ಬ್ರೇಕಿಂಗ್ ನ್ಯೂಸ್
01-09-20 03:08 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 01: ನಿನ್ನೆ ಸಂಜೆ ಮೃತಪಟ್ಟಿದ್ದ ಮಾಜಿ ರಾಷ್ಟ್ರಪತಿ ಹಾಗೂ ಭಾರತ ರತ್ನ ಪ್ರಣಬ್ ಮುಖರ್ಜಿ ಅವರು ಪಂಚಭೂತಗಳಲ್ಲಿ ಲೀನವಾಗಿದ್ದಾರೆ. ದೆಹಲಿಯ ಲೋಧಿ ರಸ್ತೆಯಲ್ಲಿರುವ ಚಿತಾಗಾರದಲ್ಲಿ ಅಭಿಜಿತ್ ಮುಖರ್ಜಿ ತಮ್ಮ ತಂದೆಯ ಅಂತ್ಯಸಂಸ್ಕಾರ ನೆರವೇರಿಸಿದರು. ಈ ವೇಳೆ ಸರ್ಕಾರಿ ಮತ್ತು ಮಿಲಿಟರಿ ಗೌರವಗಳನ್ನ ಅರ್ಪಿಸಲಾಯಿತು.
ಇದಕ್ಕೂ ಮುನ್ನ ರಾಜಾಜಿ ಮಾರ್ಗ್ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಬೆಳಗ್ಗೆ 9ರಿಂದ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು. ಎಲ್ಲಾ ಪಕ್ಷಗಳ ಮುಖಂಡರು, ಕಾರ್ಯಕರ್ತರು ಅಂತಿಮ ದರ್ಶನ ಪಡೆದರು. ಈ ವೇಳೆ, ಮುಖಕ್ಕೆ ಮಾಸ್ಕ್, 6 ಅಡಿ ದೈಹಿಕ ಅಂತರ ಇತ್ಯಾದಿ ನಿಯಮಗಳ ಪಾಲನೆಯಾಗುವಂತೆ ಎಚ್ಚರ ವಿಸಲಾಗಿತ್ತು.



ಇದೇ ವೇಳೆ, ಕೇಂದ್ರ ಸರ್ಕಾರ 84 ವರ್ಷದ ಪ್ರಣಬ್ ಮುಖರ್ಜಿ ಅವರ ಸಾವಿಗೆ ಗೌರವ ಸೂಚಕವಾಗಿ ಏಳು ದಿನಗಳ ಶೋಕಾಚರಣೆ ಘೋಷಿಸಿದೆ. ಸೆಪ್ಟೆಂಬರ್ 6ರವರೆಗೆ ದೇಶಾದ್ಯಂತ ರಾಷ್ಟ್ರಧ್ವಜ ಅರ್ಧಕ್ಕೆ ಹಾರಾಡುತ್ತದೆ. ಸರ್ಕಾರದಿಂದ ಯಾವುದೇ ಅಧಿಕೃತ ಮನರಂಜನಾ ಕಾರ್ಯಕ್ರಮ ಇರುವುದಿಲ್ಲ.
ಹಿರಿಯ ಕಾಂಗ್ರೆಸ್ ಮುಖಂಡರಾಗಿ, ಬಳಿಕ ರಾಷ್ಟ್ರಪತಿಗಳಾಗಿ ಸೇವೆ ಸಲ್ಲಿಸಿದ್ದ ಪ್ರಣಬ್ ಮುಖರ್ಜಿ ಅವರು ವಿವಿಧ ಅನಾರೋಗ್ಯಗಳ ಕಾರಣದಿಂದ ಆಗಸ್ಟ್ 10ರಂದು ಭಾರತೀಯ ಸೇನೆಯ ರೀಸರ್ಚ್ ಅಂಡ್ ರೆಫೆರಲ್ ಆಸ್ಪತ್ರೆಗೆ ದಾಖಲಅಗಿದ್ದರು. ಅವರ ಮಿದುಳಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು. ನಂತರ ಅವರು ಕೋಮಾಗೆ ಜಾರಿದರು. ಕೋವಿಡ್-19 ಸೋಂಕು ಕೂಡ ತಗುಲಿ ಅವರ ಅನಾರೋಗ್ಯ ಇನ್ನಷ್ಟು ಬಿಗಡಾಯಿಸಿತು. ಶ್ವಾಸಕೋಶದ ಸೋಂಕಿನಿಂದ ಸೆಪ್ಟಿಕ್ ಶಾಕ್ ಆಗಿ ಅವರು ಸೋಮವಾರ ಸಂಜೆ 4:30ಕ್ಕೆ ಕೊನೆಯುಸಿರೆಳೆದರು.
ರಾಷ್ಟ್ರಪತಿಗಳಾಗುವ ಮುನ್ನ ಏಳು ಬಾರಿ ಸಂಸದರಾಗಿದ್ದ ಪ್ರಣಬ್ ಮುಖರ್ಜಿ ಅವರು ಹಲವು ಪ್ರಮುಖ ಖಾತೆಗಳನ್ನ ನಿಭಾಯಿಸಿದ್ದಾರೆ. ಹಣಕಾಸು ಖಾತೆ, ವಿದೇಶಾಂಗ ವ್ಯವಹಾರಗಳ ಖಾತೆ, ರಕ್ಷಣಾ ಖಾತೆಗಳನ್ನ ಅವರು ಸಮರ್ಥವಾಗಿ ನಿರ್ವಹಿಸಿದ್ದಾರೆ. ಅನೇಕ ಬಾರಿ ಅವರು ಪ್ರಧಾನಿ ಸ್ಥಾನಕ್ಕೂ ಪರಿಗಣಿತರಾಗಿದ್ದವರು.
13-10-26 04:53 pm
HK News Staffer
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm