ವಿದೇಶಾಂಗ ಸಚಿವ, ರಕ್ಷಣಾ ಸಚಿವ ಮತ್ತು ಹಣಕಾಸು ಸಚಿವರಾಗಿಯೂ ಕೆಲಸ ಮಾಡಿದ್ದಾರೆ. ಅಪಾರ ರಾಜಕೀಯ ಅನುಭವ ಹೊಂದಿರುವ ಅವರು ರಾಷ್ಟ್ರಪತಿ ಅಧಿಕಾರ ಪೂರ್ಣಗೊಂಡ ಬಳಿಕ ಸಕ್ರಿಯ ರಾಜಕಾರಣದಿಂದ ದೂರವೇ ಉಳಿದಿದ್ದರು.
India grieves the passing away of Bharat Ratna Shri Pranab Mukherjee. He has left an indelible mark on the development trajectory of our nation. A scholar par excellence, a towering statesman, he was admired across the political spectrum and by all sections of society. pic.twitter.com/gz6rwQbxi6
— Narendra Modi (@narendramodi) August 31, 2020
15-03-25 03:55 pm
HK News Desk
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 01:47 pm
Mangalore Correspondent
Mangalore Student Missing, ,Kidnap, Hitein Bh...
15-03-25 12:35 pm
Mangalore, VHP, NIA, Illegal Arms: ಕರಾವಳಿಯಲ್ಲ...
14-03-25 10:35 pm
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
Mangalore tulu Artist Vivek Madur death: ಕಲಾ...
14-03-25 11:02 am
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm