ಬ್ರೇಕಿಂಗ್ ನ್ಯೂಸ್
11-09-21 10:45 pm Headline Karnataka News Network ದೇಶ - ವಿದೇಶ
ಬೆಳಗಾವಿ, ಸೆ.11: ನಾನು ಕಾಂಗ್ರೆಸ್ ಪಕ್ಷ ಬಿಟ್ಟು ಬರುವುದಕ್ಕೆ ಬಿಜೆಪಿಯವರು ಹಣದ ಆಫರ್ ಕೊಟ್ಟಿದ್ದು ನಿಜ. ಎಷ್ಟು ಬೇಕಾದ್ರೂ ಕೇಳಿ ಎಂದು ನನಗೆ ಆಫರ್ ಮಾಡಿದ್ದರು. ಆದರೆ, ನಾನು ಹಣದ ಆಫರನ್ನು ನಯವಾಗಿಯೇ ತಿರಸ್ಕರಿಸಿದ್ದೆ ಎಂದು ಕಾಗವಾಡ ಶಾಸಕ ಶ್ರೀಮಂತ ಪಾಟೀಲ ಸ್ಫೋಟಕ ಹೇಳಿಕೆ ನೀಡುವ ಮೂಲಕ ತಿರುಗುಬಾಣ ಇಟ್ಟಿದ್ದಾರೆ.
ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನಾನು ಹಣದ ಆಫರ್ ಕೇಳಿದಾಗ ನಿರಾಕರಿಸಿದ್ದೆ. ಬದಲಿಗೆ, ನನಗೆ ಸೂಕ್ತ ಸ್ಥಾನಮಾನ ನೀಡಿ ಎಂದಿದ್ದೆ. ಸರಕಾರ ಬಂದ ನಂತರ ಒಳ್ಳೆಯ ಸ್ಥಾನ ಸಿಕ್ಕರೆ ಜನಸೇವೆ ಮಾಡುತ್ತೇನೆ ಎಂದು ಹೇಳಿ ಬಿಜೆಪಿ ಸೇರಿದ್ದೆ. ಆದರೆ ಯಾವ ಕಾರಣದಿಂದ ನನಗೆ ಸಚಿವ ಸ್ಥಾನ ಕೊಟ್ಟಿಲ್ಲವೋ ಗೊತ್ತಿಲ್ಲ. ಮುಂದಿನ ತಿಂಗಳು ಸಂಪುಟ ಪುನಾರಚನೆ ಆದಾಗ ಖಂಡಿತವಾಗಿಯೂ ನನಗೆ ಸಚಿವ ಸ್ಥಾನ ಸಿಗಲಿದೆ ಎಂಬ ವಿಶ್ವಾಸ ಇದೆ ಎಂದು ಹೇಳಿದ್ದಾರೆ.
ನಾನು 20 ವರ್ಷ ಒಕ್ಕಲುತನ ಮಾಡಿದ್ದೇನೆ. ಕೃಷಿ ಖಾತೆ ನೀಡಿದರೆ, ಖಂಡಿತವಾಗಿಯೂ ಉತ್ತಮವಾಗಿ ನಿರ್ವಹಿಸುತ್ತಿದ್ದೆ. ಕಳೆದ ಬಾರಿ ಜವಳಿ ಮತ್ತು ಅಲ್ಪಸಂಖ್ಯಾತ ಖಾತೆ ನೀಡಿದ್ದರು. ಅದನ್ನು ಚೆನ್ನಾಗಿಯೇ ನಿಭಾಯಿಸಿದ್ದೇನೆ. ಶೀಘ್ರದಲ್ಲೇ ಸಚಿವ ಸ್ಥಾನ ಕೊಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕೃಷಿ ಖಾತೆ ಕೊಟ್ಟರೆ ಒಳ್ಳೆಯದಾಗಿ ನಿರ್ವಹಿಸುತ್ತೇನೆ ಎಂದು ಹೇಳಿದರು.
Shrimant Patil, a former Bharatiya Janata Party (BJP) cabinet Minister in Karnataka and the party's Kagwad MLA, on Saturday said he was offered money at the time of quitting Congress by the BJP government. "But I declined the offer of money and demanded that I should be given a good position in the BJP-led government so that I can do social service," he added."It was true that I was given an offer of money. I did not take the money and asked for a good portfolio. Accordingly, I was given a cabinet berth. Now, they (BJP) have dropped me from the new cabinet. However, I have the confidence of getting a cabinet berth in the coming days," he said.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 06:46 pm
HK News Desk
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm