ಬ್ರೇಕಿಂಗ್ ನ್ಯೂಸ್
13-10-21 06:09 pm Headline Karnataka News Network ದೇಶ - ವಿದೇಶ
ಹೈದರಾಬಾದ್, ಅ.13: ಬ್ರಿಟಿಷರ ಮುಂದೆ ಕ್ಷಮಾದಾನ ಅರ್ಜಿ ಸಲ್ಲಿಸಲು ಸಾವರ್ಕರ್ಗೆ ಹೇಳಿದ್ದು ಮಹಾತ್ಮ ಗಾಂಧಿ ಎಂಬ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಎಐಎಂಐಎಂ ಮುಖ್ಯಸ್ಥ ಅಸಾದುದ್ಧೀನ್ ಓವೈಸಿ, ಬಿಜೆಪಿಯು ಶೀಘ್ರದಲ್ಲೇ ಸಾವರ್ಕರ್ ಅವರನ್ನು ರಾಷ್ಟ್ರಪಿತ ಎಂದು ಘೋಷಣೆ ಮಾಡುತ್ತದೆ ಎಂದು ಟೀಕಿಸಿದ್ದಾರೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿಕೆಯನ್ನು ವಿರೋಧಿಸಿ ಮಾಧ್ಯಮಕ್ಕೆ ಹೇಳಿಕೆ ನೀಡಿರುವ ಎಐಎಂಐಎಂ ಮುಖ್ಯಸ್ಥ ಅಸಾದುದ್ಧೀನ್ ಓವೈಸಿ, "ಬಿಜೆಪಿಯು ತನ್ನದೇ ಆದ, ವಿಕೃತವಾದ ಇತಿಹಾಸವನ್ನು ಪ್ರಸ್ತುತ ಪಡಿಸುತ್ತಿದೆ. ಹೀಗೆಯೇ ಮುಂದುವರಿದರೆ ಇನ್ನು ಬಿಜೆಪಿಯವರು ಶೀಘ್ರದಲ್ಲೇ, ರಾಷ್ಟ್ರಪಿತ ಮಹಾತ್ಮ ಗಾಂಧಿಯ ಬದಲಾಗಿ ಮಹಾತ್ಮ ಗಾಂಧಿಯನ್ನು ಹತ್ಯೆ ಮಾಡಿದ ಆರೋಪವನ್ನು ಹೊತ್ತಿರುವ ಸಾವರ್ಕರ್ ಹೆಸರನ್ನು ದೇಶದ ಪಿತಾಮಹ ಎಂದು ಹೇಳುತ್ತಾರೆ ಎಂದು ಓವೈಸಿ ದೂರಿದ್ದಾರೆ.
"ಹಿಂದುತ್ವದ ಐಕಾನ್ ಆದ ವೀರ ಸಾರ್ವಕರ್ ಅಂಡಮಾನ್ ಜೈಲಿನಲ್ಲಿ ಇದ್ದಾಗ ಬ್ರಿಟಿಷರಿಗೆ ಕ್ಷಮಾದಾನ ಅರ್ಜಿ ಸಲ್ಲಿಸುವಂತೆ ಸಾವರ್ಕರ್ಗೆ ಹೇಳಿದ್ದು ಮಹಾತ್ಮ ಗಾಂಧೀಜಿ," ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ಹೇಳಿದ್ದರು.
"ವೀರ ಸಾವರ್ಕರ್ : ವಿಭಜನೆಯನ್ನು ತಡೆಯಬಹುದಾಗಿದ್ದ ವ್ಯಕ್ತಿ" ಎಂಬ ಪುಸ್ತಕವನ್ನು ಉದಯ್ ಮಹೂರ್ಕರ್ ಮತ್ತು ಚಿರಾಯು ಪಂಡಿತ್ ಬರೆದಿದ್ದು ಪುಸ್ತಕವನ್ನು ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ಬಿಡುಗಡೆ ಮಾಡಿದ ಬಳಿಕ ಮಾತನಾಡಿದ್ದ ರಕ್ಷಣಾ ಸಚಿವರು, "ಸಾವರ್ಕರ್ಗೆ ಬ್ರಿಟಿಷರ ಮುಂದೆ ಕ್ಷಮಾದಾನ ಅರ್ಜಿ ಸಲ್ಲಿಸಲು ಹೇಳಿದ್ದು ಗಾಂಧೀಜಿ. ಆದರೆ ಸ್ವಾತಂತ್ರ್ಯ ಹೋರಾಟಕ್ಕೆ ಸಾವರ್ಕರ್ ನೀಡಿದ ಕೊಡುಗೆಯನ್ನು ಕೆಲವು ಸಿದ್ಧಾಂತವನ್ನು ಅನುಸರಿಸುವವರು ನಿಂದಿಸಿದ್ದಾರೆ. ಅದನ್ನು ಇನ್ನು ಮುಂದೆ ಸಹಿಸಲಾಗದು ಎಂದು ಹೇಳಿದ್ದರು. "ಸಾವರ್ಕರ್ ವಿರುದ್ಧವಾಗಿ ಹಲವಾರು ಸುಳ್ಳು ಸುದ್ದಿಗಳನ್ನು ಹರಡಲಾಗಿದೆ. ಬ್ರಿಟಿಷ್ ಸರ್ಕಾರದ ಮುಂದೆ ಸಾವರ್ಕರ್ ಎರಡು ಬಾರಿ ಕ್ಷಮಾದಾನ ಅರ್ಜಿಯನ್ನು ಸಲ್ಲಿಸಿದ್ದರು ಎಂದು ಪದೇ ಪದೇ ಹೇಳಲಾಗುತ್ತದೆ. ಆದರೆ ನಿಜವಾಗಿ ಸಾವರ್ಕರ್ ತನ್ನ ಬಿಡುಗಡೆಗಾಗಿ ಈ ಕ್ಷಮಾದಾನ ಅರ್ಜಿಯನ್ನು ಸಲ್ಲಿಸಿಲ್ಲ. ಸಾಮಾನ್ಯವಾಗಿ ಜೈಲಿನಲ್ಲಿರುವ ಕೈದಿಗಳು ಕ್ಷಮಾದಾನ ಅರ್ಜಿಯನ್ನು ಸಲ್ಲಿಕೆ ಮಾಡಬಹುದು ಎಂದು ರಕ್ಷಣಾ ಸಚಿವರು ಹೇಳಿದ್ದರು.
"ಮಹಾತ್ಮ ಗಾಂಧೀಜಿ ಅವರು ಸಾವರ್ಕರ್ ಬಳಿ ಕ್ಷಮಾದಾನ ಅರ್ಜಿ ಸಲ್ಲಿಸಲು ಹೇಳಿದ್ದರು. ಸಾವರ್ಕರ್ ಜೀ ಅನ್ನು ಬಂಧನದಿಂದ ಮುಕ್ತಗೊಳಿಸಬೇಕು ಎಂದು ಮಹಾತ್ಮ ಗಾಂಧಿ ಮನವಿ ಮಾಡಿದ್ದರು. ಗುಲಾಮಗಿರಿಯ ಸಂಕೋಲೆಯನ್ನು ಮುರಿಯಲು ಜನರಿಗೆ ಸಾವರ್ಕರ್ ಪ್ರೇರಣೆ ನೀಡಿದರು. ಸಾವರ್ಕರ್ ಮಹಿಳಾ ಹಕ್ಕುಗಳು ಸೇರಿದಂತೆ ಇತರ ಸಾಮಾಜಿಕ ಸಮಸ್ಯೆಗಳ ನಡುವೆ ಅಸ್ಪೃಶ್ಯತೆಯ ವಿರುದ್ಧ ಆಂದೋಲನ ಮಾಡಿದರು. ಆದರೆ ಸಾವರ್ಕರ್ ಅವರು ದೇಶದ ಸಾಂಸ್ಕೃತಿಕ ಏಕತೆಗಾಗಿ ನೀಡಿದ ಕೊಡುಗೆಯನ್ನು ಕಡೆಗಣಿಸಲಾಗುತ್ತಿದೆ ಎಂದು ರಕ್ಷಣಾ ಸಚಿವರು ತಿಳಿಸಿದ್ದರು.
Slamming Defence Minister Rajnath Singh over his comment that "on Mahatma Gandhi's request, Savarkar wrote mercy petitions to the British", AIMIM chief Asaduddin Owaisi on Tuesday alleged that the BJP will soon declare Vinayak Damodar Savarkar as 'the father of the nation'.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm