ಬ್ರೇಕಿಂಗ್ ನ್ಯೂಸ್
16-10-21 06:16 pm Headline Karnataka News Network ದೇಶ - ವಿದೇಶ
ಢಾಕಾ, ಅ.16: ಇಸ್ಕಾನ್ ಮಂದಿರದಲ್ಲಿ ದುರ್ಗಾ ಪೂಜೆ ನಡೆಯುತ್ತಿದ್ದಾಗ 400ಕ್ಕೂ ಹೆಚ್ಚು ಮಂದಿ ಇದ್ದ ಇಸ್ಲಾಮಿಕ್ ಗುಂಪು ದಾಳಿ ನಡೆಸಿದ್ದು, ಮಂದಿರಕ್ಕೆ ಬೆಂಕಿ ಹಚ್ಚಿ ದಾಂಧಲೆ ನಡೆಸಿದ ಘಟನೆ ಬಾಂಗ್ಲಾದೇಶದ ಚಿತ್ತಗಾಂಗ್ ವಿಭಾಗದ ನೋಖಾಲಿ ಜಿಲ್ಲೆಯಲ್ಲಿ ನಡೆದಿದೆ.
ಶುಕ್ರವಾರ ಸಂಜೆ ದಾಳಿ ಘಟನೆ ನಡೆದಿದ್ದು, ಪ್ರಕರಣದಲ್ಲಿ ನಾಲ್ಕು ಮಂದಿ ಸಾವಿಗೀಡಾಗಿದ್ದಾರೆ. ದುರ್ಗಾ ಪೂಜೆ ನಡೆಯುತ್ತಿದ್ದಾಗಲೇ ಮತಾಂಧರ ಗುಂಪು ದಾಳಿ ನಡೆಸಿ, ಬೆಂಕಿ ಹಚ್ಚಿದ್ದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಈ ಕುರಿತ ವಿಡಿಯೋಗಳು ಹರಿದಾಡಿದ್ದು, ಟ್ಟಿಟರ್ ನಲ್ಲಿ ವಿವಿಧ ರೀತಿಯ ಪ್ರತಿಕ್ರಿಯೆಗಳು ಬಂದಿವೆ.
ಇಸ್ಕಾನ್ ಸ್ಥಾಪಕ ಭಕ್ತಿವೇದಾಂತ ಸ್ವಾಮಿ ಪ್ರಭುಪಾದ ಅವರ ವಿಗ್ರಹಕ್ಕೆ ಬೆಂಕಿ ಹಚ್ಚಿ, ಸುಟ್ಟು ಹಾಕಲಾಗಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, 400-500 ಮಂದಿಯಿದ್ದ ಗುಂಪು ಹಠಾತ್ತಾಗಿ ದಾಳಿ ನಡೆಸಿದ್ದು, ಅಲ್ಲಿದ್ದ ಪೊಲೀಸರು ಜಾಗ ಬಿಟ್ಟು ಓಡಿದ್ದಾರೆ. ಬಳಿಕ ಗುಂಪು ದಾಂಧಲೆ ನಡೆಸಿದ್ದು, ಅಲ್ಲಿದ್ದ ಬೈಕ್, ಇನ್ನಿತರ ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ದುರ್ಗಾ ಪೂಜೆ ನಡೆಸುತ್ತಿದ್ದ ಜಾಗಕ್ಕೆ ಬೆಂಕಿ ಹಚ್ಚಿದ್ದಾರೆ. ಕಲ್ಲುಗಳನ್ನು ತೂರಿದ್ದಾರೆ. ಅಲ್ಲಿ ಸಿಕ್ಕಿಬಿದ್ದವರಿಗೆ ಚೂರಿಯಿಂದ ಇರಿದಿದ್ದಾರೆ.
ಘಟನೆಯಲ್ಲಿ ಹಲವಾರು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಇಸ್ಕಾನ್ ಅರ್ಚಕರನ್ನು ಹಿಂಸಿಸಿ, ಕೊಲ್ಲಲಾಗಿದೆ. ಒಬ್ಬ ಅರ್ಚಕನ ಶವ ಇಂದು ಬೆಳಗ್ಗೆ ಪರಿಸರದ ನದಿಯೊಂದರಲ್ಲಿ ಕೈ, ಕಾಲು ಕಡಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳೀಯರ ಪ್ರಕಾರ, ಶುಕ್ರವಾರ ಮಧ್ಯಾಹ್ನ ಮಸೀದಿಯಲ್ಲಿ ಸೇರಿದ್ದವರೇ ಆನಂತರ ಪ್ರಚೋದನೆಗೊಂಡು ದಾಳಿ ನಡೆಸಿದ್ದಾರೆ.
ಎರಡು ದಿನಗಳ ಹಿಂದೆ ಫೇಸ್ಬುಕ್ ನಲ್ಲಿ ಖುರಾನ್ ಬಗ್ಗೆ ಅವಹೇಳನ ನಡೆಸಿದ ಬಗ್ಗೆ ಮುಸ್ಲಿಮ್ ಸಂಘಟನೆಗಳಿಂದ ಆಕ್ರೋಶ ಕೇಳಿಬಂದಿತ್ತು. ಅಲ್ಲದೆ, ಅದೇ ವಿಚಾರ ಮುಂದಿಟ್ಟು ಪರಿಸರದಲ್ಲಿ ಗಲಭೆಯೂ ನಡೆದಿತ್ತು. ಆ ಹಿನ್ನೆಲೆಯಲ್ಲಿ ಇಸ್ಕಾನ್ ಮಂದಿರದಲ್ಲಿ ಆಯೋಜಿಸಲಾಗಿದ್ದ ದುರ್ಗಾ ಪೂಜೆಗೆ ಹೆಚ್ಚುವರಿ ಭದ್ರತೆ ನೀಡಲಾಗಿತ್ತು. ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ, ಹಿಂಸಾಚಾರದ ಹಿಂದಿರುವ ಆರೋಪಿಗಳನ್ನು ಪತ್ತೆ ಮಾಡಿ ಶಿಕ್ಷಿಸುತ್ತೇವೆ ಎಂದಿದ್ದಾರೆ.
It is with great grief that we share the news of a ISKCON member, Partha Das, who was brutally killed yesterday by a mob of over 200 people. His body was found in a pond next to the temple.
— ISKCON (@iskcon) October 16, 2021
We call on the Govt of Bangladesh for immediate action in this regard. https://t.co/BLwqGsN36h
Two Hindu men have been killed in fresh communal violence in Bangladesh, police officials said Saturday, taking the number of deaths to six from recent unrest in the Muslim-majority country. Protests began on Wednesday after footage emerged of a Quran being placed on the knee of a Hindu god during Durga Puja celebrations. The minority community make up about 10 per cent of the population.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 10:34 pm
HK News Desk
Sting News, DK Shivakumar in Mangalore: 'ಸ್ಟಿ...
15-10-26 06:46 pm
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm