ಬ್ರೇಕಿಂಗ್ ನ್ಯೂಸ್
08-09-21 01:11 pm Headline Karnataka News Network ದೇಶ - ವಿದೇಶ
ಕಾಬೂಲ್, ಸೆ. 08: ಅಫ್ಘಾನಿಸ್ತಾನದಲ್ಲಿ ನೂತನ ತಾಲಿಬಾನ್ ಸರ್ಕಾರದ ಮುಖ್ಯಸ್ಥರನ್ನಾಗಿ ಮುಲ್ಲಾ ಮೊಹಮ್ಮದ್ ಹಸನ್ ಅಖುಂದ್ ಅವರನ್ನು ನೇಮಕ ಮಾಡಲಾಗಿದೆ ಎಂದು ತಾಲಿಬಾನ್ ಘೋಷಿಸಿದೆ.
ತಾಲಿಬಾನ್ ಸಂಸ್ಥಾಪಕ ಮತ್ತು ದಿವಂಗತ ಸರ್ವೋಚ್ಚ ನಾಯಕ ಮುಲ್ಲಾ ಒಮರ್ ಅವರ ಪುತ್ರ ಮುಲ್ಲಾ ಯಾಕೂಬ್ ಅವರನ್ನು ರಕ್ಷಣಾ ಸಚಿವರನ್ನಾಗಿ ನೇಮಿಸಲಾಗಿದೆ. ಹಕ್ಕಾನಿ ನೆಟ್ವರ್ಕ್ ನಾಯಕ ಸಿರಾಜುದ್ದೀನ್ ಹಕ್ಕಾನಿಗೆ ಆಂತರಿಕ ಸಚಿವ ಸ್ಥಾನ ನೀಡಲಾಗಿದೆ ಎಂದು ಮುಜಾಹಿದ್ ಹೇಳಿದ್ದಾರೆ.
"ಕ್ಯಾಬಿನೆಟ್ ಇನ್ನೂ ಪೂರ್ಣಗೊಂಡಿಲ್ಲ, ಇದು ಕೇವಲ ಕಾರ್ಯಾರಂಭ " ಎಂದು ಮುಜಾಹಿದ್ ಕಾಬೂಲ್ನ ಸರ್ಕಾರಿ ಮಾಹಿತಿ ಮತ್ತು ಮಾಧ್ಯಮ ಕೇಂದ್ರದಲ್ಲಿ ತಿಳಿಸಿದ್ದಾರೆ. ಮುಲ್ಲಾ ಮೊಹಮ್ಮದ್ ಹಸನ್ ಅವರು ಪ್ರಸ್ತುತ 'ರೆಹಾಬ್ರಿ ಶುರಾ ' ಸಮಿತಿಯ ಮುಖ್ಯಸ್ಥರಾಗಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಅವರು ಪ್ರಸ್ತುತ ಕಂದಹಾರ್ನಲ್ಲಿದ್ದುಕೊಂಡು ವ್ಯವಹರಿಸುತ್ತಿದ್ದಾರೆ.
ಮುಲ್ಲಾ ಹಸನ್ ಸುಮಾರು 20 ವರ್ಷಗಳಿಂದ ಈ ಸ್ಥಾನದಲ್ಲಿದ್ದಾರೆ. 1996 ರಲ್ಲಿ ರಚನೆಯಾದ ತಾಲಿಬಾನ್ ಸರ್ಕಾರದಲ್ಲಿ ಅವರು ಉಪ ಪ್ರಧಾನಿ ಹಾಗೂ ವಿದೇಶಾಂಗ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು.
ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ಅನ್ನು ತಾಲಿಬಾನ್ ಉಗ್ರರು ವಶಪಡಿಸಿಕೊಂಡು ಸುಮಾರು 2 ವಾರಗಳಾಗಿವೆ. ಇದಾದ ಬಳಿಕ ಅಫ್ಘಾನ್ ಅಧ್ಯಕ್ಷ ಅಶ್ರಫ್ ಘನಿ ತಮ್ಮ ಸ್ಥಾನದಿಂದ ಕೆಳಗಿಳಿದಿದ್ದರು. ಆ. 15ರಂದು ತಾಲಿಬಾನ್ ಅಫ್ಘಾನಿಸ್ತಾನವನ್ನು ತನ್ನ ವಶಕ್ಕೆ ಪಡೆದಿತ್ತು. ಅಫ್ಘಾನಿಸ್ತಾನದಲ್ಲಿ ಮುಂದಿನ ವಾರ ನೂತನ ಸರ್ಕಾರ ರಚನೆಯಾಗಲಿದ್ದು, ತಾಲಿಬಾನ್ ಸಂಘಟನೆಯ ಪ್ರಮುಖ ನಾಯಕರಿಗೆ ಮಹತ್ವದ ಹುದ್ದೆಗಳು ಸಿಗಲಿವೆ.
ಈಗಾಗಲೇ ಸಿಕ್ಕಿರುವ ಮಾಹಿತಿಯಂತೆ ಶೇಖ್ ಹೈಬತುಲ್ಲಾ ಅಖುಂಡಜಾದ, ಮುಲ್ಲಾ ಮುಹಮ್ಮದ್ ಒಮರ್ ಅವರ ಮಗನಾದ ಮೌಲವಿ ಮುಹಮ್ಮದ್ ಯಾಕೂಬ್ ಅವರಿಗೆ ಪ್ರಮುಖ ಸ್ಥಾನಗಳನ್ನು ನೀಡಲಾಗುವುದು.
ಈ ಮೊದಲು ಮುಲ್ಲಾ ಹಿಬತುಲ್ಲಾ ಅಖುಂಡಜಾದ ಅವರನ್ನೇ ನೂತನ ಅಧ್ಯಕ್ಷರನ್ನಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿತ್ತು. ಆದರೆ, ಬಳಿಕ ಮುಲ್ಲಾ ಬರಾದಾರ್ ಹೆಸರು ಕೇಳಿಬಂದಿತ್ತು. ಇದೀಗ ಮುಲ್ಲಾ ಮೊಹಮ್ಮದ್ ಹಸನ್ ಅಕುಂದ್ ಅವರನ್ನು ಪ್ರಧಾನಿಯಾಗಿ ಘೋಷಿಸಲಾಗಿದೆ. ಅಫ್ಘಾನ್ ಸರ್ಕಾರ ಈಗಾಗಲೇ ವಿವಿಧ ರಾಜ್ಯಗಳಿಗೆ ರಾಜ್ಯಪಾಲರು, ಪೊಲೀಸ್ ಮುಖ್ಯಸ್ಥರು, ಜಿಲ್ಲಾ ಮಟ್ಟದ ಪ್ರಮುಖ ಅಧಿಕಾರಿಗಳನ್ನು ನೇಮಕ ಮಾಡಿದೆ.
ತಾಲಿಬಾನ್ ಸಹ ಸಂಸ್ಥಾಪಕ ಅಬ್ದುಲ್ ಘನಿ ಬರಾದರ್ ಅವರನ್ನು ಉಪ ಪ್ರಧಾನಿಯಾಗಿ ನೇಮಕ ಮಾಡಲಾಗಿದೆ ಎಂದು ತಾಲಿಬಾನ್ ಮುಖ್ಯ ವಕ್ತಾರ ಜಬಿಹುಲ್ಲಾ ಮುಜಾಹಿದ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
The Taliban has appointed Mohammad Hasan Akhund a close aide to the group’s late founder Mullah Omar, as head of Afghanistan’s new caretaker government, weeks after it took control of the country in a rapid offensive.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm