ಬ್ರೇಕಿಂಗ್ ನ್ಯೂಸ್
01-01-22 01:16 pm HK Desk news ದೇಶ - ವಿದೇಶ
ಶ್ರೀನಗರ, ಜ.1 : ಉತ್ತರ ಭಾರತದ ಪ್ರಸಿದ್ಧ ಯಾತ್ರಾಸ್ಥಳ ಜಮ್ಮು ಕಾಶ್ಮೀರದ ಮಾತಾ ವೈಷ್ಣೋದೇವಿ ಮಂದಿರದಲ್ಲಿ ಭಕ್ತರ ನಡುವೆ ಕಾಲ್ತುಳಿತ ನಡೆದಿದ್ದು, 12 ಮಂದಿ ಯಾತ್ರಿಗಳು ಸಾವಿಗೀಡಾಗಿದ್ದಾರೆ. 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಶುಕ್ರವಾರ ಮಧ್ಯರಾತ್ರಿ ನಡೆದಿದೆ.
ಹೊಸ ವರ್ಷ ಹಿನ್ನೆಲೆಯಲ್ಲಿ ವೈಷ್ಣೋದೇವಿ ಮಂದಿರದಲ್ಲಿ ಭಕ್ತರ ಸಂಖ್ಯೆ ಹೆಚ್ಚಿತ್ತು. ಆದರೆ ತಡರಾತ್ರಿ 2 ಗಂಟೆ ಸುಮಾರಿಗೆ ಜನದಟ್ಟಣೆಯ ನಡುವೆ ಭಾರೀ ಕಾಲ್ತುಳಿತ ನಡೆದಿದೆ. ಜನರ ನಡುವೆ ವಾಗ್ಯುದ್ಧ ನಡೆದು ತಳ್ಳಾಟ ಆಗಿದ್ದು ಆನಂತರ ಕಾಲ್ತುಳಿತ ನಡೆದಿದೆ ಎಂದು ಜಮ್ಮು ಕಾಶ್ಮೀರ ಡಿಜಿಪಿ ದಿಲ್ ಭಾಗ್ ಸಿಂಗ್ ತಿಳಿಸಿದ್ದಾರೆ. ಮೃತ 12 ಮಂದಿಯಲ್ಲಿ ಎಂಟು ಮಂದಿಯ ಗುರುತು ಪತ್ತೆಯಾಗಿದೆ. ಪಂಜಾಬ್, ಹರ್ಯಾಣ, ದೆಹಲಿ ಮತ್ತು ಜಮ್ಮು ಕಾಶ್ಮೀರದ ಒಬ್ಬ ವ್ಯಕ್ತಿ ಮೃತರು.
ಘಟನೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕಂಬನಿ ಮಿಡಿದಿದ್ದಾರೆ. ಅಲ್ಲದೆ, ಮೃತರಿಗೆ ಕೇಂದ್ರ ಸರಕಾರದ ವತಿಯಿಂದ ತಲಾ ಎರಡು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಇದೇ ವೇಳೆ, ಜಮ್ಮು ಕಾಶ್ಮೀರ ಸರಕಾರದಿಂದ ಮೃತರ ಕುಟುಂಬಗಳಿಗೆ ತಲಾ ಹತ್ತು ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ಅಲ್ಲದೆ, ಗಾಯಾಳುಗಳಿಗೆ ತಲಾ ಎರಡು ಲಕ್ಷ ಪರಿಹಾರ ನೀಡುವುದಾಗಿ ಹೇಳಿದೆ. ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸಲು ಗವರ್ನರ್ ಮನೋಜ್ ಸಿನ್ಹಾ ಆದೇಶ ಮಾಡಿದ್ದಾರೆ. ತನಿಖೆಗೆ ಮುಖ್ಯ ಕಾರ್ಯದರ್ಶಿ ಮತ್ತು ಜಮ್ಮು ವಿಭಾಗದ ಎಡಿಜಿಪಿ ನೇತೃತ್ವದಲ್ಲಿ ಉನ್ನತ ಮಟ್ಟದ ತನಿಖಾ ತಂಡವನ್ನು ರಚಿಸಿದ್ದಾರೆ.
At least 12 were killed in a stampede at Mata Vaishno Devi shrine in Jammu & Kashmir on Saturday. Stampede triggered by a massive rush of devotees, officials said.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
19-04-26 10:41 pm
HK News Staffer
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
19-04-26 10:23 pm
HK News Staffer
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm
ಅಂಬ್ಲಮೊಗರು ; ಸ್ನೇಹಿತರೊಂದಿಗೆ ಕೆರೆ ನೀರಲ್ಲಿ ಆಟವಾ...
19-04-26 10:20 am
ಹೇಯ್ ಮಟನ್ ಸರಿಯಾಗಿ ಬೆಂದಿಲ್ಲ ಎಂದು ಸ್ನೇಹಿತನ ಮುಂದ...
18-04-26 10:37 pm