ಬ್ರೇಕಿಂಗ್ ನ್ಯೂಸ್
26-01-22 01:20 pm DK Desk news ದೇಶ - ವಿದೇಶ
ಕೋಲ್ಕತ, ಜ 26 : ಕೇಂದ್ರ ಸರ್ಕಾರದ ಅತ್ಯುನ್ನತ ಗೌರವ ಪುರಸ್ಕಾರಗಳಲ್ಲಿ ಒಂದಾದ ಪದ್ಮಭೂಷಣ ಪ್ರಶಸ್ತಿಯನ್ನು ತಿರಸ್ಕರಿಸಿದ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ ಭಟ್ಟಾಚಾರ್ಯ ಅವರ ದಿಯನ್ನೇ ಬಂಗಾಳದ ದಿಗ್ಗಜ ಗಾಯಕಿ ಸಂಧ್ಯಾ ಮುಖರ್ಜಿ ಅನುಸಿರಿಸಿದ್ದಾರೆ.
ಕೇಂದ್ರ ಸರ್ಕಾರ ನೀಡಿದ ಪದ್ಮಶ್ರೀ ಪ್ರಶಸ್ತಿಯನ್ನು 90 ವರ್ಷದ ಗಾಯಕಿ ಮತ್ತು ಸಂಗೀತಗಾರ್ತಿ ಸಂಧ್ಯಾ ಮುಖರ್ಜಿ ಅವರು ತಿರಸ್ಕರಿಸಿದ್ದಾರೆ. ಸಂಧ್ಯಾ ಮುಖರ್ಜಿ ಅವರ ಮಗಳು ಸೌಮಿ ಸೆಂಗುಪ್ತಾ ಅವರು ಪ್ರಶಸ್ತಿ ತಿರಸ್ಕಾರಕ್ಕೆ ಕಾರಣ ತಿಳಿಸಿದ್ದಾರೆ. ಅವರಂತಹ ಲೆಜೆಂಡರಿ ಕಲಾವಿದೆಗೆ 90ನೇ ವಯಸ್ಸಿನಲ್ಲಿ ಪ್ರಶಸ್ತಿಯನ್ನು ನೀಡುವುದು ನಿಜಕ್ಕೂ ಅವಮಾನವಾಗಿದೆ. ಹೀಗಾಗಿ ಅವರು ಪ್ರಶಸ್ತಿಯನ್ನು ನಿಕಾರಿಸಿದ್ದಾರೆ ಎಂದು ಹೇಳಿದ್ದಾರೆ.
ಅಂದಹಾಗೆ ಪದ್ಮಶ್ರೀ ಪ್ರಶಸ್ತಿಯನ್ನು ತಿರಸ್ಕರಿಸುವ ಮುಖರ್ಜಿ ಅವರ ನಿರ್ಧಾರವು ರಾಜಕೀಯ ಪ್ರೇರಿತವಲ್ಲ. ನಮ್ಮ ತಾಯಿ ರಾಜಕೀಯವನ್ನು ಮೀರಿದವರು. ಇದರಲ್ಲಿ ರಾಜಕೀಯ ಕಾರಣ ಹುಡುಕುವ ಪ್ರಯತ್ನ ಮಾಡಬೇಡಿ. ಅವರು ಅವಮಾನಿತರಾಗಿದ್ದಾರಷ್ಟೇ ಎಂದು ಸೌಮಿ ಸೆಂಗುಪ್ತಾ ಸ್ಪಷ್ಟನೆ ನೀಡಿದ್ದಾರೆ.
ಸಂಧ್ಯಾ ಮುಖರ್ಜಿ ಅವರನ್ನು 60 ಮತ್ತು 70ರ ದಶಕದ ಸುಮಧುರವಾದ ಧ್ವನಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿದೆ. ಅವರು ಬಂಗಾಳಿ ಮತ್ತು ಸುಮಾರು ಹನ್ನೆರಡು ಇತರ ಭಾಷೆಗಳಲ್ಲಿ ಸಾವಿರಾರು ಹಾಡುಗಳಲ್ಲಿ ಹಿನ್ನೆಲೆ ಧ್ವನಿ ನೀಡಿದ್ದಾರೆ. 2011ರಲ್ಲೇ, ಸಂಧ್ಯಾ ಮುಖರ್ಜಿ ಅವರು ಪಶ್ಚಿಮ ಬಂಗಾಳ ಸರ್ಕಾರವು ನೀಡುವ ಅತ್ಯುನ್ನತ ನಾಗರಿಕ ಗೌರವವಾದ ಬಂಗಾ ಬಿಭೂಷಣವನ್ನು ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಹಾಲಿವುಡ್ ಕ್ಲಾಸಿಕ್ 'ಸೌಂಡ್ ಆಫ್ ಮ್ಯೂಸಿಕ್' ನ ಬಂಗಾಳಿ ರಿಮೇಕ್ ಆದ 'ಜಯ್ ಜಯಂತಿ' ಗಾಗಿ 1970 ರಲ್ಲಿ ಅತ್ಯುತ್ತಮ ಮಹಿಳಾ ಹಿನ್ನೆಲೆ ಗಾಯಕಿಗಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಸಹ ಅವರಿಗೆ ನೀಡಲಾಗಿದೆ.
ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ (77) ಅವರು ಕೂಡ ಪ್ರಶಸ್ತಿಯನ್ನು ತಿರಸ್ಕರಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು ನನ್ನನ್ನು ಪದ್ಮಭೂಷಣ ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆಂದು ಅನೇಕರು ಹೇಳುತ್ತಿದ್ದಾರೆ. ಈ ಬಗ್ಗೆ ನನಗೇನೂ ಗೊತ್ತಿಲ್ಲ. ಇದು ನಿಜವೇ ಆಗಿದ್ದರೆ ನಾನು ಪ್ರಶಸ್ತಿಯನ್ನು ತಿರಸ್ಕರಿಸುತ್ತೇನೆ ಎಂದಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಟೀಕಾಕಾರರಲ್ಲಿ ಭಟ್ಟಾಚಾರ್ಯ ಕೂಡ ಪ್ರಮುಖರು. ಕೆಲ ತಿಂಗಳುಗಳಿಂದ ಭಟ್ಟಾಚಾರ್ಯ ಅವರು ಹೃದಯ ಮತ್ತು ಶ್ವಾಸಕೋಶ ಸಂಬಂಧಿ ಕಾಯಿಲೆಗಳ ಜೊತೆಗೆ ವಯಸ್ಸಿಗೆ ಸಂಬಂಧಿಸಿದ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರು ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದು ಕಡಿಮೆಯಾಗಿದೆ.
ಚಲನಚಿತ್ರ ಬರಹಗಾರ ಸಲೀಂ ಖಾನ್ ಅವರು 2015ರಲ್ಲಿ ಪದ್ಮಶ್ರೀ ಪ್ರಶಸ್ತಿಯನ್ನು ಸ್ವೀಕರಿಸಲು ನಿರಾಕರಿಸಿದ್ದರು. ಅವರಿಗಿಂತ ಮೊದಲು, ಇತಿಹಾಸಕಾರರಾದ ರೋಮಿಲಾ ಥಾಪರ್ ಅವರು 2005 ರಲ್ಲಿ ಪದ್ಮಭೂಷಣವನ್ನು ನಿರಾಕರಿಸಿದ್ದರು.
0-year old veteran singer Sandhya Mukherjee, also known as Sandhya Mukhopadhyay, on Tuesday refused an offer of a Padma Shri award saying it is more deserving of a junior artiste and not someone of her stature. She is the second person from West Bengal to refuse a civilian honour. Former West Bengal Chief Minister Buddhadeb Bhattacharjee had on Tuesday turned down the padma bhushan. He said that he was not aware that he had been named for it, and he would reject it if it were so.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am