ಬ್ರೇಕಿಂಗ್ ನ್ಯೂಸ್
29-06-21 01:17 pm Headline Karnataka News Network ದೇಶ - ವಿದೇಶ
Photo credits : ANI @ ANI
ಹಿಮಾಚಲ ಪ್ರದೇಶ, ಜೂನ್ 29: ಪಿಕಪ್ ವಾಹನವೊಂದು ಆಳವಾದ ಕಂದಕಕ್ಕೆ ಬಿದ್ದು 9 ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಸಿರ್ಮೌರ್ ಜಿಲ್ಲೆಯಲ್ಲಿ ನಡೆದಿದೆ. ಮದುವೆ ಸಮಾರಂಭಕ್ಕೆ ಹೋಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ.
ಶಿಲ್ಲೈ ಉಪವಿಭಾಗದ, ಪಾವೊಂಟಾ ಸಾಹಿಬ್ ಗಡಿ ಬಳಿ ಇರುವ ಪಾಶೋಗ್ ಬಳಿ ನಿಯಂತ್ರಣ ಕಳೆದುಕೊಂಡ ಪಿಕಪ್ ಕಮರಿಗೆ ಬಿದ್ದಿದೆ ಎಂದು ಪಾವೊಂಟಾ ಪೊಲೀಸ್ ಅಧಿಕಾರಿ ಬೀರ್ ಬಹದ್ದೂರ್ ಹೇಳಿದ್ದಾರೆ. ಹಾಗೇ, ಸ್ಥಳೀಯ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೂವರಿಗೆ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ
ಇನ್ನು ಘಟನೆಯ ಬಗ್ಗೆ ಸಂತಾಪ ವ್ಯಕ್ತಪಡಿಸಿ ಪ್ರಧಾನಿ ಮಂತ್ರಿ ಕಚೇರಿ ಟ್ವೀಟ್ ಮಾಡಿದೆ. ಸಿರ್ಮೌರ್ ಅಪಘಾತದ ವಿಷಯ ಕೇಳಿ ತುಂಬ ನೋವಾಯಿತು. ಮೃತರ ಕುಟುಂಬಗಳಿಗೆ ಸಾಂತ್ವನಗಳು. ಹಾಗೇ, ಗಾಯಗೊಂಡವರು ಬೇಗನೇ ಗುಣಮುಖರಾಗಲೆಂದು ಹಾರೈಸುತ್ತೇವೆ. ಈ ದುರ್ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂಪಾಯಿ ನೀಡಲಾಗುವುದು. ಹಾಗೇ, ಗಾಯಗೊಂಡವರಿಗೆ ತಲಾ 50 ಸಾವಿರ ರೂ.ಕೊಡಲಾಗುವುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಿಳಿಸಿದ್ದಾಗಿ ಟ್ವೀಟ್ನಲ್ಲಿ ಹೇಳಲಾಗಿದೆ.
Nine people died and three others were injured as a vehicle fell into a deep gorge in Himachal Pradesh’s Sirmaur district on Monday, an official said.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm