ಬ್ರೇಕಿಂಗ್ ನ್ಯೂಸ್
10-02-22 07:24 pm HK Desk news ದೇಶ - ವಿದೇಶ
ಸಹರಾನ್ ಪುರ, ಫೆ 10 : ನಮ್ಮ ಸರ್ಕಾರ ಮುಸ್ಲಿಂ ಜನಾಂಗದ ಮಹಿಳೆಯರ ಉದ್ಧಾರಕ್ಕೆ ನಿಂತಿದೆ. ನಮ್ಮ ಸರ್ಕಾರ ಪ್ರತಿ ಸಂತ್ರಸ್ತ ಮುಸ್ಲಿಂ ಮಹಿಳೆಯೊಂದಿಗೆ ನಿಂತಿದೆ. ಆದರೆ ಅವರು ಮುಸ್ಲಿಂ ಸಹೋದರಿಯರನ್ನು ಮೋಸ ಮಾಡುತ್ತಿದ್ದಾರೆ ಇದರಿಂದ ಮುಸ್ಲಿಂ ಹೆಣ್ಣು ಮಕ್ಕಳ ಜೀವನ ಯಾವಾಗಲೂ ಹಿಂದೆ ಉಳಿಯುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಕ್ಷ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳ ಮೇಲೆ ವಾಗ್ದಾಳಿ ನಡೆಸಿದ್ದಾರೆ.
ಈ ಮೂಲಕ ಕರ್ನಾಟಕದ ಉಡುಪಿಯಲ್ಲಿ ಆರಂಭವಾಗಿ ಇಂದು ದೇಶ-ವಿದೇಶಗಳಲ್ಲಿ ಸದ್ದು ಮಾಡಿರುವ ಹಿಜಾಬ್ ವಿವಾದಕ್ಕೆ ಸಂಬಂಧಪಟ್ಟಂತೆ ಪರೋಕ್ಷವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಇಂದು ಉತ್ತರ ಪ್ರದೇಶದ ಸಹರನ್ಪುರದಲ್ಲಿ ಚುನಾವಣಾ ರ್ಯಾಲಿಯಲ್ಲಿ ಭೌತಿಕವಾಗಿ ಭಾಗವಹಿಸಿ ಮಾತನಾಡಿದ ಅವರು, ಭಾರತದಲ್ಲಿ ಮುಸ್ಲಿಂ ಮಹಿಳೆಯರ ಹಕ್ಕುಗಳು ಮತ್ತು ಅಭಿವೃದ್ಧಿಯನ್ನು ತಡೆಯಲು ಹೊಸ ಮಾರ್ಗಗಳನ್ನು ಹುಡುಕುತ್ತಿದ್ದಾರೆ. ಮುಸ್ಲಿಂ ಮಹಿಳೆಯರು ತುಳಿತಕ್ಕೊಳಗಾಗದಂತೆ ನೋಡಿಕೊಳ್ಳಲು ಉತ್ತರ ಪ್ರದೇಶದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅತ್ಯಗತ್ಯ ಎಂದು ಒತ್ತಿ ಹೇಳಿದರು.
ಬಿಜೆಪಿ ಸರ್ಕಾರ ಮುಸ್ಲಿಂ ಮಹಿಳೆಯರನ್ನು ತ್ರಿವಳಿ ತಲಾಖ್ ಎಂಬ ಅನಿಷ್ಠ ಪದ್ದತಿಯಿಂದ ಮುಕ್ತಗೊಳಿಸಿದೆ. ಮುಸ್ಲಿಂ ಮಹಿಳೆಯರು ಬಹಿರಂಗವಾಗಿ ಮೋದಿ ಸರ್ಕಾರವನ್ನು ಬೆಂಬಲಿಸಲು ಆರಂಭಿಸಿದಾಗ, ವಿರೋಧಿಗಳು ಆತಂಕಗೊಂಡರು. ನಾವು ಪ್ರತಿ ಮುಸ್ಲಿಂ ಮಹಿಳೆಯೊಂದಿಗೆ ನಿಲ್ಲುತ್ತೇವೆ ಎಂದು ಒತ್ತಿ ಹೇಳಿದರು.
ಹಿಜಾಬ್ ಧರಿಸಿದ ಕಾರಣಕ್ಕಾಗಿ ಆರು ಮಂದಿ ವಿದ್ಯಾರ್ಥಿನಿಯರಿಗೆ ತಮ್ಮ ಕಾಲೇಜಿಗೆ ಪ್ರವೇಶಿಸಲು ಅವಕಾಶ ನೀಡದ ನಂತರ ಕಳೆದ ತಿಂಗಳು ಜನವರಿ ಅಂತ್ಯಕ್ಕೆ ಭುಗಿಲೆದ್ದ ಕರ್ನಾಟಕದ ಪ್ರಮುಖ ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಪ್ರಧಾನಿ ಈ ಹೇಳಿಕೆ ನೀಡಿದ್ದಾರೆ.
ಈ ಗಲಾಟೆ ಬಿಜೆಪಿ ಮತ್ತು ವಿರೋಧ ಪಕ್ಷಗಳ ನಡುವಿನ ಕದನವಾಗಿ ಮಾರ್ಪಟ್ಟಿದ್ದು ಇಂದು ಹೈಕೋರ್ಟ್ ತೀರ್ಪು ಏನು ಬರುತ್ತದೆ ಎಂದು ಕುತೂಹಲವಾಗಿದೆ. ರಾಜ್ಯವನ್ನು ಗಲಭೆ ಮುಕ್ತವಾಗಿಡಲು, ಮಹಿಳೆಯರನ್ನು ಭಯದಿಂದ ಮುಕ್ತವಾಗಿಡಲು ಮತ್ತು ಅಪರಾಧಿಗಳನ್ನು ಜೈಲಿಗೆ ಕಳುಹಿಸಲು ಉತ್ತರ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ಅಗತ್ಯ ಎಂದು ಮತ್ತೊಮ್ಮೆ ಯೋಗಿ ಸರ್ಕಾರಕ್ಕೆ ಬೆಂಬಲ ನೀಡುವಂತೆ ಮತದಾರರನ್ನು ಕೋರಿಕೊಂಡರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅಗತ್ಯವಿದ್ದು, ಬಡವರು ಉತ್ತಮ ಆಸ್ಪತ್ರೆಗಳಲ್ಲಿ 5 ಲಕ್ಷ ರೂಪಾಯಿವರೆಗೆ ಉಚಿತ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಧಾನಮಂತ್ರಿ ಕಿಸಾನ್ ಯೋಜನೆಯಡಿ ನೀಡಿದ ಹಣ ಸಣ್ಣ ರೈತರ ಬ್ಯಾಂಕ್ ಖಾತೆಗಳಿಗೆ ಹೋಗುವಂತೆ ಮಾಡಲು ಬಿಜೆಪಿ ಸರ್ಕಾರವೂ ಅಗತ್ಯವಿದೆ ಎಂದು ಅವರು ಹೇಳಿದರು.
विकास में बेटियों की सहभागिता भाजपा की सबसे बड़ी प्राथमिकता है। मुस्लिम बहनें-बेटियां भी हमारी इस साफ नीयत को भलीभांति समझती हैं। pic.twitter.com/4LNa31b84Q
— Narendra Modi (@narendramodi) February 10, 2022
Prime Minister Narendra Modi on Thursday said that the Bharatiya Janata Party (BJP) government stands with 'Har Majloom (every victim Muslim woman)". Addressing a public rally in Saharanpur, PM Modi said, "Our government stands with 'Har Majloom (every victim Muslim woman)'. Those people (Opposition parties) are trying to trick Muslim sisters to push them back in their lives."
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am