ಬ್ರೇಕಿಂಗ್ ನ್ಯೂಸ್
18-10-21 11:51 am Headline Karnataka News Network ದೇಶ - ವಿದೇಶ
Photo credits : ANI News
ಸೂರತ್, ಅಕ್ಟೋಬರ್ 18: ಸೂರತ್ನ ಮಾಸ್ಕ್ ತಯಾರಿಕಾ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದು 125 ಮಂದಿಯನ್ನು ರಕ್ಷಿಸಲಾಗಿದೆ. ಗುಜರಾತ್ ರಾಜ್ಯದ ಸೂರತ್ ನಲ್ಲಿರುವ ಪ್ಯಾಕೇಜಿಂಗ್ ಕಾರ್ಖಾನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ.
ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿದುಬಂದಿದೆ. ಸೂರತ್ನ ಕಡೋದರದ ವರೇಲಿ ಎಂಬಲ್ಲಿರುವ ಕಾರ್ಖಾನೆಯಲ್ಲಿ ಇಂದು ಬೆಳಗಿನ ಜಾವ ಅಗ್ನಿ ಅವಘಡ ಸಂಭವಿಸಿದ್ದು, ಸ್ಥಳಕ್ಕಾಗಮಿಸಿರುವ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ಆರಂಭಿಸಿದ್ದು, ಈ ವರೆಗು 125 ಮಂದಿಯನ್ನು ರಕ್ಷಣೆ ಮಾಡಿದ್ದಾರೆಂದು ತಿಳಿದುಬಂದಿದೆ.
ಇಲ್ಲಿನ ಪಾಲ್ಸಾನಾ ತಾಲೂಕಿನ ವಾರೆಲಿ ಗ್ರಾಮದಲ್ಲಿರುವ ಮಾಸ್ಕ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಮೃತಪಟ್ಟು 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಫ್ಯಾಕ್ಟರಿಯಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ತಪ್ಪಿಸಿಕೊಳ್ಳಲು ಪೈಪ್ ಹಿಡಿದು ಕೆಳಗಿಳಿಯುವ ಸಾಹಸ ಮಾಡಿದ್ದು, ಈ ವೇಳೆ ಕೆಳಗೆ ಬಿದ್ದು ಇಬ್ಬರು ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ.
#WATCH Around 125 people were rescued, two died in fire at a packaging factory in Kadodara's Vareli in Surat, early morning today; Fire fighting operation underway#Gujarat pic.twitter.com/dWsjwmPTph
— ANI (@ANI) October 18, 2021
ಇಂದು ಬೆಳಗ್ಗೆ ವಾರೆಲಿ ಗ್ರಾಮದ ಮಾಸ್ಕ್ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಸುಮಾರು 200 ಕಾರ್ಮಿಕರು ಒಳಗೆ ಸಿಲುಕಿದ್ದರು. ಬೆಂಕಿಯಿಂದ ತಪ್ಪಿಸಿಕೊಳ್ಳಲು ಕಟ್ಟಡಕ್ಕೆ ಹಾಕಲಾಗಿದ್ದ ಪೈಪ್ ಹಿಡಿದು ಕೆಳಗಿಳಿಯುವಾಗ ಇಬ್ಬರು ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಹಲವರಿಗೆ ಸುಟ್ಟ ಗಾಯವಾಗಿದೆ. ವಿಷಯ ತಿಳಿದ ತಕ್ಷಣ ಅಗ್ನಿಶಾಮಕ ದಳ ಹಾಗೂ ಆ್ಯಂಬುಲೆನ್ಸ್ಗಳು ಸ್ಥಳಕ್ಕಾಗಮಿಸಿತ್ತು. ಕಾರ್ಖಾನೆಯಲ್ಲಿ ದಟ್ಟ ಹೊಗೆಯಿಂದಾಗಿ ಕಾರ್ಯಾಚರಣೆಗೂ ಅಡ್ಡಿಯಾಗಿತ್ತು. ಇತ್ತ ಅಗ್ನಿ ಅವಘಡದ ಸುದ್ದಿ ತಿಳಿಯುತ್ತಿದ್ದಂತೆ ಸೂರತ್ನ ಮೇಯರ್ ಸೇರಿದಂತೆ ಉನ್ನತ ಅಧಿಕಾರಿಗಳು ಸ್ಥಳಕ್ಕಾಗಮಿಸಿದ್ದಾರೆ. ಪ್ರಸ್ತುತ ಬೆಂಕಿ ಸಂಪೂರ್ಣ ಹತೋಟಿಗೆ ಬಂದಿದ್ದು, ಕಾರ್ಖಾನೆಯೊಳಗಿದ್ದ ಸುಮಾರು 200ಕ್ಕೂ ಹೆಚ್ಚು ಕಾರ್ಮಿಕರನ್ನು ರಕ್ಷಿಸಲಾಗಿದೆ.
ಪುಣೆಯಲ್ಲಿ ಜೂನ್ನಲ್ಲಿ ನಡೆದ ಅಗ್ನಿ ಅವಘಡದಲ್ಲಿ 17 ಮಂದಿ ಕಾರ್ಮಿಕರು ಸಾವು: ಮಹಾರಾಷ್ಟ್ರದ ಪುಣೆಯಲ್ಲಿನ ಕಾರ್ಖಾನೆಯೊಂದರಲ್ಲಿ ಜೂನ್ನಲ್ಲಿ ನಡೆದ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಟ 17 ಕಾರ್ಮಿಕರು ಸಾವನ್ನಪ್ಪಿ ಹಲವರು ನಾಪತ್ತೆಯಾಗಿದ್ದರು.
ಮೂಲಗಳ ಪ್ರಕಾರ ಪುಣೆಯ ಘೋಟ್ವಾಡೆ ಫಟಾ ಪ್ರದೇಶದಲ್ಲಿರುವ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಟ 17 ಮಂದಿ ಕಾರ್ಮಿಕರು ಸಾವನ್ನಪ್ಪಿ ಹಲವಾರು ಕಾರ್ಮಿಕರು ನಾಪತ್ತೆಯಾಗಿದ್ದರು ವಿಷಯ ತಿಳಿದ ಕೂಡಲೇ 8ಕ್ಕೂ ಹೆಚ್ಚು ಅಗ್ನಿಶಾಮಕ ದಳ ವಾಹನಗಳು ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿತ್ತು.
ಮೂಲಗಳ ಪ್ರಕಾರ ಘಟನೆ ನಡೆದ ಸಂದರ್ಭದಲ್ಲಿ ಕಾರ್ಖಾನೆಯಲ್ಲಿ 37 ಮಂದಿ ಕಾರ್ಮಿಕರು ಇದ್ದರು. ಈ ಪೈಕಿ 20 ಮಂದಿಯನ್ನು ರಕ್ಷಣೆ ಮಾಡಲಾಗಿದೆ ಎಂದು ಹೇಳಲಾಗಿದೆ.
A fire broke out in a packaging unit in Vareli in Kadodara, Surat on Monday morning. The incident took place when the workers were working on the fifth floor.
According to sources, some people allegedly jumped from the building to save their lives. "Two people have died following the incident," said Rupal Solanki, Deputy Superintendent of Police, Bardoli Division.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm