ಬ್ರೇಕಿಂಗ್ ನ್ಯೂಸ್
23-10-21 03:59 pm Headline Karnataka News Network ದೇಶ - ವಿದೇಶ
ಶ್ರೀನಗರ, ಅ.22: ಒಂದೆಡೆ ಸಾಮಾನ್ಯ ಜನರನ್ನು ಗುರಿಯಾಗಿಸಿ ಉಗ್ರರು ದಾಳಿ ನಡೆಸುತ್ತಿರುವ ಮಧ್ಯೆಯೇ ಕೇಂದ್ರ ಗೃಹ ಸಚಿವ ಅಮಿತ್ ಷಾ ಅಲ್ಲಿನ ವಸ್ತುಸ್ಥಿತಿಯನ್ನು ತಿಳಿದುಕೊಳ್ಳಲು ಜಮ್ಮು ಕಾಶ್ಮೀರಕ್ಕೆ ಆಗಮಿಸಿದ್ದಾರೆ. ಮೂರು ದಿನಗಳ ಭೇಟಿಗಾಗಿ ಆಗಮಿಸಿರುವ ಸಚಿವ ಅಮಿತ್ ಷಾ, ಭದ್ರತೆಯ ವಿಚಾರದಲ್ಲಿ ವಿವಿಧ ಇಲಾಖೆಗಳ ಪ್ರಮುಖರ ಜೊತೆ ಸಭೆ ನಡೆಸಿದ್ದಾರೆ.
ಜಮ್ಮು ಕಾಶ್ಮೀರದ 370ನೇ ವಿಧಿಯನ್ನು ರದ್ದುಗೊಳಿಸಿ ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಿದ ಬಳಿಕ ಮೊದಲ ಬಾರಿಗೆ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡುತ್ತಿರುವ ಗೃಹ ಸಚಿವ ಅಮಿತ್ ಷಾ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಇದರ ಜೊತೆಗೆ, ಅಲ್ಲಿನ ಭದ್ರತೆ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ. ಗುಪ್ತಚರ ವಿಭಾಗ, ಸಿಆರ್ ಪಿಎಫ್ ವಿಭಾಗ, ಗಡಿಭದ್ರತಾ ಪಡೆ ಮತ್ತು ಜಮ್ಮು ಕಾಶ್ಮೀರ ಪೊಲೀಸ್ ಮುಖ್ಯಸ್ಥರ ಜೊತೆ ಅಮಿತ್ ಷಾ ಶ್ರೀನಗರದಲ್ಲಿಯೇ ಮಧ್ಯಾಹ್ನ ಸಭೆ ನಡೆಸಿದ್ದಾರೆ.
ಇತ್ತೀಚೆಗೆ ಉಗ್ರರ ಗುಂಡೇಟಿಗೆ ಹತರಾಗಿರುವ ಮಖಾನ್ ಲಾಲ್ ಬಿಂದ್ರೂ, ಸುಪೀಂದರ್ ಕೌರ್ ಮತ್ತು 25 ವರ್ಷದ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಅರ್ಷದ್ ಅಹ್ಮದ್ ಮೀರ್ ಅವರ ಕುಟುಂಬಸ್ಥರನ್ನು ಗೃಹ ಸಚಿವರು ಭೇಟಿಯಾಗಲಿದ್ದಾರೆ. ಇದೇ ವೇಳೆ, ಶ್ರೀನಗರದಿಂದ ಶಾರ್ಜಾಗೆ ಮೊದಲ ಬಾರಿಗೆ ಆರಂಭಗೊಳ್ಳುತ್ತಿರುವ ನೇರ ವಿಮಾನ ಸಂಚಾರ ಕಾರ್ಯಕ್ಕೆ ಅಮಿತ್ ಷಾ ವಿಡಿಯೋ ಕಾನ್ಫೆರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ. ಅಮಿತ್ ಷಾ ಭೇಟಿ ಹಿನ್ನೆಲೆಯಲ್ಲಿ ಕಣಿವೆ ರಾಜ್ಯದಾದ್ಯಂತ ಹೆಚ್ಚುವರಿ ಭದ್ರತಾ ಪಡೆಗಳನ್ನು ನಿಯೋಜನೆ ಮಾಡಲಾಗಿದೆ.
ಅ.24ರಂದು ಅಮಿತ್ ಷಾ ಜಮ್ಮುವಿಗೆ ಭೇಟಿ ನೀಡಲಿದ್ದು, ಅಲ್ಲಿನ ಭಗ್ವತಿ ನಗರದ ಬಿಜೆಪಿ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಪುಲ್ವಾಮಾ ಜಿಲ್ಲೆಯ ಸಿಆರ್ ಪಿಎಫ್ ಗ್ರೂಪ್ ಸೆಂಟರಿಗೆ ಭೇಟಿ ನೀಡಿ, ಅಲ್ಲಿ ಪುಲ್ವಾಮಾ ದಾಳಿಯಿಂದ ಹುತಾತ್ಮರಾದ ಯೋಧರಿಗೆ ನಮನ ಸಲ್ಲಿಸಲಿದ್ದಾರೆ. 25ರಂದು ಶ್ರೀನಗರದ ಶೇರ್ ಇ ಕಾಶ್ಮೀರಿ ಅಂತಾರಾಷ್ಟ್ರೀಯ ಕನ್ವೆನ್ಶನ್ ಸೆಂಟರಿನಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅಲ್ಲಿ ವಿವಿಧ ನಾಗರಿಕ ಪ್ರತಿನಿಧಿಗಳ ನಿಯೋಗದ ಜೊತೆಗೆ ಮಾತುಕತೆ ನಡೆಸಲಿದ್ದಾರೆ.
Prolonged encounters with terrorists, the growing threat of radicalisation, the killing of civilians, and an increase in cross-border infiltration - these were the key issues discussed at a high-level meeting chaired by Home Minister Amit Shah in Jammu and Kashmir's Srinagar today.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm