ಬ್ರೇಕಿಂಗ್ ನ್ಯೂಸ್
26-08-21 02:42 pm Headline Karnataka News Network ದೇಶ - ವಿದೇಶ
Photo credits : Representational
ಪಾಟ್ನಾ, ಆಗಸ್ಟ್ 26: ಪಶ್ಚಿಮ ಚಂಪಾರಣ್ ಜಿಲ್ಲೆಯ ಬಘಾದಲ್ಲಿ ದೋಣಿ ಮುಳುಗಡೆಯಾಗಿದ್ದು, ಅವಘಡದಲ್ಲಿ 20 ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ (ಎಸ್ಡಿಆರ್ಎಫ್) ಅಧಿಕಾರಿಯ ಮಾಹಿತಿ ಪ್ರಕಾರ, ದಿಯಾರಾ ಪ್ರದೇಶದಲ್ಲಿರುವ ವಿವಿಧ ಗ್ರಾಮಗಳಿಂದ ಬಾಘಾ ನಗರದ ದೀನ್ ದಯಾಳ್ ಘಾಟ್ಗೆ ದೋಣಿಯಲ್ಲಿ 25 ಮಂದಿ ಪ್ರಯಾಣಿಸುತ್ತಿದ್ದರು.
ದೋಣಿ ಗಂಡಕ್ ನದಿಯ ಮಧ್ಯಕ್ಕೆ ತಲುಪಿದಾಗ ತೀವ್ರವಾಗಿ ಗಾಳಿ ಬೀಸಿರುವ ಪರಿಣಾಮ ಅಲೆಗಳು ಉಂಟಾಗಿ ದೋಣಿ ಮಗುಚಿದೆ. ಈ ಸಂದರ್ಭದಲ್ಲಿ 5 ಮಂದಿ ಈಜಿ ದಡ ಸೇರಿದ್ದು, ಉಳಿದ 20 ಮಂದಿ ನಾಪತ್ತೆಯಾಗಿದ್ದಾರೆ ಎಂದು ಎಸ್ಡಿಆರ್ಎಫ್ ಅಧಿಕಾರಿಗಳು ತಿಳಿಸಿದ್ದಾರೆ.

ಸದ್ಯ ನಾಪತ್ತೆಯಾಗಿರುವ ಜನರಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದು, ಡೈವರ್ಗಳ ಸಹಾಯ ಪಡೆದಿದ್ದೇವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬಿಹಾರ ಮತ್ತು ನೇಪಾಳದಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಕಳೆದ ಒಂದು ತಿಂಗಳಿನಿಂದ ಉತ್ತರ ಬಿಹಾರದ ಹಲವು ಜಿಲ್ಲೆಗಳಲ್ಲಿ ಹರಿಯುವ ಗಂಡಕ್ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಪ್ರವಾಹದಿಂದಾಗಿ ರೈಲು ಮತ್ತು ರಸ್ತೆ ಸೇರಿದಂತೆ ಹೆಚ್ಚಿನ ಸಾರಿಗೆ ವ್ಯವಸ್ಥೆಗಳನ್ನು ಸ್ಥಗಿತಗೊಳಿಸಲಾಗಿದೆ. ಹೀಗಾಗಿ ಇಲ್ಲಿನ ಜನ ದೋಣಿ ಮೂಲಕ ಸಾಗಲು ಮುಂದಾಗಿದ್ದು, ಈ ಸಂದರ್ಭದಲ್ಲಿ ಅವಘಡ ಸಂಭವಿಸಿದೆ.
At least 20 persons were reported missing in a boat mishap in Bihar's Bagha in West Champaran district on Thursday. According to an official of the state disaster response force (SDRF), 25 persons were in the boat at the time of the mishap. They were travelling from various villages located in the Diyara region to Deen Dayal Ghat in Bagha city.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 06:46 pm
HK News Desk
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm