ಬ್ರೇಕಿಂಗ್ ನ್ಯೂಸ್
07-07-21 03:39 pm Headline Karnataka News Network ದೇಶ - ವಿದೇಶ
ನವದೆಹಲಿ, ಜುಲೈ 7: ಪ್ರಧಾನಿ ಮೋದಿ ಕೊನೆಗೂ ಸಂಪುಟಕ್ಕೆ ಸರ್ಜರಿ ಮಾಡಿದ್ದಾರೆ. ಹಿರಿಯ ಸಚಿವರಾದ ಡಿ.ವಿ.ಸದಾನಂದ ಗೌಡ, ಆರೋಗ್ಯ ಸಚಿವ ಡಾ.ಹರ್ಷವರ್ಧನ್, ರಮೇಶ್ ಪೋಖ್ರಿಯಾಲ್, ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ಸೇರಿ ಹತ್ತು ಮಂದಿಯನ್ನು ಸಂಪುಟದಿಂದ ಕೈಬಿಡಲಾಗಿದೆ. ಇದೇ ವೇಳೆ, ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಸೇರಿ ನಾಲ್ವರಿಗೆ ಕೇಂದ್ರ ಸಚಿವ ಸ್ಥಾನ ನೀಡಲಾಗಿದೆ.
ಈ ವರ್ಷ ಎದುರಾಗಲಿರುವ ಉತ್ತರ ಪ್ರದೇಶ ಸೇರಿ ಹಲವು ರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸಂಪುಟಕ್ಕೆ ಸರ್ಜರಿ ಮಾಡಲಾಗುತ್ತಿದ್ದು ಹಳಬರನ್ನು ತೆಗೆದು ಹೊಸಬರಿಗೆ ಮಣೆ ನೀಡಲಾಗಿದೆ. ಇದರಲ್ಲಿ ಕರ್ನಾಟಕದಲ್ಲಿ ನಾಲ್ವರಿಗೆ ಸಚಿವ ಸ್ಥಾನ ಸಿಕ್ಕಿರುವುದು ವಿಶೇಷ.





ಕರ್ನಾಟಕದಲ್ಲಿ 25 ಬಿಜೆಪಿ ಸಂಸದರಿದ್ದರೂ ಮೋದಿ ಸಂಪುಟದಲ್ಲಿ ಇಬ್ಬರಿಗೆ ಮಾತ್ರ ಸ್ಥಾನ ನೀಡಲಾಗಿತ್ತು. ಈ ಕೊರತೆ ನೀಗಿಸಲು ಈ ಬಾರಿ ಪ್ರಯತ್ನ ಮಾಡಲಾಗಿದ್ದು ಉಡುಪಿ ಸಂಸದೆ ಶೋಭಾ ಕರಂದ್ಲಾಜೆ, ಚಿತ್ರದುರ್ಗ ಸಂಸದ ಎ.ನಾರಾಯಣ ಸ್ವಾಮಿ, ಬೀದರಿನ ಭಗವಂತ ಖೂಬಾ ಹಾಗೂ ರಾಜ್ಯಸಭಾ ಸದಸ್ಯ ರಾಜೀವ ಚಂದ್ರಶೇಖರ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಿದ್ದಾರೆ ಎನ್ನುವ ಮಾಹಿತಿಯಿದೆ.
ಇನ್ನುಳಿದಂತೆ, ಬಹುತೇಕ ಯುವ ಸಂಸದರಿಗೆ ಕೇಂದ್ರದಲ್ಲಿ ಸಚಿವ ಸ್ಥಾನ ನೀಡಲಾಗಿದೆ. ಲಿಂಗಾಯತ ಕೋಟಾದಿಂದ ಸಚಿವರಾಗಿದ್ದ ಸುರೇಶ ಅಂಗಡಿ ನಿಧನವಾಗಿದ್ದರಿಂದ ಅವರ ಸ್ಥಾನ ತುಂಬಲು ಲಿಂಗಾಯತರೇ ಆಗಿರುವ ಭಗವಂತ ಖೂಬಾರನ್ನು ಆಯ್ಕೆ ಮಾಡಲಾಗಿದೆ.
ಗೌಡ ಜನಾಂಗದಿಂದ ಸದಾನಂದ ಗೌಡರ ಬದಲಿಗೆ ಅದೇ ಸಮುದಾಯದ ಶೋಭಾ ಕರಂದ್ಲಾಜೆಗೆ ಸ್ಥಾನ ನೀಡಲಾಗಿದೆ. ಹಿಂದುಳಿದ ವರ್ಗದಿಂದ ನಾರಾಯಣ ಸ್ವಾಮಿ ಅವರನ್ನು ಸಚಿವರನ್ನಾಗಿ ಮಾಡಲಾಗಿದೆ. ಸಚಿವ ಸ್ಥಾನದಲ್ಲಿ ನಿರೀಕ್ಷಿತ ಸಾಧನೆ ಮಾಡದವರನ್ನು ಕೈಬಿಡಲಾಗಿದೆ ಎನ್ನುವ ಮಾಹಿತಿ ಇದೆ. ದೇಶದಲ್ಲಿ ಒಟ್ಟು 43 ಸಂಸದರಿಗೆ ಸಚಿವ ಸ್ಥಾನ ನೀಡಲಾಗಿದೆ. 28 ಸ್ಥಾನಗಳು ಖಾಲಿಯಿದ್ದವು. ಅದನ್ನು ಭರ್ತಿ ಮಾಡಲು ಮೋದಿ ಕಸರತ್ತು ನಡೆಸಿದ್ದಾರೆ. ಇಂದು ಸಂಜೆ ಆರು ಗಂಟೆಗೆ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
Union Chemicals and Fertilizers Minister DV Sadananda Gowda on Wednesday resigned from the Union Council of Ministers. Gowda confirmed his decision to step down. Besides being the chemicals and fertilizers minister in the Narendra Modi government, Gowda has also held portfolios like Railways, Law, Statistics, and Programme Implementation.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
18-04-26 11:31 pm
HK News Desk
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
18-04-26 10:37 pm
HK News Staffer
180 ಅಪ್ರಾಪ್ತ ಬಾಲಕಿಯರ 350 ಅಶ್ಲೀಲ ವಿಡಿಯೋ ವೈರಲ್...
18-04-26 03:50 pm
ಟಿಸಿಎಸ್ ಕಂಪನಿಯಲ್ಲಿ ಕಾರ್ಪೊರೇಟ್ ಜಿಹಾದ್ ; ತಲೆಮರೆ...
17-04-26 06:48 pm
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm