ಬ್ರೇಕಿಂಗ್ ನ್ಯೂಸ್
28-10-21 12:17 pm Headline Karnataka News Desk ದೇಶ - ವಿದೇಶ
ನವದೆಹಲಿ, ಅ 28: ಉತ್ತರ ಪ್ರದೇಶ ಲಖೀಂಪುರ್ ಖೇರಿಯಲ್ಲಿ ಪ್ರತಿಭಟನಾನಿರತ ರೈತರ ಮೇಲೆ ಕಾರು ಹರಿಸಿದ ಘಟನೆ ಮಾಸುವ ಮೊದಲೇ ಅಂಥದ್ದೇ ಮತ್ತೊಂದು ಘಟನೆ ಗುರುವಾರ ಹರಿಯಾಣ-ದೆಹಲಿ ಗಡಿಯಲ್ಲಿ ವರದಿಯಾಗಿದೆ.
ಕೇಂದ್ರ ಸರ್ಕಾರದ ಕೃಷಿ ಸಂಬಂಧಿತ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಯುತ್ತಿರುವ ಸ್ಥಳದಲ್ಲಿ ಆಟೋರಿಕ್ಷಾಕ್ಕಾಗಿ ಕಾದು ಕುಳಿತ ಮಹಿಳೆಯರ ಮೇಲೆ ಟ್ರಕ್ ಹರಿದುಕೊಂಡು ಹೋಗಿದೆ. ಡಿವೈಡರ್ ಮೇಲೆ ಕುಳಿತ ಮೂವರ ಮೇಲೆ ಟ್ರಕ್ ಹರಿದ ಪರಿಣಾಮ ಮೂವರು ಮಹಿಳೆಯರು ಮೃತಪಟ್ಟಿದ್ದಾರೆ. ಘಟನೆ ನಡೆದ ಸ್ಥಳದಲ್ಲೇ ಟ್ರಕ್ ಅನ್ನು ಬಿಟ್ಟು ಚಾಲಕ ಓಡಿ ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಟ್ರಕ್ ಅಪಘಾತ ಸಂಭವಿಸಿದ ಸ್ಥಳದಲ್ಲೇ ಇಬ್ಬರು ಮಹಿಳೆರು ಪ್ರಾಣ ಬಿಟ್ಟಿದ್ದರೆ, ಗಂಭೀರವಾಗಿ ಗಾಯಗೊಂಡ ಒಬ್ಬ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆ ಮಹಿಳೆಯೂ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪಂಜಾಬ್ ಮೂಲದ ಮಹಿಳೆಯರು:
ಪ್ರಾಥಮಿಕ ವರದಿಗಳ ಪ್ರಕಾರ, ಟ್ರಕ್ ಅಪಘಾತದಲ್ಲಿ ಮೃತಪಟ್ಟಿರುವ ಮಹಿಳೆಯರು ಪಂಜಾಬ್ನ ಮಾನ್ಸಾ ಜಿಲ್ಲೆಗೆ ಸೇರಿದವರು ಎಂದು ತಿಳಿದು ಬಂದಿದೆ. ಕಳೆದ ಅಕ್ಟೋಬರ್ 3ರಂದು ಉತ್ತರ ಪ್ರದೇಶದ ಲಖೀಂಪುರ್ ಖೇರಿಯಲ್ಲಿ ಪ್ರತಿಭಟನಾಕಾರ ರೈತರ ಮೇಲೆ ಕೇಂದ್ರ ಸಚಿವರ ಬೆಂಗಾವಲು ಪಡೆ ವಾಹನ ಹರಿದು ಹೋಗಿತ್ತು. ಈ ಘಟನೆಯಲ್ಲಿ ನಾಲ್ವರು ರೈತರು ಒಬ್ಬ ಪತ್ರಕರ್ತ ಸೇರಿದಂತೆ ಒಟ್ಟು ಎಂಟು ಮಂದಿ ಪ್ರಾಣ ಬಿಟ್ಟಿದ್ದರು. ಇನ್ನು ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಪುತ್ರ ಆಶಿಶ್ ಮಿಶ್ರಾರನ್ನು ಬಂಧಿಸಲಾಗಿದೆ.
ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ಹೋರಾಟ:
ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳ ವಿರುದ್ಧ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಳೆದ 2020ರ ನವೆಂಬರ್.26ರಿಂದ ನವದೆಹಲಿಯ ಸಿಂಘು ಗಡಿ, ಟಿಕ್ರಿ ಗಡಿ ಮತ್ತು ಘಾಜಿಪುರ್ ಗಡಿ ಪ್ರದೇಶಗಳಲ್ಲಿ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪಂಜಾಬ್, ಹರಿಯಾಣ, ಮತ್ತು ಉತ್ತರ ಪ್ರದೇಶದ ಸಾವಿರಾರು ರೈತರು ಕೃಷಿ ಕಾಯ್ದೆಗಳ ವಿರುದ್ಧ ಕೂಗು ಎತ್ತಿದ್ದಾರೆ.
Three women farmers died while two more were injured after a truck allegedly rammed into them on Thursday morning in Haryana’s Jhajjar district. Police said the women had been part of farmers’ protests and were waiting for an autorickshaw to return to their native village in Mansa, Punjab when the incident took place. The victims have been identified as Amarjeet Kaur, Gurmail Kaur and Harsinder Kaur.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm