ಬ್ರೇಕಿಂಗ್ ನ್ಯೂಸ್
15-07-21 12:33 pm Headline Karnataka News Network ದೇಶ - ವಿದೇಶ
ಕಾರವಾರ, ಜುಲೈ 15; ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಶಿವಪ್ರಕಾಶ್ ದೇವರಾಜುರನ್ನು ವರ್ಗಾವಣೆ ಮಾಡಲಾಗಿದೆ. ವರ್ತಿಕಾ ಕಟಿಯಾರ್ ನೂತನ ಎಸ್ಪಿಯಾಗಿ ನೇಮಕಗೊಂಡಿದ್ದಾರೆ.
ಬುಧವಾರ ಕರ್ನಾಟಕ ಸರ್ಕಾರ ಕೆಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಉತ್ತರ ಕನ್ನಡದ ನೂತನ ಎಸ್ಪಿಯಾಗಿ ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ನೇಮಕ ಮಾಡಲಾಗಿದೆ. ಜಿಲ್ಲೆಯ ಮೊದಲ ಮಹಿಳಾ ಪೊಲೀಸ್ ವರಿಷ್ಠಾಧಿಕಾರಿ ಎನ್ನುವ ಹೆಗ್ಗಳಿಕೆಗೆ ವರ್ತಿಕಾ ಕಟಿಯಾರ್ ಪಾತ್ರವಾಗಲಿದ್ದಾರೆ.
ಮೂಲತಃ ಉತ್ತರ ಪ್ರದೇಶದವರಾದ ವರ್ತಿಕಾ 2010ನೇ ಬ್ಯಾಚ್ ಐಪಿಎಸ್ ಅಧಿಕಾರಿ. ಈ ಹಿಂದೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿ ಎಎಸ್ಪಿಯಾಗಿ ಕಾರ್ಯನಿರ್ವಹಿಸಿದ್ದರು. ಇದಾದ ನಂತರ ಕೊಡಗು ಹಾಗೂ ಧಾರವಾಡ ಎಸ್ಪಿಯಾಗಿ, ಅಲ್ಲದೇ ಕೆಎಸ್ಆರ್ಪಿ ಸಂಶೋಧನಾ ಕೇಂದ್ರದ ಎಸ್ಪಿಯಾಗಿ ಸಹ ಕಾರ್ಯನಿರ್ವಹಿಸಿದ್ದರು.

ಪ್ರಸ್ತುತ ರಾಜ್ಯ ಅಪರಾಧ ದಾಖಲೆಗಳ ವಿಭಾಗದಲ್ಲಿ (ಎಸ್ಸಿಬಿ) ಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರನ್ನು ಉತ್ತರ ಕನ್ನಡ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ವರ್ಗಾವಣೆಗೊಂಡಿರುವ ಹಾಲಿ ಎಸ್ಪಿ ಶಿವಪ್ರಕಾಶ್ ದೇವರಾಜುಗೆ ಸ್ಥಳ ನಿಯೋಜನೆ ಮಾಡಿಲ್ಲ.
ಉತ್ತರ ಕನ್ನಡ ಜಿಲ್ಲೆಗೆ ಈವರೆಗೆ ಮಹಿಳಾ ಅಧಿಕಾರಿಗಳು ಎಸ್ಪಿಯಾಗಿ ನೇಮಕವಾಗಿರಲಿಲ್ಲ. ಮೊದಲ ಮಹಿಳಾ ಜಿಲ್ಲಾಧಿಕಾರಿಯಾಗಿ ಇಂಕಾಗ್ಲೋ ಜಮೀರ್ ಕರ್ತವ್ಯ ನಿರ್ವಹಿಸಿದ್ದರೆ, ಇದೀಗ ವರ್ತಿಕಾ ಕಟಿಯಾರ್ ಮೊದಲ ಮಹಿಳಾ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.
The state government has posted Vartika Katiyar, IPS (RR 2010), as Superintendent of Police, Uttara Kannada, Karwar, while G Sangeetha, IPS (2011), has been posted as Superintendent of Police, Chamarajanagar.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 03:30 pm
HK News Staffer
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
Kollur Temple News: ಕೊಲ್ಲೂರು ದೇವಸ್ಥಾನದ ಬಳಿ ಅವ...
14-10-26 04:36 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm