ಬ್ರೇಕಿಂಗ್ ನ್ಯೂಸ್
05-01-22 11:03 pm HK Desk news ದೇಶ - ವಿದೇಶ
ನವದೆಹಲಿ, ಜ.5 : ಪ್ರಧಾನಿ ನರೇಂದ್ರ ಮೋದಿ ಪಂಜಾಬ್ನಲ್ಲಿ ರಸ್ತೆ ಮಾರ್ಗದಲ್ಲಿ ಪ್ರಯಾಣಿಸುತ್ತಿದ್ದಾಗ ಪ್ರತಿಭಟನಾಕಾರರ ತಡೆ ಎದುರಿಸಬೇಕಾಯಿತು. ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದ್ದರಿಂದ 20 ನಿಮಿಷಗಳ ಕಾಲ ಮೋದಿ ಅವರಿದ್ದ ವಾಹನ ಫ್ಲೈಓವರ್ನಲ್ಲಿ ಸಿಲುಕಿ ಒದ್ದಾಟ ನಡೆಸಿದ್ದು ವಿವಿಐಪಿ ವ್ಯಕ್ತಿಯೊಬ್ಬರ ಪ್ರಯಾಣದ ವೇಳೆ ಗಂಭೀರ ಭದ್ರತಾ ಲೋಪ ಎದುರಾಗಿದೆ. ಬಳಿಕ ಮೋದಿಯವರು ತಮ್ಮ ನಿಗದಿತ ಕಾರ್ಯಕ್ರಮವನ್ನು ರದ್ದುಗೊಳಿಸಿ ವಾಪಸಾಗಿದ್ದಾರೆ.
ಪ್ರತಿಭಟನೆಯ ಕಾರಣದಿಂದ ಪ್ರಧಾನಿ ಮೋದಿ ಬಟಿಂಡಾದಲ್ಲಿ ನಿಗದಿಯಾಗಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಲಾಗದೆ ವಿಮಾನ ನಿಲ್ದಾಣಕ್ಕೆ ವಾಪಸ್ ಆಗಿದ್ದಾರೆ ಎಂದು ಗೃಹ ಸಚಿವಾಲಯ ಹೇಳಿದ್ದು, ಭದ್ರತಾ ಲೋಪಕ್ಕೆ ಪಂಜಾಬ್ ಕಾಂಗ್ರೆಸ್ ಸರ್ಕಾರವನ್ನು ದೂಷಣೆ ಮಾಡಿದೆ.
ಬತಿಂಡಾ ಜಿಲ್ಲೆಯ ಹುಸೇನಿವಾಲಾದಲ್ಲಿ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ಭೇಟಿ ನೀಡಲು ಪ್ರಧಾನಿ ಬುಧವಾರ ಬೆಳಗ್ಗೆ ಬಂದಿದ್ದರು. ಅವರನ್ನು ಹೆಲಿಕಾಪ್ಟರ್ ಮೂಲಕ ಸ್ಥಳಕ್ಕೆ ಕರೆದೊಯ್ಯಬೇಕಾಗಿತ್ತು. ಆದರೆ ಮಳೆ ಮತ್ತು ಹವಾಮಾನ ವೈಪರೀತ್ಯದ ಕಾರಣ ಹೆಲಿಕಾಪ್ಟರ್ ಹಾರಾಟ ಸಾಧ್ಯವಾಗಲಿಲ್ಲ. ಹವಾಮಾನ ಪರಿಸ್ಥಿತಿ ಸರಿ ಹೋಗಬಹುದು ಎಂದು ಪ್ರಧಾನಿ ವಿಮಾನ ನಿಲ್ದಾಣದಲ್ಲೇ ಸುಮಾರು 20 ನಿಮಿಷ ಕಳೆದರು.
ಆದರೆ ಪರಿಸ್ಥಿತಿ ಸುಧಾರಿಸದೇ ಇದ್ದಾಗ, ರಸ್ತೆಯ ಮೂಲಕ ರಾಷ್ಟ್ರೀಯ ಹುತಾತ್ಮ ಸ್ಮಾರಕಕ್ಕೆ ಪ್ರಧಾನಿ ಭೇಟಿ ನೀಡುವುದೆಂದು ನಿರ್ಧರಿಸಲಾಯಿತು. ರಸ್ತೆ ಪ್ರಯಾಣದಲ್ಲಿ ಸ್ಮಾರಕ ತಲುಪಲು ಎರಡು ಗಂಟೆಗಳಿಗೂ ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ. ಪಂಜಾಬ್ ಡಿಜಿಪಿ, ಪೊಲೀಸರಿಂದ ಅಗತ್ಯ ಭದ್ರತಾ ವ್ಯವಸ್ಥೆಗಳ ದೃಢೀಕರಣ ಪಡೆದು ಪ್ರಧಾನಿ ರಸ್ತೆಯ ಪ್ರಯಾಣ ವ್ಯವಸ್ಥೆ ಮಾಡಲಾಗಿತ್ತು.
ಸ್ಮಾರಕ ತಲುಪಲು 30 ಕಿ.ಮೀ ದೂರದಲ್ಲಿರುವಾಗ, ಮೇಲ್ಸೇತುವೆಯಲ್ಲಿ ಪ್ರತಿಭಟನಾಕಾರರು ರಸ್ತೆಯನ್ನು ನಿರ್ಬಂಧಿಸಿದ್ದರು. ಇದರಿಂದ "ಪ್ರಧಾನಿ ಮೋದಿ 15-20 ನಿಮಿಷಗಳ ಕಾಲ ಫ್ಲೈಓವರ್ ಮೇಲೆ ಸಿಲುಕಿಕೊಂಡರು. ಇದು ಪ್ರಧಾನಿಯ ಭದ್ರತೆಯಲ್ಲಿ ಸಂಭವಿಸಿದ ದೊಡ್ಡ ಲೋಪವಾಗಿದೆ ಎಂದು ಗೃಹ ಸಚಿವಾಲಯ ಹೇಳಿಕೆ ನೀಡಿದೆ.
ಪ್ರಧಾನಿಯವರ ಕಾರ್ಯಕ್ರಮದ ವೇಳಾಪಟ್ಟಿ ಮತ್ತು ಪ್ರಯಾಣದ ಯೋಜನೆಯನ್ನು ಪಂಜಾಬ್ ಸರ್ಕಾರಕ್ಕೆ ಮುಂಚಿತವಾಗಿ ತಿಳಿಸಲಾಗಿತ್ತು. ಕಾರ್ಯ ವಿಧಾನದ ಪ್ರಕಾರ, ಅವರು ಪ್ರಯಾಣ, ಭದ್ರತೆಗೆ ಅಗತ್ಯ ವ್ಯವಸ್ಥೆಗಳನ್ನು ಮಾಡಬೇಕು ಮತ್ತು ತುರ್ತು ಸಂದರ್ಭದಲ್ಲಿ (ಆಕಸ್ಮಿಕ ಘಟನೆಗಳ ಸಂದರ್ಭ) ಪರ್ಯಾಯ ಯೋಜನೆಗಳನ್ನು ಸಿದ್ದವಾಗಿಟ್ಟುಕೊಂಡಿರಬೇಕು. ಪರ್ಯಾಯ ಯೋಜನೆಯ ದೃಷ್ಟಿಯಿಂದ ಪಂಜಾಬ್ ಸರ್ಕಾರವು ರಸ್ತೆಯ ಮೂಲಕ ಸುರಕ್ಷಿತ ಪ್ರಯಾಣವನ್ನು ಖಚಿತಪಡಿಸಲು ಹೆಚ್ಚುವರಿ ಭದ್ರತೆಯನ್ನು ನಿಯೋಜಿಸಬೇಕು. ಆದರೆ ಇದನ್ನು ಸ್ಪಷ್ಟವಾಗಿ ಮಾಡಿರಲಿಲ್ಲ ಎಂದು ಗೃಹ ಸಚಿವಾಲಯ ತಿಳಿಸಿದೆ.
ಘಟನೆ ಸಂಬಂಧ ಗೃಹ ಸಚಿವಾಲಯವು ಪಂಜಾಬ್ ಸರ್ಕಾರದಿಂದ ವರದಿಯನ್ನು ಕೇಳಿದ್ದು, ಇದಕ್ಕೆ ಕಾರಣವಾದವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆಯೂ ಸೂಚಿಸಿದೆ.
The news of PM Modi's convoy getting stuck on a flyover in Punjab grabbed eyeballs, triggering a BJP vs Congress fight and some wild reactions from political leaders.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm