ಬ್ರೇಕಿಂಗ್ ನ್ಯೂಸ್
24-08-21 05:18 pm Headline Karnataka News Network ದೇಶ - ವಿದೇಶ
ಮಥುರಾ, ಆಗಸ್ಟ್ 24: ಭಾರತದಲ್ಲಿ ಕೊವಿಡ್ ಕೇಸುಗಳು ಹೆಚ್ಚಾಗುತ್ತಲೇ ಇದೆ. ಇದರ ಜೊತೆಗೆ ಕೊರೊನಾ ರೂಪಾಂತರಿ ಕೂಡ ಆತಂಕ ಮೂಡಿಸಿದೆ. ಸೆಪ್ಟೆಂಬರ್ ಅಂತ್ಯ ಅಥವಾ ಅಕ್ಟೋಬರ್ನಲ್ಲಿ ಕೊರೊನಾ ಮೂರನೇ ಅಲೆ ಶುರುವಾಗಲಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಈ ಕೊವಿಡ್ ಮೂರನೇ ಅಲೆ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರಲಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದಲ್ಲಿ ಕಾಣಿಸಿಕೊಂಡಿರುವ ನಿಗೂಢ ಜ್ವರ ಭಾರೀ ಆತಂಕ ಮೂಡಿಸಿದೆ. ಉತ್ತರ ಪ್ರದೇಶದ ಮಥುರಾದಲ್ಲಿ ನಿಗೂಢ ಜ್ವರಕ್ಕೆ ಕಳೆದೊಂದು ವಾರದಿಂದ 5 ಮಕ್ಕಳು ಸೇರಿ 6 ಮಂದಿ ಬಲಿಯಾಗಿದ್ದಾರೆ.
ಒಂದೇ ವಾರದಲ್ಲಿ 5 ಮಕ್ಕಳನ್ನು ಬಲಿ ಪಡೆದಿರುವ ನಿಗೂಢ ಜ್ವರ ಉತ್ತರ ಪ್ರದೇಶದಲ್ಲಿ ಆತಂಕ ಮೂಡಿಸಿದೆ. ಈಗಾಗಲೇ ಭಾರತಕ್ಕೆ ಕೊರೊನಾ 3ನೇ ಅಲೆ ಕಾಲಿಟ್ಟಿದೆಯಾ? ಎಂಬ ಅನುಮಾನಕ್ಕೂ ಇದು ಕಾರಣವಾಗಿದೆ. ಈ ನಿಗೂಢ ಜ್ವರದಿಂದ ಮಥುರಾ, ಆಗ್ರಾ ಹಾಗೂ ರಾಜಸ್ಥಾನದ ಭರತ್ಪುರದಲ್ಲಿ 80ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಜ್ವರದ ಹಿನ್ನೆಲೆ ಮತ್ತು ಕಾರಣ ಇನ್ನೂ ಪತ್ತೆಯಾಗಿಲ್ಲ.
ವಿಪರೀತ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದ 1ರಿಂದ 9 ವರ್ಷದೊಳಗಿನ 5 ಮಕ್ಕಳು ಸಾವನ್ನಪ್ಪಿದ್ದಾರೆ. ಇವರೆಲ್ಲರೂ ಒಂದೇ ಗ್ರಾಮದವರಾಗಿದ್ದಾರೆ ಎಂಬುದು ಗಮನಿಸಬೇಕಾದ ವಿಷಯ. ಈ ಗ್ರಾಮದಲ್ಲಿ ಇನ್ನೂ ಹಲವರಿಗೆ ಜ್ವರ ಕಾಣಿಸಿಕೊಂಡಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ದಾಖಲಾಗಿರುವ ರೋಗಿಗಳಿಂದ ಮಲೇರಿಯಾ, ಡೆಂಗ್ಯು, ಕೊವಿಡ್ ಸ್ಯಾಂಪಲ್ಗಳನ್ನು ಪಡೆಯಲಾಗಿದ್ದು, ಅವರ ಸಂಬಂಧಿಕರಿಗೂ ವೈದ್ಯಕೀಯ ತಪಾಸಣೆ ನಡೆಸಲಾಗಿದೆ.
ಈ ಜ್ವರದಿಂದ ಸಾವನ್ನಪ್ಪಿರುವುದಕ್ಕೆ ನಿಖರವಾದ ಕಾರಣವೇನು? ಇದು ಯಾವ ಜ್ವರ? ಎಂಬುದು ಇನ್ನೂ ಖಚಿತವಾಗಿಲ್ಲ. ಇನ್ನು, ಮಕ್ಕಳಿಗೆ ಕೊರೊನಾ ಭೀತಿ ಹೆಚ್ಚಾಗಿರುವುದರಿಂದ ಕೊವಿಡ್ ಮೂರನೇ ಅಲೆ ಬರುವುದರೊಳಗೆ ಮಕ್ಕಳಿಗೆ ಕೊರೊನಾ ಲಸಿಕೆ ಹಾಕಲು ಪ್ರಯತ್ನಿಸಲಾಗುತ್ತಿದೆ. ಭಾರತ್ ಬಯೋಟೆಕ್ನ ಕೊವ್ಯಾಕ್ಸಿನ್ ಲಸಿಕೆಯನ್ನು ಮಕ್ಕಳಿಗೆ ನೀಡುವ ಬಗ್ಗೆ ಪ್ರಯೋಗಗಳು ನಡೆಯುತ್ತಿವೆ. ಸೆಪ್ಟೆಂಬರ್ ಅಂತ್ಯ ಅಥವಾ ಅಕ್ಟೋಬರ್ ಮೊದಲ ವಾರದಲ್ಲಿ ಮಕ್ಕಳಿಗೆ ಕೊವ್ಯಾಕ್ಸಿನ್ ಲಸಿಕೆ ಲಭ್ಯವಾಗಲಿದೆ. ನಡುವೆ ಇತರೆ ಆರೋಗ್ಯ ಸಮಸ್ಯೆಗಳಿರುವ 12 ವರ್ಷ ಮೇಲ್ಪಟ್ಟ ಮಕ್ಕಳಿಗೆ ಆದ್ಯತೆಯ ಮೇರೆಗೆ ಮೊದಲು ಕೊವಿಡ್ ಲಸಿಕೆ ನೀಡಲಾಗುವುದು
ಈಗಾಗಲೇ ಭಾರತ ಮೂಲದ ಜೈಡಸ್ ಕ್ಯಾಡಿಲಾ ಕಂಪನಿಯು ಜೈಕೋವ್-ಡಿ ಎಂಬ ಕೊರೊನಾ ಲಸಿಕೆಯನ್ನು ಅಭಿವೃದ್ಧಿಪಡಿಸಿದ್ದು, ಈ ಲಸಿಕೆಯ ತುರ್ತು ಬಳಕೆಗೆ ಅನುಮತಿ ನೀಡಲಾಗಿದೆ. ಜೈಕೋವ್-ಡಿ ಲಸಿಕೆಯನ್ನು 12 ವರ್ಷ ಮೇಲ್ಪಟ್ಟ ಮಕ್ಕಳಿಗೂ ನೀಡಬಹುದು. ಸೆಪ್ಟೆಂಬರ್ ಅಂತ್ಯ ಅಥವಾ ಅಕ್ಟೋಬರ್ನಲ್ಲಿ ಈ ಲಸಿಕೆ ಲಭ್ಯವಾಗಲಿದೆ. ಸೆಪ್ಟೆಂಬರ್ನಿಂದ ಮಕ್ಕಳಿಗೆ ಕೋವಿಡ್ ಲಸಿಕೆ ಸಿಗುವ ಸಾಧ್ಯತೆ ಇದೆ. ಇದು ಭಾರತದಲ್ಲಿ ಲಭ್ಯವಾಗುತ್ತಿರುವ 6ನೇ ಕೊವಿಡ್ ಲಸಿಕೆಯಾಗಿದೆ.
12 ವರ್ಷ ಮೇಲ್ಪಟ್ಟವರಿಗೆ ಮಾತ್ರವಲ್ಲದೆ 2ರಿಂದ 180 ವರ್ಷದೊಳಗಿನವರಿಗೆ ಲಸಿಕೆ ಹಾಕುವ ಪ್ರಯೋಗಗಳು ಕೂಡ ನಡೆಯುತ್ತಿವೆ. 2ರಿಂದ 18 ವರ್ಷ ವಯಸ್ಸಿನವರಿಗೆ 2ರಿಂದ 3 ಹಂತದ ಕ್ಲಿನಿಕಲ್ ಪ್ರಯೋಗಗಳು ನಡೆಯುತ್ತಿವೆ. ಈ ಲಸಿಕಾ ಪ್ರಯೋಗದ ಫಲಿತಾಂಶಗಳು ಶೀಘ್ರದಲ್ಲೇ ಲಭ್ಯವಾಗುತ್ತವೆ. ಬಹುಶಃ ಸೆಪ್ಟೆಂಬರ್ ಅಥವಾ ಸೆಪ್ಟೆಂಬರ್ ನಂತರ ಮಕ್ಕಳಿಗೆ ಕೊವಿಡ್ ಲಸಿಕೆ ನೀಡಬಹುದು.
Amid the COVID-19 pandemic and fears of the possible third wave infecting children, a mysterious disease has surfaced in Uttar Pradesh. The mysterious fever claimed six lives, including five children, in Konh village of Mathura in the past week.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 11:01 am
Bangalore Correspondent
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm
Dead Baby Found, Garbage, Bangalore crime: ಅಪ...
18-04-25 03:41 pm