ಬ್ರೇಕಿಂಗ್ ನ್ಯೂಸ್
13-09-20 09:28 am Headline Karnataka News Network ದೇಶ - ವಿದೇಶ
ಮಂಗಳೂರು, ಸೆಪ್ಟೆಂಬರ್.13: ಲಾಕ್ ಡೌನ್ ನಿಂದಾಗಿ ಸ್ಥಗಿತಗೊಂಡಿದ್ದ ದಕ್ಷಿಣ ಕನ್ನಡ ಹಾಗು ಕಾಸರಗೋಡು ಬಸ್ ಸಂಚಾರಕ್ಕೆ ಈಗ ಮತ್ತೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಕಳೆದ ಸುಮಾರು ಆರು ತಿಂಗಳ ಬಳಿಕ ಕಾಸರಗೋಡು - ಮಂಗಳೂರು ನಡುವೆ ಅಂತಾರಾಜ್ಯ ಬಸ್ ಸಂಚಾರವನ್ನು ಸೆ.21ರಿಂದ ಆರಂಭಿಸಲು ಕಾಸರಗೋಡು ಜಿಲ್ಲಾಡಳಿತ ನಿರ್ಧರಿಸಿದೆ.
ಅಂತಾರಾಜ್ಯ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದ್ದು, ಎರಡೂ ಜಿಲ್ಲೆಯ ಜನತೆ ನಿಟ್ಟುಸಿರು ಬಿಡುವಂತಾಗಿದೆ.
ಕೇರಳದಿಂದ ಮಂಗಳೂರಿಗೆ ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದು ಕಾಸರಗೋಡು ಜಿಲ್ಲಾಡಳಿತ. ಆದರೆ ಇತ್ತ ಕರ್ನಾಟಕ ಕೆ ಎಸ್ ಆರ್ ಟಿ ಸಿ ಈ ಬಗ್ಗೆ ಇನ್ನೂ ನಿರ್ಧಾರ ಪ್ರಕಟಿಸಿಲ್ಲ. ಇನ್ನೂ ಹತ್ತು ದಿನಗಳ ಕಾಲಾವಕಾಶ ಇರುವುದರಿಂದ ಸಂಚಾರಕ್ಕೆ ಅನುಮತಿ ಸಿಗುವ ಸಾಧ್ಯತೆಯೂ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ಮಂಗಳೂರಿನಿಂದ ಕಾಸರಗೋಡಿಗೆ ಬಸ್ ಸಂಚಾರ ಆರಂಭಿಸಲು ಇನ್ನೂ ಅನುಮತಿ ಸಿಕ್ಕಿಲ್ಲ. ಈ ಬಗ್ಗೆ ಸೋಮವಾರ ಮೇಲಧಿಕಾರಿಗಳ ಬಳಿ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಕೆ ಎಸ್ ಆರ್ ಟಿ ಸಿ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.
ಸೆ.21ರಂದು ಸಂಚಾರ ಆರಂಭಿಸಲಿರುವ ಕೇರಳ ಬಸ್ನಲ್ಲಿ ತಲಾ 40 ಪ್ರಯಾಣಿಕರಿಗೆ ಮಾತ್ರ ಸಂಚಾರಕ್ಕೆ ಅವಕಾಶ ಸಿಗಲಿದೆ. ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಈ ಬಸ್ಗಳು ಸಂಚರಿಸಲಿವೆ ಎಂಬ ಮಾಹಿತಿ ಲಭ್ಯವಾಗಿದೆ.
ಮೊದಲ ಹಂತದಲ್ಲಿ ಕಾಸರಗೋಡು - ಮಂಗಳೂರು, ಕಾಸರಗೋಡು - ಪಂಜಿಕಲ್ಲು ರೂಟ್ನಲ್ಲಿ ಮಾತ್ರವೇ ಬಸ್ ಸಂಚಾರ ನಡೆಸಲಿವೆ. ಬಸ್ ಸಂಚಾರದ ಆದೇಶ ಮತ್ತು ಮಾರ್ಗಸೂಚಿಯನ್ನು ಇನ್ನಷ್ಟೇ ಕೇರಳ ಸರಕಾರ ಬಿಡುಗಡೆಗೊಳಿಸಬೇಕಿದೆ.
ಲಾಕ್ಡೌನ್ ಅವಧಿಯಲ್ಲಿ ಉಭಯ ಜಿಲ್ಲೆಗಳು ತಮ್ಮ ಗಡಿಗಳನ್ನು ಬಂದ್ಗೊಳಿಸಿದ್ದವು. ಈ ನಡುವೆ ಎರಡೂ ಜಿಲ್ಲಾಡಳಿತಗಳ ನಡುವೆ ಸಂವಹನ ಕೊರತೆಯಿಂದ ಅನೇಕ ನಿರ್ಧಾರಗಳಲ್ಲಿ ವ್ಯತಿರಿಕ್ತತೆ ಕಂಡುಬಂದಿತ್ತು. ಇತ್ತೀಚೆಗೆ ನಾಲ್ಕು ಗಡಿ ರಸ್ತೆಗಳನ್ನು ತೆರವುಗೊಳಿಸುವಂತೆ ಕೇರಳ ಹೈಕೋರ್ಟ್ ನಿರ್ದೇಶನ ನೀಡಿದ ಬಳಿಕ ಸಂಚಾರ ಸ್ವಲ್ಪ ಮಟ್ಟಿಗೆ ಮುಕ್ತವಾಗಿದೆ. ಆದರೆ ಕೆ ಎಸ್ ಆರ್ ಟಿ ಸಿ ಮಾತ್ರ ಸಂಚಾರ ಆರಂಭಿಸಿರಲಿಲ್ಲ
14-10-26 10:35 am
HK News Staffer
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
14-10-26 10:57 am
HK News Staffer
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm