ಬ್ರೇಕಿಂಗ್ ನ್ಯೂಸ್
20-11-21 01:24 pm HK News Desk ದೇಶ - ವಿದೇಶ
ವಾಷಿಂಗ್ಟನ್: ಭಾರತ ಮೂಲದ ಕಮಲಾ ಹ್ಯಾರಿಸ್ ಅವರು ಅಮೆರಿಕದ ಅಧ್ಯಕ್ಷೆಯಾಗಿ ಅಧಿಕಾರ ಚಲಾಯಿಸುವ ಮೂಲ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಸುಮಾರು 1 ಗಂಟೆ 25 ನಿಮಿಷಗಳ ಕಾಲ ಅಧ್ಯಕ್ಷೀಯ ಅಧಿಕಾರ ಚಲಾಯಿಸುವ ಮೂಲಕ ಅಮೆರಿಕದ ಮೊದಲ ಮಹಿಳಾ ಅಧ್ಯಕ್ಷೆ ಎನ್ನುವ ಹೆಗ್ಗಳಿಕೆಗೆ ಕಮಲಾ ಪಾತ್ರರಾಗಿದ್ದಾರೆ. ಇದು ಅಮೆರಿಕದ ಇತಿಹಾಸದಲ್ಲಿಯೇ ಮೊದಲು.
ಸ್ವತಃ ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅವರೇ ತಮ್ಮ ಅಧಿಕಾರವನ್ನು ಕಮಲಾರಿಗೆ ಹಸ್ತಾಂತರಿಸಿದ್ದರು. ಅಧಿಕಾರದ ತಾತ್ಕಾಲಿಕ ಹಸ್ತಾಂತರ ಘೋಷಿಸುವ ಅಧಿಕೃತ ಪತ್ರಗಳನ್ನು ಬೆಳಗ್ಗೆ 10:10ಕ್ಕೆ ಕಳುಹಿಸಲಾಗಿದೆ. ಬಳಿಕ ಬೆಳಗ್ಗೆ 11.35ಕ್ಕೆ ಅವರು ಕೆಲಸಕ್ಕೆ ಮರಳಿದ್ದಾರೆ. ಈ ವೇಳೆ ಬಿಡೆನ್ ಅವರಿಗೆ ಅರಿವಳಿಕೆ ಔಷಧಿ ನೀಡಲಾಗಿತ್ತು ಎಂದು ಶ್ವೇತಭವನ ಅಮೆರಿಕ ಕಾಂಗ್ರೆಸ್ಗೆ ತಿಳಿಸಿದೆ.
ಅಮೆರಿಕದ ಇತಿಹಾಸದಲ್ಲಿಯೇ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ ಅತ್ಯಂತ ಹಿರಿಯ ವ್ಯಕ್ತಿ ಬಿಡೆನ್ ತಮ್ಮ 79ನೇ ಹುಟ್ಟುಹಬ್ಬದ ಮುನ್ನಾದಿನವಾದ ಶುಕ್ರವಾರದ ಆರಂಭದಲ್ಲಿ ವಾಷಿಂಗ್ಟನ್ನ ಹೊರಗಿನ ವಾಲ್ಟರ್ ರೀಡ್ ವೈದ್ಯಕೀಯ ಕೇಂದ್ರಕ್ಕೆ ತೆರಳಿದ್ದರು. ವಾರ್ಷಿಕ ತಪಾಸಣೆ ಕಾರಣ ಬಿಡೆನ್ ಆರೋಗ್ಯ ತಪಾಸಣೆ ನಡೆಸಬೇಕಿತ್ತು ಎಂದು ಶ್ವೇತಭವನ ಪ್ರಕಟಣೆಯಲ್ಲಿ ತಿಳಿಸಿದೆ.
ಕೊಲೊನೋಸ್ಕೋಪಿ ಪರೀಕ್ಷೆ ಸಮಯದಲ್ಲಿ ಬಿಡೆನ್ ಅವರಿಗೆ ಅರಿವಳಿಕೆ ಔಷಧಿ ನೀಡಲಾಗಿತ್ತು. ಹೀಗಾಗಿ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅಧ್ಯಕ್ಷೀಯ ಸ್ಥಾನದ ಅಧಿಕಾರವನ್ನು ವಹಿಸಿಕೊಳ್ಳುತ್ತಾರೆ. ಬಿಡೆನ್ ಅವರು ಕಮಲಾರಿಗೆ ಅಲ್ಪಾವಧಿಗೆ ತಮ್ಮ ಅಧಿಕಾರವನ್ನು ಹಸ್ತಾಂತರಿಸಿ ಆರೋಗ್ಯ ತಪಾಸಣೆಗೆ ತೆರಳಿದ್ದರು ಎಂದು ವರದಿಯಾಗಿದೆ.
ತಮಗೆ ಸಿಕ್ಕ ಅಲ್ಪ ಅವಧಿಯ ಅಧಿಕಾರವನ್ನು ಕಮಲಾ ಅವರು ವೆಸ್ಟ್ ವಿಂಗ್ನಲ್ಲಿರುವ ಅವರ ಕಚೇರಿಯಿಂದಲೇ ಕಾರ್ಯನಿರ್ವಹಿಸುವ ಮೂಲಕ ಚಲಾಯಿಸಿದರು ಎಂದು ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಜೆನ್ ಪ್ಸಾಕಿ ಮಾಹಿತಿ ನೀಡಿದ್ದಾರೆ. 57 ವರ್ಷದ ಕಮಲಾ ಅಮೆರಿಕದ ಉಪಾಧ್ಯಕ್ಷ ಸ್ಥಾನ ಅಲಂಕರಿಸಿದ ಮೊದಲ ಮಹಿಳೆಯಾಗಿ ಹೊಸ ಇತಿಹಾಸ ಸೃಷ್ಟಿಸಿದ್ದರು.
ಈ ಹಿಂದೆ 2002 ಹಾಗೂ 2007ರಲ್ಲಿ ಅಮೆರಿಕ ಅಧ್ಯಕ್ಷರಾಗಿದ್ದ ಜಾರ್ಜ್ ಡಬ್ಲ್ಯು ಬುಶ್ ಕೂಡ ಕೊಲನೋಸ್ಕೋಪಿ ತಪಾಸಣೆಗೆ ಒಳಗಾಗಿದ್ದರು. ಈ ವೇಳೆ ಅಧಿಕಾರವನ್ನು ಉಪಾಧ್ಯಕ್ಷರಿಗೆ ಹಸ್ತಾಂತರಿಸಿದ್ದರು. ಇದೀಗ ಬಿಡೆನ್ ಕೂಡ ಉಪಾಧ್ಯಕ್ಷೆಗೆ ಅಧಿಕಾರ ಹಸ್ತಾಂತರಿಸಿ ತಪಾಸಣೆಗೆ ಒಳಗಾಗಿದ್ದರು.
Vice President Kamala Harris held presidential powers for a total of one hour and 25 minutes while President Joe Biden was under anesthetic, the White House said Friday. The White House press office said that official letters to Congress declaring the temporary transfer of power were sent at 10:10 am (1510 GMT).
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm