ಬ್ರೇಕಿಂಗ್ ನ್ಯೂಸ್
04-09-20 05:00 pm Dhruthi Anchan - Correspondant ದೇಶ - ವಿದೇಶ
ಹೈದರಾಬಾದ್, ಸೆಪ್ಟೆಂಬರ್ 04: ಕೇಂದ್ರ ಸರ್ಕಾರ ನಿನ್ನೆಯಷ್ಟೇ ಪಬ್ಜಿ ಸೇರಿ ಚೀನಾದ 118 ಆಯಪ್ಗಳನ್ನು ನಿಷೇಧಿಸಿದೆ. ದೇಶದ ಸಾರ್ವಭೌಮತ್ವ, ಸುರಕ್ಷತೆ, ಸಮಗ್ರತೆ ದೃಷ್ಟಿಯಿಂದ ಬ್ಯಾನ್ ಮಾಡಿದ್ದಾಗಿ ಹೇಳಿದ್ದು, ಇದರ ಬೆನ್ನಲ್ಲೇ ಆಂಧ್ರಪ್ರದೇಶ ಸರ್ಕಾರ ಇನ್ನೊಂದು ಹೆಜ್ಜೆ ಮುಂದಿಟ್ಟಿದೆ. ಆನ್ಲೈನ್ ರಮ್ಮಿ, ಪೋಕರ್ ಆಟಗಳನ್ನೂ ನಿಷೇಧಿಸಲು ನಿರ್ಧಾರ ಮಾಡಿದೆ. ಯುವಜನತೆಯ ಹಿತದೃಷ್ಟಿಯಿಂದ ಆನ್ಲೈನ್ ರಮ್ಮಿ, ಪೋಕರ್ ಆಟಗಳನ್ನೂ ಬ್ಯಾನ್ ಮಾಡುತ್ತಿರುವುದಾಗಿ ಹೇಳಿದೆ.
ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಆನ್ ಲೈನ್ ಜೂಜಾಟವು ಯುವಕರ ದಾರಿ ತಪ್ಪಿಸುತ್ತಿದೆ. ಹೀಗಾಗಿ ಎಲ್ಲಾ ತೆರನಾದ ಆನ್ ಲೈನ್ ಜೂಜಾಟವನ್ನು ಆಂಧ್ರದಲ್ಲಿ ನಿಷೇಧಿಸಲಾಗುವುದು ಎಂದು ಸಚಿವ ವೆಂಕಟರಾಮಯ್ಯ ತಿಳಿಸಿದ್ದಾರೆ.

ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾದ ನಿರ್ಣಯದ ಪ್ರಕಾರ, ಮೊದಲ ಬಾರಿಯ ಅಪರಾಧಕ್ಕಾಗಿ ಆನ್ಲೈನ್ ಗ್ಯಾಂಬ್ಲಿಂಗ್ ಸಂಘಟಕರನ್ನು ದಂಡ ಹಾಗೂ ಒಂದು ವರ್ಷದವರೆಗೆ ಜೈಲು ಶಿಕ್ಷೆಗೆ ಗುರಿಪಡಿಸಲಾಗುವುದು. ಎರಡನೆಯ ಬಾರಿ ತಪ್ಪು ಮರುಕಳಿಸಿದರೆ ದಂಡ ಹಾಗೂ ಎರಡು ವರ್ಷ ಸೆರೆವಾಸದ ಶಿಕ್ಷೆ ವಿಧಿಸಲಾಗುವುದು ಎಂದು ಹೇಳಿದರು.
ಇದಲ್ಲದೆ ಆನ್ಲೈನ್ನಲ್ಲಿನ ಜೂಜಿನ ಆಟಗಳನ್ನು ಆಡುವ ಸಂದರ್ಭದಲ್ಲಿ ಸಿಕ್ಕಿಬಿದ್ದರೆ ಅಂತಹವರಿಗೆ ಆರು ತಿಂಗಳವರೆಗೆ ಜೈಲು ಶಿಕ್ಷೆ ವಿಧಿಸಲಾಗುವುದು ಎಂದು ಸಹ ಸಚಿವ ನಾನಿ ತಿಳಿಸಿದ್ದಾರೆ.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm