ಬ್ರೇಕಿಂಗ್ ನ್ಯೂಸ್
14-09-20 01:51 pm Headline Karnataka News Network ದೇಶ - ವಿದೇಶ
ನವದೆಹಲಿ, ಸೆಪ್ಟೆಂಬರ್ 14: ಸುಪ್ರೀಂ ಕೋರ್ಟ್ ವಿಧಿಸಿದ್ದ 1 ರೂ. ದಂಡವನ್ನು ವಕೀಲ, ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಭೂಷಣ್ ಅವರು ಸೋಮವಾರ ಪಾವತಿಸಿದರು.
'ದಂಡ ಪಾವತಿಸಿದ ಮಾತ್ರಕ್ಕೆ ಕೋರ್ಟ್ ಆದೇಶವನ್ನು ಒಪ್ಪಿದ್ದೇನು ಎಂದು ಅರ್ಥವಲ್ಲ' ಎಂದು ಪ್ರತಿಕ್ರಿಯಿಸಿದ್ದಾರೆ. ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಮರುಪರಿಶೀಲನೆಗೆ ಒಳಪಡಿಸಲು ಅರ್ಜಿ ಸಲ್ಲಿಸುತ್ತಿದ್ದೇನೆ ಎಂದು ಪ್ರಶಾಂತ್ ಭೂಷಣ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತ ತಿಳಿಸಿದ್ದಾರೆ.
ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಭೂಷಣ್ ಅವರನ್ನು ತಪ್ಪಿತಸ್ಥ ಎಂದು ಘೋಷಿಸಿದ್ದ ಸುಪ್ರೀಂ ಕೋರ್ಟ್, ಒಂದು ರೂಪಾಯಿ ದಂಡ ವಿಧಿಸಿತ್ತು. ಸೆ.15ರ ಒಳಗಾಗಿ ದಂಡ ಪಾವತಿಸುವಂತೆ ಸೂಚಿಸಿತ್ತು. ಒಂದು ರೂಪಾಯಿ ದಂಡ ವಿಧಿಸಿದ ನ್ಯಾಯಾಂಗ ನಿಂದನೆ ಕ್ರಿಮಿನಲ್ ಪ್ರಕರಣವನ್ನು ಬೇರೊಂದು ವಿಸ್ತೃತ ಪೀಠದಲ್ಲಿ ಪ್ರಶ್ನಿಸುವ ಅಧಿಕಾರ ನೀಡುವಂತೆ ಕೋರಿ ಶನಿವಾರ ಸುಪ್ರೀಂ ಕೋರ್ಟ್ಗೆ ಮನವಿ ಮಾಡಿದ್ದಾರೆ.
ಸುಪ್ರೀಂಕೋರ್ಟ್ ಹಾಗೂ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಕಚೇರಿಯ ಘನತೆಗೆ ಚ್ಯುತಿ ತರುವಂತಹ ಟ್ವೀಟ್ ಮಾಡಿದ್ದ ಪ್ರಕರಣದಲ್ಲಿ ಪ್ರಶಾಂತ್ ತಪ್ಪಿತಸ್ಥರು ಎಂದು ಆಗಸ್ಟ್ 14ರಂದು ಸುಪ್ರೀಂಕೋರ್ಟ್ ಆದೇಶಿಸಿತ್ತು. ಅವರು ಮಾಡಿದ್ದ ಎರಡು ಟ್ವೀಟ್ಗಳು ಕ್ರಿಮಿನಲ್ ನ್ಯಾಯಾಂಗ ನಿಂದನೆಗೆ ಸಮ ಎಂದು ಸುಪ್ರೀಂ ಕೋರ್ಟ್ನ ತ್ರಿಸದಸ್ಯ ಪೀಠವು ಹೇಳಿತ್ತು. ನ್ಯಾಯಾಂಗ ನಿಂದನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕ್ಷಮೆಯಾಚಿಸಲು ಪ್ರಶಾಂತ್ ಭೂಷಣ್ ನಿರಾಕರಿಸಿದ್ದರು. ಜೂನ್ 27 ಹಾಗೂ 29ರಂದು ಅವರು ಟ್ವೀಟ್ ಮಾಡಿದ್ದರು.
14-10-26 10:35 am
HK News Staffer
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
14-10-26 10:57 am
HK News Staffer
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
13-10-26 11:10 pm
HK News Desk
Mangalore News: ಬ್ರಿಟಿಷ್ ಕಾಲದ 'ಸೌತ್ ಕೆನರಾ' ಬದ...
13-10-26 10:28 pm
Agnes Colllege Protest, Vedavyas Kamath: ಮಹಿಳ...
13-10-26 08:41 pm
Agnes College Protest, MLA Bharath Shetty: ವಿ...
13-10-26 07:50 pm
Sullia News: ಸುಳ್ಯ ; ತಡರಾತ್ರಿ ಮೀನು ಹಿಡಿಯಲು ಹ...
13-10-26 02:54 pm
14-10-26 12:23 pm
HK News Staffer
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm
ಮುಂಬೈ ಎಟಿಎಸ್ ಅಧಿಕಾರಿಗಳೆಂದು ಪರಿಚಯಿಸಿ ಪುತ್ತೂರಿನ...
12-10-26 10:36 pm
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm