ಬ್ರೇಕಿಂಗ್ ನ್ಯೂಸ್
14-11-21 10:50 pm HK News Desk ದೇಶ - ವಿದೇಶ
ಲಕ್ನೋ, ನ.14: ಉತ್ತರ ಪ್ರದೇಶದಲ್ಲಿ ಚುನಾವಣಾ ಪೂರ್ವ ಮೈತ್ರಿಯನ್ನು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ತಳ್ಳಿಹಾಕಿದ್ದಾರೆ. ಚುನಾವಣೆ ಪೂರ್ವದಲ್ಲಿ ಯಾವುದೇ ಪಕ್ಷದ ಜೊತೆ ಮೈತ್ರಿ ಮಾಡಿಕೊಳ್ಳಲ್ಲ. ಕಾಂಗ್ರೆಸ್ ಗೆಲ್ಲುವುದಿದ್ದರೆ, ತನ್ನ ಸ್ವಂತ ಬಲದಲ್ಲಿ ಗೆಲ್ಲುತ್ತದೆ ಎಂದು ಪ್ರಿಯಾಂಕಾ ಹೇಳಿದ್ದಾರೆ.
ಬುಲಂದ್ ಶಹರ್ ನಲ್ಲಿ ನಡೆದ ಕಾಂಗ್ರೆಸ್ ಪ್ರತಿಜ್ಞಾ ಸಮ್ಮೇಳನ- ಲಕ್ಷ್ಯ 2022 ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಿಯಾಂಕ ಗಾಂಧಿ, ಉತ್ತರ ಪ್ರದೇಶ ಚುನಾವಣೆಯಲ್ಲಿ ಕೇವಲ ಕಾಂಗ್ರೆಸ್ ಪಕ್ಷದವರನ್ನು ಮಾತ್ರ ಸ್ಪರ್ಧಾ ಕಣಕ್ಕೆ ಇಳಿಸಲಾಗುವುದು ಎಂದು ತಿಳಿಸಿದ್ದಾರೆ.
ಇತ್ತೀಚೆಗೆ ಸಮಾಜವಾದಿ ಪಾರ್ಟಿ ಮುಖಂಡ ಅಖಿಲೇಶ್ ಯಾದವ್ ಹೇಳಿಕೆ ನೀಡಿ, ದೊಡ್ಡ ಪಕ್ಷಗಳ ಜೊತೆ ಮೈತ್ರಿ ಮಾಡಿಕೊಂಡು ನಷ್ಟ ಮಾಡಿಕೊಂಡಿದ್ದನ್ನು ಅನುಭವಿಸಿದ್ದೇವೆ. ಹಾಗಾಗಿ ನಾವು ಸಣ್ಣ ಪಕ್ಷಗಳನ್ನು ಜೊತೆಗೂಡಿಸಿ ಚುನಾವಣೆ ಎದುರಿಸಲು ಪ್ರಯತ್ನ ಮಾಡುತ್ತಿದ್ದೇವೆ, ದೊಡ್ಡ ಪಕ್ಷಗಳ ಮೈತ್ರಿ ಮಾಡುವುದಿಲ್ಲ ಎಂದು ಪರೋಕ್ಷವಾಗಿ ಕಾಂಗ್ರೆಸ್ ಮೇಲೆ ಟಾಂಗ್ ಇಟ್ಟಿದ್ದರು.
ಅಲ್ಲದೆ, ಸಮಾಜವಾದಿ ಪಾರ್ಟಿಯು ಕಾಂಗ್ರೆಸ್ ಅಥವಾ ಬಿಎಸ್ಪಿ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಯಾವುದೇ ಇರಾದೆ ಇಟ್ಟುಕೊಂಡಿಲ್ಲ ಎಂದು ಅಖಿಲೇಶ್ ಹೇಳಿದ್ದರು. ಈಗಾಗ್ಲೇ ಕಾಂಗ್ರೆಸ್ ಉತ್ತರ ಪ್ರದೇಶದಲ್ಲಿ ಚುನಾವಣಾ ತಯಾರಿ ಮಾಡಿದ್ದು, ಈ ಬಾರಿ 40 ಶೇಕಡಾ ಸೀಟುಗಳನ್ನು ಮಹಿಳೆಯರಿಗೆ ನೀಡಲಿದ್ದೇವೆ ಎಂದು ಪ್ರಿಯಾಂಕಾ ಹೇಳಿದ್ದಾರೆ. ಈಮೂಲಕ ಅತಿ ದೊಡ್ಡ ರಾಜ್ಯದಲ್ಲಿ ಅರ್ಧ ಜನಸಂಖ್ಯೆಯ ಮೇಲೆ ಪ್ರಿಯಾಂಕಾ ನೇರ ಕಣ್ಣು ಹಾಕಿದ್ದಾರೆ.
ಲೋಕಸಭೆಯಲ್ಲಿ ನಿರ್ಣಾಯಕ ಆಗಿರುವ ಉತ್ತರ ಪ್ರದೇಶದಲ್ಲಿಯೇ ಕಾಂಗ್ರೆಸನ್ನು ಮತ್ತೆ ಗಟ್ಟಿಗೊಳಿಸಲು ಪ್ರಿಯಾಂಕಾ ಗಾಂಧಿ ಯೋಜನೆ ಹಾಕಿದ್ದಾರೆ. ಕಳೆದ ಬಾರಿಯ 2017ರ ಉತ್ತರ ಪ್ರದೇಶ ಅಸೆಂಬ್ಲಿ ಚುನಾವಣೆಯಲ್ಲಿ 403 ಸ್ಥಾನಗಳಲ್ಲಿ ಕಾಂಗ್ರೆಸ್ ಕೇವಲ ಏಳು ಸ್ಥಾನ ಗೆದ್ದಿತ್ತು.
Congress general secretary Priyanka Gandhi Vadra on Sunday ruled out any chances of a pre-poll alliance with other political parties for Uttar Pradesh assembly elections due next year. “If Congress has to win, it will win on its own," the 49-year-old said.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm