ಬ್ರೇಕಿಂಗ್ ನ್ಯೂಸ್
29-12-21 11:05 am HK Desk news ದೇಶ - ವಿದೇಶ
ಖರ್ಟೌಮ್, ಡಿ 29: ಚಿನ್ನದ ಗಣಿಯಲ್ಲಿ ಕುಸಿತ ಸಂಭವಿಸಿದ ಪರಿಣಾಮ ಕನಿಷ್ಠ 38 ಮಂದಿ ಸಾವಿಗೀಡಾಗಿರುವ ಘಟನೆ ದಕ್ಷಿಣ ಸುಡಾನ್‌ನ ಪಶ್ಚಿಮ ಕೊರ್ಡೋಫಾನ್ ರಾಜ್ಯದಲ್ಲಿ ನಡೆದಿದೆ. ಈ ಕುರಿತಂತೆ ಸರ್ಕಾರಿ ಸ್ವಾಮ್ಯದ ಕಂಪನಿಯು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ.
ಉಮ್ ಡ್ರೈಸಾಯಾ ಗಣಿಯಲ್ಲಿ ಕುಸಿತದ ಪರಿಣಾಮವಾಗಿ ಸಾವಿಗೀಡಾದ 38 ಗಣಿ ಕಾರ್ಮಿಕರಿಗೆ ಸುಡಾನ್‌ನ ಮಿನರಲ್ ರಿಸೋರ್ಸಸ್ ಕಂಪನಿ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೆಶಕ ಸಂತಾಪ ವ್ಯಕ್ತಪಡಿಸಿದ್ದಾರೆ’ ಎಂದು ಮಂಗಳವಾರ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಕುಸಿದಿರುವ ಚಿನ್ನದ ಗಣಿಯು ಪಶ್ಚಿಮ ಕೊರ್ಡೋಫಾನ್ ರಾಜ್ಯದ ಎಲ್ ನುಹುದ್ ಪಟ್ಟಣದ ಸಮೀಪದಲ್ಲಿದೆ. ಸುಡಾನ್‌ನ ರಾಜಧಾನಿ ಖಾರ್ಟೂಮ್‌ನ ಪಶ್ಚಿಮಕ್ಕೆ ಸುಮಾರು 500 ಕಿಮೀ ದೂರದಲ್ಲಿದೆ.
ಈ ಪ್ರದೇಶವು ಗಣಿಗಾರಿಕೆಗೆ ಸೂಕ್ತವಲ್ಲ ಎಂದು ಕೊರ್ಡೋಫಾನ್ ರಾಜ್ಯ ಸರ್ಕಾರ ಮತ್ತು ರಾಜ್ಯದ ಭದ್ರತಾ ಸಮಿತಿಯು ನಿರ್ಧಾರಕ್ಕೆ ಬಂದಿದ್ದು, ಗಣಿಗಾರಿಕೆಯನ್ನು ಮುಚ್ಚಲು ನಿರ್ಧರಿಸಲಾಗಿತ್ತು. ಆದರೆ, ಸರ್ಕಾರದ ನಿರ್ಧಾರದ ಹೊರತಾಗಿಯೂ ಗಣಿಗಾರರು ಮತ್ತೆ ಗಣಿಗಾರಿಕೆಗೆ ನುಸುಳಿ ಕೆಲಸ ಮಾಡುತ್ತಿದ್ದರು ಎಂದು ಅದು ಹೇಳಿದೆ.
ರೆಡ್ ಸೀ, ನಹ್ರ್ ಅಲ್-ನೀಲ್, ದಕ್ಷಿಣ ಕೊರ್ಡೋಫಾನ್, ಪಶ್ಚಿಮ ಕೊರ್ಡೋಫಾನ್ ಮತ್ತು ಉತ್ತರದ ರಾಜ್ಯಗಳು ಸೇರಿದಂತೆ ಸುಡಾನ್‌ನಾದ್ಯಂತ ಸಾಂಪ್ರದಾಯಿಕ ಗಣಿಗಾರಿಕೆ ಉದ್ಯಮದಲ್ಲಿ ಸುಮಾರು 20 ಲಕ್ಷ ಉದ್ಯೋಗಿಗಳು ಕೆಲಸ ಮಾಡುತ್ತಿದ್ದಾರೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಅಧಿಕೃತ ಅಂಕಿ ಅಂಶಗಳ ಪ್ರಕಾರ, ಸಾಂಪ್ರದಾಯಿಕ ಗಣಿಗಾರಿಕೆಯು ಸುಡಾನ್‌ನಲ್ಲಿನ ಒಟ್ಟು ಚಿನ್ನದ ಉತ್ಪಾದನೆಯಲ್ಲಿ ಸುಮಾರು ಶೇಕಡ 75ರಷ್ಟು ಕೊಡುಗೆ ನೀಡುತ್ತದೆ, ಇದು ವರ್ಷಕ್ಕೆ 93 ಟನ್‌ಗಳನ್ನು ಮೀರುತ್ತದೆ.
Sudanese authorities said at least 38 people were killed Tuesday when a gold mine collapsed in West Kordofan province. The country's state-run mining company said in a statement the collapse of the closed, non-functioning mine took place in the village of Fuja 700 kilometers (435 miles) south of the capital of Khartoum. It said there were also injuries without giving a specific tally
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 07:26 pm
HK News Desk
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am