ಬ್ರೇಕಿಂಗ್ ನ್ಯೂಸ್
04-01-22 12:29 pm HK Desk news ದೇಶ - ವಿದೇಶ
ಪಣಜಿ, ಜ.4 : ಹೊಸ ವರ್ಷದ ಪಾರ್ಟಿ ಇನ್ನಿತರ ಕಾರ್ಯಕ್ರಮಗಳಿಗೆ ಅವಕಾಶ ನೀಡಿದ್ದ ಬೆನ್ನಲ್ಲೇ ಗೋವಾದಲ್ಲಿ ದಿಢೀರ್ ಆಗಿ ಕೋವಿಡ್ ಪ್ರಕರಣಗಳು ವಿಪರೀತ ಹೆಚ್ಚಿದ್ದು ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜೊತೆಗೆ ನೈಟ್ ಕರ್ಫ್ಯೂ ವಿಧಿಸಲಾಗಿದೆ.
ಗೋವಾದಲ್ಲಿ ಸೋಮವಾರ 388 ಕೋವಿಡ್ ಪ್ರಕರಣ ದಾಖಲಾಗಿದೆ. ರಾಜ್ಯದ ಸಕ್ರಿಯ ಪ್ರಕರಣಗಳ ಸಂಖ್ಯೆ 1,671ಕ್ಕೆ ಏರಿಕೆಯಾಗಿದ್ದು ಈ ಹಿನ್ನೆಲೆಯಲ್ಲಿ ರಾಜ್ಯ ಕೋವಿಡ್ ಟಾಸ್ಕ್ ಫೋರ್ಸ್ ತುರ್ತು ಸಭೆ ನಡೆಸಿ ಹೊಸ ನಿರ್ಬಂಧಗಳನ್ನು ಹಾಕಿದೆ.
ರಾಜ್ಯದಲ್ಲಿ ನೈಟ್ ಕರ್ಫ್ಯೂ ಸೇರಿ ಶಾಲೆ, ಕಾಲೇಜುಗಳಿಗೆ ಭೌತಿಕ ತರಗತಿಯನ್ನು ರದ್ದು ಪಡಿಸಲಾಗಿದೆ. ಸದ್ಯಕ್ಕೆ ಜನವರಿ 26ರ ತನಕ ನಿರ್ಬಂಧಗಳನ್ನು ಜಾರಿಗೊಳಿಸಲಾಗಿದೆ. ಒಂದರಿಂದ 9ನೇ ತರಗತಿ ಮಕ್ಕಳಿಗೆ ಭೌತಿಕ ತರಗತಿಗಳನ್ನು ಜನವರಿ 26ರ ತನಕ ರದ್ದುಗೊಳಿಸಲಾಗಿದೆ. 10 ರಿಂದ 12ನೇ ತರಗತಿಯ ಮಕ್ಕಳು ಕೋವಿಡ್ ಲಸಿಕೆ ಪಡೆಯಲು ಮಾತ್ರ ಆಗಮಿಸಲಿದ್ದಾರೆ.
ಸಭೆಯ ಬಳಿಕ ಮಾತನಾಡಿದ ಕೋವಿಡ್ ಟಾಸ್ಕ್ ಫೋರ್ಸ್ ಸದಸ್ಯ ಶೇಖರ್ ಸಲ್ಕಾರ್, "ಜನವರಿ 26ರಂದು ಕೋವಿಡ್ ಟಾಸ್ಕ್ ಫೋರ್ಸ್ ಮತ್ತೆ ಸಭೆ ನಡೆಸಲಿದೆ. ಪರಿಸ್ಥಿತಿ ನೋಡಿಕೊಂಡು ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ" ಎಂದು ಹೇಳಿದ್ದಾರೆ. "ಗೋವಾ ಜನರ ಆರೋಗ್ಯ, ಗೋವಾಕ್ಕೆ ಆಗಮಿಸುವ ಪ್ರವಾಸಿಗರ ಆರೋಗ್ಯವೂ ನಮಗೆ ಮುಖ್ಯ. ಆದ್ದರಿಂದ ಕೆಲವು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ" ಎಂದು ರಾಜ್ಯದ ಆರೋಗ್ಯ ಸಚಿವ ವಿಶ್ವಜಿತ್ ರಾಣೆ ಪ್ರತಿಕ್ರಿಯೆ ನೀಡಿದ್ದಾರೆ.
ಡಿಸೆಂಬರ್ ತಿಂಗಳಿನಲ್ಲಿ ಹೊಸ ವರ್ಷ ಮತ್ತು ಕ್ರಿಸ್ ಮಸ್ ಸಂದರ್ಭದಲ್ಲಿ ಗೋವಾಕ್ಕೆ ಹೆಚ್ಚು ಪ್ರವಾಸಿಗರು ಆಗಮಿಸಿದ್ದರು. ದೇಶದ ಬಹುತೇಕ ನಗರಗಳಲ್ಲಿ ನಿಷೇಧ ವಿಧಿಸಿದ್ದರೂ, ಗೋವಾದಲ್ಲಿ ಮಾತ್ರ ಡಿಸೆಂಬರ್ 31ರಂದು ಪಾರ್ಟಿ, ಸಮಾರಂಭಗಳನ್ನು ನಡೆಸಲು ರಾಜ್ಯ ಸರ್ಕಾರ ಷರತ್ತುಬದ್ಧ ಅನುಮತಿ ನೀಡಿತ್ತು. ಇದರಿಂದಾಗಿ ಮಹಾರಾಷ್ಟ್ರ, ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ನೈಟ್ ಕರ್ಫ್ಯೂ ಸೇರಿದಂತೆ ಹೊಸ ವರ್ಷದ ಸಂಭ್ರಮಾಚರಣೆಗೆ ನಿರ್ಬಂಧವಿದ್ದ ಕಾರಣ ಸಾವಿರಾರು ಮಂದಿ ದೆಹಲಿ, ಮುಂಬೈ, ಬೆಂಗಳೂರು, ಮಂಗಳೂರಿನಿಂದ ಗೋವಾಕ್ಕೆ ತೆರಳಿದ್ದರು.
ಇದಲ್ಲದೆ, ಗೋವಾದಲ್ಲಿ ಇನ್ನೆರಡು ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು ಅದೇ ಸಂದರ್ಭದಲ್ಲಿ ಕೋವಿಡ್ ಪ್ರಕರಣ ಹೆಚ್ಷಾಗುವ ಸಾಧ್ಯತೆಯಿದೆ. ರಾಜ್ಯ ಸರಕಾರ ಪಾರ್ಟಿ ಮಾಡಲು ಅವಕಾಶ ಕೊಟ್ಟು ಈಗ ಕೋಲು ಕೊಟ್ಟು ಪೆಟ್ಟು ತಿಂದಂತಾಗಿದೆ. ಈಗಾಗಲೇ ಚುನಾವಣಾ ಆಯೋಗದ ತಂಡ ರಾಜ್ಯಕ್ಕೆ ಭೇಟಿ ನೀಡಿದ್ದು ಚುನಾವಣೆ ಸಿದ್ಧತೆಗಳ ಕುರಿತು ಪರಿಶೀಲನೆ ನಡೆಸಿದೆ. ಫ್ರೆಬ್ರವರಿ ಅಂತ್ಯ ಅಥವ ಮಾರ್ಚ್ನಲ್ಲಿ ಚುನಾವಣೆ ನಡೆಯುವ ನಿರೀಕ್ಷೆ ಇದೆ.
In the wake of a rise in Covid-19 cases in the coastal state, the Goa government on Monday imposed a night curfew in the state. The curfew orders are said to be in place from 11 pm to 6 am everyday. The Goa government has also decided to close schools and colleges till 26 January. The decision was taken by state Chief Minister Pramod Sawant at the Task Force's meeting on Covid-19 today.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 07:26 pm
HK News Desk
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am