ಬ್ರೇಕಿಂಗ್ ನ್ಯೂಸ್
05-10-21 02:41 pm Headline Karnataka News Network ದೇಶ - ವಿದೇಶ
ಲಕ್ನೋ, ಅ.5: ಉತ್ತರ ಪ್ರದೇಶದ ಲಖೀಮ್ ಪುರ್ ಖೇರಿಯಲ್ಲಿ ನಡೆದಿರುವ ಹಿಂಸಾಚಾರ ಮತ್ತು ರೈತರ ಮೇಲೆ ಜೀಪು ಹರಿಸಿದ ಘಟನೆಯನ್ನು ಖಂಡಿಸಿರುವ ಬಿಜೆಪಿ ಸಂಸದ ವರುಣ್ ಗಾಂಧಿ, ರೈತರು ಪ್ರತಿಭಟನೆ ನಡೆಸುತ್ತಿದ್ದಾಗ ಜೀಪು ಹರಿಸಿದ ವಿಡಿಯೋವನ್ನು ಟ್ವೀಟ್ ಮಾಡಿದ್ದು, ಜೀಪು ಮಾಲೀಕ ಮತ್ತು ಅದರಲ್ಲಿದ್ದ ಎಲ್ಲರನ್ನು ಬಂಧಿಸಬೇಕೆಂದು ಆಗ್ರಹಿಸಿದ್ದಾರೆ.
ಈ ವಿಡಿಯೋ ನೋಡಿದರೆ, ಜೀಪಿನಲ್ಲಿದ್ದವರು ಉದ್ದೇಶಪೂರ್ವಕವಾಗಿ ರೈತರ ಮೇಲೆ ಹರಿಸಿದ್ದಾರೆ ಎನ್ನುವುದು ಕಂಡುಬರುತ್ತದೆ. ಪೊಲೀಸರು ಈ ವಿಡಿಯೋ ಆಧರಿಸಿ, ಪ್ರಕರಣ ದಾಖಲಿಸಬೇಕು. ಅಲ್ಲದೆ, ಈ ಜೀಪು ಯಾರ ಹೆಸರಲ್ಲಿದೆ, ಅವರನ್ನು ಮತ್ತು ಜೀಪಿನಲ್ಲಿ ಯಾರು ಕುಳಿತಿದ್ದರು ಅವರೆಲ್ಲರನ್ನೂ ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ. ಈ ಬಗ್ಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಗೆ ಪತ್ರ ಬರೆದು ಆಗ್ರಹಿಸಿದ್ದಾರೆ. ರೈತರ ಮೇಲೆ ಜೀಪು ಹರಿಸಿದ ಆರೋಪಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು. ಅಲ್ಲದೆ, ಸಂತ್ರಸ್ತ ರೈತರಿಗೆ ತಲಾ ಒಂದು ಕೋಟಿ ಪರಿಹಾರ ನೀಡಬೇಕು. ಈ ಘಟನೆ ಬಗ್ಗೆ ಸಿಬಿಐ ತನಿಖೆ ನಡೆಯಬೇಕು ಎಂದು ವರುಣ್ ಗಾಂಧಿ ಆಗ್ರಹಿಸಿದ್ದಾರೆ.
ಮಗ ಅಲ್ಲಿದ್ದ ಬಗ್ಗೆ ಒಂದೇ ಸಾಕ್ಷ್ಯ ಇದ್ದರೂ ರಾಜಿನಾಮೆ
ಇದೇ ವೇಳೆ, ರೈತರ ಮೇಲೆ ಹರಿಸಿದ ಜೀಪು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಮಗನಿಗೆ ಸೇರಿದ್ದು ಎನ್ನಲಾಗುತ್ತಿದ್ದು, ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂಬ ಆಗ್ರಹ ಕೇಳಿಬಂದಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಜಯ್ ಮಿಶ್ರಾ, ತನ್ನ ಮಗ ಆ ಜಾಗದಲ್ಲಿದ್ದ ಎನ್ನುವುದಕ್ಕೆ ಒಂದೇ ಒಂದು ಸಾಕ್ಷ್ಯ ನೀಡಿದರೂ ನಾನು ಸಚಿವ ಸ್ಥಾನಕ್ಕೇ ರಾಜಿನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ. ರೈತರ ಪ್ರತಿಭಟನೆ ವೇಳೆ ಜೀಪು ಹರಿಸಿದ ಘಟನೆಯ ಬಳಿಕ ಲಖೀಮ್ ಪುರ್ ಖೇರಿಯಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ನಾಲ್ಕು ರೈತರು ಸೇರಿ ಎಂಟು ಮಂದಿ ಮೃತಪಟ್ಟಿದ್ದಾರೆ.
ಹಿಂಸಾಚಾರ ಭುಗಿಲೆದ್ದು ಸಚಿವನ ಮಗನ ಕಾರು ರೈತರ ಮೇಲೆ ಹರಿದಿದೆ ಎನ್ನುವ ಸುದ್ದಿ ಹಬ್ಬುತ್ತಲೇ ದೇಶಾದ್ಯಂತ ಆಕ್ರೋಶ ಕೇಳಿಬಂದಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಮಗ ಆಶಿಷ್ ಮಿಶ್ರಾ, ನಾನು ಆ ಸ್ಥಳದಲ್ಲಿ ಇರಲೇ ಇಲ್ಲ. ಬನ್ವಿರ್ ಪುರದಲ್ಲಿ ಕುಸ್ತಿ ಪಂದ್ಯ ಆಯೋಜಿಸಿದ್ದು ಇಡೀ ದಿನ ಅಲ್ಲಿಯೇ ಇದ್ದೆ. ಕುಸ್ತಿ ಪಂದ್ಯಾಟಕ್ಕೆ ಡಿಸಿಎಂ ಕೇಶವ ಪ್ರಸಾದ್ ಮೌರ್ಯ ಸೇರಿ ಬಿಜೆಪಿ ನಾಯಕರನ್ನು ಕರೆತರಲು ನನ್ನ ಮಹೀಂದಾ ಥಾರ್ ಕಾರನ್ನೂ ಕಳಿಸಿದ್ದೆ. ಕಾರಿನ ಮೇಲೂ ದಾಳಿಯಾಗಿದೆ ಎಂದು ಹೇಳಿದ್ದಾರೆ.
लखीमपुर खीरी में किसानों को गाड़ियों से जानबूझकर कुचलने का यह वीडियो किसी की भी आत्मा को झखझोर देगा।
— Varun Gandhi (@varungandhi80) October 5, 2021
पुलिस इस वीडियो का संज्ञान लेकर इन गाड़ियों के मालिकों, इनमें बैठे लोगों, और इस प्रकरण में संलिप्त अन्य व्यक्तियों को चिन्हित कर तत्काल गिरफ्तार करे।
#LakhimpurKheri@dgpup pic.twitter.com/YmDZhUZ9xq
Sharing a video on Twitter, BJP MP Varun Gandhi has urged the police to immediately arrest the owners of cars that crushed farmers to death in Lakhimpur Kheri.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm