ಬ್ರೇಕಿಂಗ್ ನ್ಯೂಸ್
31-08-21 04:13 pm Headline Karnataka News Network ದೇಶ - ವಿದೇಶ
ಸೌದಿ ಅರೇಬಿಯಾದ ಅಬಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮತ್ತೊಂದು ಡ್ರೋನ್ ದಾಳಿ ನಡೆಸಲಾಗಿದೆ. ಈ ದುರ್ಘಟನೆಯಲ್ಲಿ 8 ಜನರಿಗೆ ಗಂಭೀರ ಗಾಯಗಳಾಗಿದ್ದು, ಏರ್ಪೋರ್ಟ್ನಲ್ಲಿದ್ದ ನಾಗರಿಕ ವಿಮಾನಕ್ಕೆ ಹಾನಿಯಾಗಿದೆ.
ಅಬಾ ವಿಮಾನ ನಿಲ್ದಾಣದಲ್ಲಿ ಕಳೆದ 24 ಗಂಟೆಗಳಲ್ಲಿ ನಡೆಯುತ್ತಿರುವ ಎರಡನೇ ಡ್ರೋನ್ ದಾಳಿ ಇದಾಗಿದ್ದು, ಸೌದಿ ಅರೇಬಿಯಾದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಈ ಡ್ರೋನ್ ದಾಳಿಯ ಹಿಂದೆ ಯಾರ ಕೈವಾಡವಿದೆ ಎಂಬ ಬಗ್ಗೆ ಇನ್ನೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಯಾವ ಸಂಘಟನೆಯೂ ಬಹಿರಂಗವಾಗಿ ಇದರ ಜವಾಬ್ದಾರಿ ಹೊರದ ಕಾರಣ ಈ ಕುರಿತು ಇನ್ನಷ್ಟೇ ತನಿಖೆಯಾಗಬೇಕಾಗಿದೆ. ಈ ದುರಂತದಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ. ಸದ್ಯಕ್ಕೆ ಗಾಯಗೊಂಡಿರುವವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಇದಕ್ಕೂ ಮೊದಲು ನೈಋತ್ಯ ಯೆಮನ್ನಲ್ಲಿ ಸೌದಿ ಅರೇಬಿಯಾ ನೇತೃತ್ವದ ಮೈತ್ರಿ ಪಡೆಗಳ ಮೇಲೆ ಡ್ರೋನ್ ದಾಳಿ ನಡೆಸಲಾಗಿತ್ತು. ಈ ದುರಂತದಲ್ಲಿ ಸುಮಾರು 30 ಸೈನಿಕರು ಸಾವನ್ನಪ್ಪಿ, 60ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದರು. ಸೌದಿ ಅರೇಬಿಯಾ ನೇತೃತ್ವದ ಮೈತ್ರಿ ಪಡೆ ಹಾಗೂ ಹೌಥಿಗಳ ನಡುವಿನ ಮಾತುಕತೆ ವಿಫಲವಾದ ಬೆನ್ನಲ್ಲೇ ಡ್ರೋನ್ ದಾಳಿ ನಡೆಸಲಾಗಿತ್ತು.
2015ರಿಂದ ಯೆಮನ್ನ ಹೌಥಿ ಬಂಡಾಯಗಾರರು ಸೌದಿ ನೇತೃತ್ವದ ಸೇನಾ ಪಡೆಯ ವಿರುದ್ಧ ಸಂಘರ್ಷ ನಡೆಸುತ್ತಿದೆ. ಮುಖ್ಯವಾಗಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳನ್ನೇ ಗುರಿಯಾಗಿಸಿಕೊಂಡು ದಾಳಿ ನಡೆಸಲಾಗುತ್ತಿದ್ದು, ಇಂದು ಅಬಾ ವಿಮಾನ ನಿಲ್ದಾಣದಲ್ಲಿ ಡ್ರೋನ್ ದಾಳಿ ನಡೆದಿದೆ.
A drone attack on Saudi Arabia's Abha airport wounded eight people on Tuesday, said the Saudi-led coalition battling Huthi rebels in neighbouring Yemen.
12-09-25 03:04 pm
HK News Desk
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 05:34 pm
Mangalore Correspondent
Mangalore Police, Sudheer Reddy: ಶಾಂತಿ ಕಾಪಾಡಲ...
12-09-25 12:58 pm
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
12-09-25 05:31 pm
Udupi Correspondent
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm