ಬ್ರೇಕಿಂಗ್ ನ್ಯೂಸ್
30-07-20 12:13 pm Correspondent ದೇಶ - ವಿದೇಶ
ನವದೆಹಲಿ(ಜುಲೈ 30): ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಆರ್ಥಿಕ ಹೊರೆ ತಗ್ಗಿಸುವ ಉದ್ದೇಶದಿಂದ ಡೀಸೆಲ್ ಮೇಲೆ ಶೇ. 30ರಷ್ಟು ವ್ಯಾಟ್ ತೆರಿಗೆ ವಿಧಿಸಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈಗ ಅರ್ಧದಷ್ಟು ತಗ್ಗಿಸಿದ್ಧಾರೆ. ದೆಹಲಿಯಲ್ಲಿ ಈಗ ವ್ಯಾಟ್ ತೆರಿಗೆಯನ್ನು ಶೇ. 16.75ಕ್ಕೆ ಇಳಿಸಲಾಗಿದೆ. ಇದರಿಂದ ಡೀಸೆಲ್ ಬೆಲೆ ದೆಹಲಿಯಲ್ಲಿ ಲೀಟರ್ಗೆ 8.36 ರೂಪಾಯಿಯಷ್ಟು ಕಡಿಮೆ ಆಗಲಿದೆ.
ಲೀಟರ್ಗೆ 82 ರೂ ಇರುವ ಡೀಸೆಲ್ ಬೆಲೆ ಈಗ 73.64ಕ್ಕೆ ಇಳಿಕೆಯಾಗಲಿದೆ. ರಾಜಧಾನಿ ನಗರದ ಉದ್ಯಮಿಗಳು ಮತ್ತು ವರ್ತಕರ ಬೇಡಿಕೆ ಮೇರೆಗೆ ವ್ಯಾಟ್ ಇಳಿಕೆಯ ಈ ಕ್ರಮ ಕೈಗೊಳ್ಳಲಾಗಿದೆ. ಡೀಸೆಲ್ ಬೆಲೆ ಇಳಿಕೆಯಿಂದ ದೆಹಲಿಯ ಆರ್ಥಿಕತೆಗೆ ಪುಷ್ಟಿ ಸಿಗುತ್ತದೆ ಎಂದು ಕೇಜ್ರಿವಾಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಡೀಸೆಲ್ಗೆ ನಮ್ಮ ದೇಶದಲ್ಲಿ ಮೊದಲಿಂದಲೂ ಕಡಿಮೆ ಸುಂಕ ವಿಧಿಸಲಾಗುತ್ತಿದೆ. ಇದರಿಂದಾಗಿ ಪೆಟ್ರೋಲ್ಗಿಂತ ಡೀಸೆಲ್ ಯಾವಾಗಲೂ ಬೆಲೆ ಕಡಿಮೆಯೇ. ಆದರೆ, ಕೊರೋನಾ ಸಂಕಷ್ಟದ ಪರಿಸ್ಥಿತಿಯಲ್ಲಿ ಆರ್ಥಿಕತೆ ಸುಧಾರಿಸಲು ಮತ್ತು ಮಾಲಿನ್ಯಕಾರಕ ಡಿಸೆಲ್ಗೆ ಕಡಿವಾಣ ಹಾಕುವ ಉದ್ದೇಶದಿಂದ ದೆಹಲಿ ಸರ್ಕಾರ ಡೀಸೆಲ್ ಮೇಲೆ ವ್ಯಾಟ್ ತೆರಿಗೆಯನ್ನು ಶೇ. 30ರಷ್ಟು ಹೇರಲು ನಿರ್ಧರಿಸಿತ್ತು. ಇದರಿಂದ ಪೆಟ್ರೋಲ್ಗಿಂತ ಇಲ್ಲಿ ಡೀಸೆಲ್ ದುಬಾರಿಯಾಗಿತ್ತು. ಕಳೆದ ತಿಂಗಳು 18 ದಿನಗಳಲ್ಲಿ ಪೆಟ್ರೋಲ್ ಬೆಲೆ 8.50 ರೂ ಏರಿಕೆಯಾದರೆ, ಡೀಸೆಲ್ 10.48 ರೂ ಬೆಲೆ ಹೆಚ್ಚಳ ಕಂಡಿತ್ತು. ಇದರಿಂದ ಹಲವು ಕಡೆಗಳಿಂದ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಸಿಎಂ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಸೇರಲಾಗಿದ್ದ ಸಂಪುಟ ಸಭೆಯಲ್ಲಿ ಡೀಸೆಲ್ ಮೇಲಿನ ಮೌಲ್ಯವರ್ಧಿತ ತೆರಿಗೆ (ವ್ಯಾಟ್) ಯನ್ನು ಇಳಿಕೆ ಮಾಡುವ ನಿರ್ಧಾರಕ್ಕೆ ಬರಲಾಗಿದೆ.
ಡೀಸೆಲ್ ಮತ್ತು ಪೆಟ್ರೋಲ್ಗೆ ಕೇಂದ್ರ ಸರ್ಕಾರ ಈಗ ಸರಿಸುಮಾರು ಒಂದೇ ಮೊತ್ತದ ತೆರಿಗೆ ವಿಧಿಸುತ್ತದೆ. ಪೆಟ್ರೋಲ್ ಮೇಲೆ ಕೇಂದ್ರ ಸುಂಕ 32.98 ರೂ ಇದೆ. ಡೀಸೆಲ್ ಮೇಲೆ 31.83 ಇದೆ. ರಾಜ್ಯ ಸರ್ಕಾರಗಳೂ ಕೂಡ ವ್ಯಾಟ್ನಂಥ ತೆರಿಗೆಯನ್ನು ಹೆಚ್ಚುವರಿಯಾಗಿ ವಿಧಿಸುತ್ತವೆ. ಹೀಗಾಗಿ, ರಾಜ್ಯದಿಂದ ರಾಜ್ಯಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ವ್ಯತ್ಯಾಸ ಇರುತ್ತದೆ.
10-07-25 12:45 pm
HK News Desk
ಹರಿಪ್ರಸಾದ್ ಹೇಳಿಕೆಗೆ ಬಿಜೆಪಿ ಕೆಂಡಾಮಂಡಲ ; ಅರ್ಧ ನ...
09-07-25 10:45 pm
Chamarajanagar Heart Attack, Student; 'ಹೃದಯ"ಕ...
09-07-25 04:12 pm
ಬೆಂಗಳೂರಿನಲ್ಲಿ ಐದು ಕಡೆ ಎನ್ಐಎ ದಾಳಿ ; ಭಯೋತ್ಪಾದಕ...
09-07-25 01:53 pm
Heart attack, Dharwad, Davanagere: ಉದ್ಯಮಿ ಮಗನ...
09-07-25 11:50 am
10-07-25 03:24 pm
HK News Desk
Amit Shah; ರಾಜಕೀಯ ನಿವೃತ್ತಿ ಬಳಿಕ ವೇದ, ಉಪನಿಷತ್...
10-07-25 01:00 pm
ಗೋಮಾಂಸ ತಿನ್ನಿಸಿ ಮತಾಂತರಕ್ಕೆ ಯತ್ನ ; ಫೇಸ್ಬುಕ್ಕಲ್...
07-07-25 08:45 pm
ಅಮೆರಿಕದ ಟೆಕ್ಸಾಸ್ನಲ್ಲಿ ಭೀಕರ ಪ್ರವಾಹ ; 28 ಮಕ್ಕಳ...
07-07-25 04:11 pm
ಟೆಕ್ಸಾಸ್ ನಲ್ಲಿ ದಿಢೀರ್ ಪ್ರವಾಹ ; 27 ಮಂದಿ ಸಾವು,...
06-07-25 03:53 pm
10-07-25 04:01 pm
Mangalore Correspondent
ಮಂಗಳೂರಿನ ಟೈಲರಿಂಗ್ ಶಾಪಲ್ಲೇ ಕುಸಿದು ಬಿದ್ದಿದ್ದ ನವ...
09-07-25 10:25 pm
Mangalore Home Minister Parameshwara, Peace M...
09-07-25 10:17 pm
Peace Meeting, Mangalore, Brijesh Chowta, Ash...
09-07-25 09:01 pm
Mangalore Peace meeting Home Minister: ಎಳೆಯ ಮ...
09-07-25 07:37 pm
10-07-25 01:05 pm
HK News Desk
Double Murder Hassan, crime: ಆಸ್ತಿ ವಿಚಾರಕ್ಕೆ...
10-07-25 12:04 pm
Drugs News, Mangalore: ಮಂಗಳೂರಿಗೆ ಡ್ರಗ್ಸ್ ಪೂರೈ...
09-07-25 10:56 pm
Kerala Chit Fund, Fraud, Mangalore: 20 ವರ್ಷಗಳ...
08-07-25 10:01 pm
Mangalore, Job Fraud, Crime: ಪಾರ್ಟ್ ಟೈಮ್ ಕೆಲಸ...
07-07-25 10:31 pm