ಬ್ರೇಕಿಂಗ್ ನ್ಯೂಸ್
24-10-21 09:44 pm Headline Karnataka News Network ದೇಶ - ವಿದೇಶ
ಜಮ್ಮು, ಅ.24 : ಜಮ್ಮುವಿನಲ್ಲಿ ಜನರನ್ನು ಕಡೆಗಣಿಸುವ ಕಾಲ ಮುಗಿದಿದೆ. ಈಗ ಜಮ್ಮು ಮತ್ತು ಕಾಶ್ಮೀರಗಳು ಒಟ್ಟಾಗಿ ಅಭಿವೃದ್ಧಿ ಸಾಧಿಸಲಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶವಾಗಿ ವಿಭಜಿಸಿದ ನಂತರ ಇದೇ ಮೊದಲ ಬಾರಿಗೆ ಅಮಿತ್ ಷಾ ಜಮ್ಮು ಪ್ರವಾಸ ಕೈಗೊಂಡಿದ್ದಾರೆ.
ಭಗವತಿ ನಗರ್ನಲ್ಲಿ ಆಯೋಜಿಸಿದ್ದ ಸಾರ್ವಜನಿಕ ರ್ಯಾಲಿಯಲ್ಲಿ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿಗೆ ಯಾರೊಬ್ಬರೂ ತಡೆಯೊಡ್ಡಲಾರರು. ಕೇಂದ್ರಾಡಳಿತ ಪ್ರದೇಶದಲ್ಲಿ ಈಗಾಗಲೇ ರೂ. 12,000 ಕೋಟಿ ಹೂಡಿಕೆ ಮಾಡಲಾಗಿದೆ. 2022ರ ಅಂತ್ಯದ ವೇಳೆಗೆ ಈ ರಾಜ್ಯಕ್ಕೆ ₹ 51,000 ಕೋಟಿ ನೀಡುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ ಎಂದು ಹೇಳಿದ್ದಾರೆ.
ಕಣಿವೆಯಲ್ಲಿ ಗಲಭೆ ಮತ್ತು ಉಗ್ರರ ದಾಳಿಯಿಂದ ಯಾರೊಬ್ಬರ ಜೀವಕ್ಕೂ ಅಪಾಯವಾಗದಂತೆ ನೋಡಿಕೊಳ್ಳುವುದು ಸರ್ಕಾರದ ಉದ್ದೇಶ ಎಂದಿರುವ ಅಮಿತ್ ಶಾ, ಯುವಕರು ಜಮ್ಮು ಮತ್ತು ಕಾಶ್ಮೀರದ ಅಭಿವೃದ್ಧಿಗೆ ಕೈಜೋಡಿಸಿದರೆ, ಉಗ್ರರ ದುಷ್ಟ ಸಂಚುಗಳು ವಿಫಲವಾಗಲಿವೆ ಎಂದಿದ್ದಾರೆ.
ಮೂರು ದಿನಗಳ ಭೇಟಿ ಸಲುವಾಗಿ ಅಮಿತ್ ಷಾ ಶನಿವಾರ ಜಮ್ಮು ಕಾಶ್ಮೀರ ಆಗಮಿಸಿದ್ದಾರೆ. ವಲಸೆ ಕಾರ್ಮಿಕರು ಮತ್ತು ಸ್ಥಳೀಯ ನಾಕರಿಕರನ್ನು ಗುರಿಯಾಗಿರಿಸಿ ಉಗ್ರರು ಸರಣಿ ದಾಳಿ ನಡೆಸುತ್ತಿರುವ ಹೊತ್ತಿನಲ್ಲಿ ಗೃಹ ಸಚಿವರು ಭೇಟಿ ನೀಡಿರುವುದು ಮಹತ್ವ ಪಡೆದುಕೊಂಡಿದೆ.
Amith Shah said Rs 12,000 crore worth of investment has already come to the union territory and the government aims at a total of Rs 51,000 crore by the end of 2022 to provide five lakh jobs to the local youth.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm