ಬ್ರೇಕಿಂಗ್ ನ್ಯೂಸ್
24-02-22 01:42 pm HK Desk news ದೇಶ - ವಿದೇಶ
ನವದೆಹಲಿ, ಫೆ.24 : ದೇಶದ ವಿವಿಧ ಬ್ಯಾಂಕುಗಳು ಮತ್ತು ಷೇರುದಾರರಿಗೆ ಸಾವಿರಾರು ಕೋಟಿ ದೋಖಾ ಮಾಡಿ ದೇಶ ಬಿಟ್ಟು ಹೋಗಿರುವ ವಿಜಯ್ ಮಲ್ಯ, ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿಯಿಂದ 18 ಸಾವಿರ ಕೋಟಿ ರೂಪಾಯಿ ಮೌಲ್ಯದ ಸೊತ್ತನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿರುವುದಾಗಿ ಸುಪ್ರೀಂ ಕೋರ್ಟಿಗೆ ಮಾಹಿತಿ ನೀಡಲಾಗಿದೆ.
ಪ್ರಕರಣದ ವಿಚಾರಣೆ ನಡೆಸುತ್ತಿರುವ ಎ.ಎಂ.ಖಾನ್ವಿಲ್ಕರ್, ದಿನೇಶ್ ಮಹೇಶ್ವರಿ ಮತ್ತು ಸಿ.ಟಿ.ರವಿಕುಮಾರ್ ಅವರನ್ನು ಒಳಗೊಂಡ ನ್ಯಾಯಪೀಠಕ್ಕೆ ಕೇಂದ್ರ ಸರಕಾರದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮಾಹಿತಿ ನೀಡಿದ್ದಾರೆ. 2002ರಿಂದ ಈಚೆಗೆ ಜಾರಿ ನಿರ್ದೇಶನಾಲಯದಲ್ಲಿ 4700ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 313 ಮಂದಿಯನ್ನು ಬಂಧಿಸಲಾಗಿದೆ. ಪ್ರಕರಣಗಳು ಇನ್ನೂ ವಿಚಾರಣೆ ಹಂತದಲ್ಲಿದೆ. ವಿವಿಧ ಪ್ರಕರಣಗಳಲ್ಲಿ 67 ಸಾವಿರ ಕೋಟಿ ಮೊತ್ತದ ಸೊತ್ತು ವಶಕ್ಕೆ ಪಡೆಯಲು ಕೋರ್ಟ್ ನೀಡಿರುವ ತಡೆಗಳೇ ಅಡ್ಡಿಯಾಗಿವೆ ಎಂದು ತಿಳಿಸಿದ್ದಾರೆ.
ಕಳೆದ ಫೆ.15ರಂದು ಸುಪ್ರೀಂ ಕೋರ್ಟ್ ಪೀಠವು, ಅಕ್ರಮ ಹಣ ವರ್ಗಾವಣೆ, ಅಕ್ರಮ ಆಸ್ತಿ ಗಳಿಕೆ, ವಂಚನೆ ಕುರಿತ ಜಾರಿ ನಿರ್ದೇಶನಾಲಯದ ಪ್ರಕರಣಗಳಲ್ಲಿ ತ್ವರಿತ ವಿಚಾರಣೆ ಆಗಬೇಕಾಗಿದೆ. ಹಣದ ಮೊತ್ತವನ್ನು ತ್ವರಿತ ನೆಲೆಯಲ್ಲಿ ವಶಕ್ಕೆ ಪಡೆಯಬೇಕಾಗಿದೆ ಎಂದು ಸೂಚನೆ ನೀಡಿತ್ತು. ಮುಕುಲ್ ರೋಹ್ಟಗಿ, ಅಭಿಷೇಕ್ ಮನು ಸಿಂಘ್ವಿ ಸೇರಿದಂತೆ ಹಿರಿಯ ವಕೀಲರು ದೂರುದಾರರ ಪರವಾಗಿ ಇತ್ತೀಚೆಗೆ ಕೋರ್ಟಿಗೆ ಅಪೀಲು ಹೋಗಿದ್ದು, ಇಡಿ ಪ್ರಕರಣಗಳ ತ್ವರಿತ ವಿಲೇವಾರಿಗೆ ಕ್ರಮ ಜರುಗಿಸಬೇಕೆಂದು ಕೋರಿದ್ದರು. ಅಲ್ಲದೆ, ಇತ್ತೀಚೆಗೆ ಅಕ್ರಮ ಹಣ ವರ್ಗಾವಣೆ ಕುರಿತ ಕಾಯ್ದೆಗೆ ತಿದ್ದುಪಡಿಯಾದ ಬಳಿಕ ಕಾಯ್ದೆಯನ್ನು ದುರುಪಯೋಗ ಮಾಡಲಾಗುತ್ತಿದೆ ಎಂದು ಕೋರ್ಟಿನ ಗಮನ ಸೆಳೆದಿದ್ದರು.
ಈ ಬಗ್ಗೆ ಕೋರ್ಟಿಗೆ ಮಾಹಿತಿ ನೀಡಿದ್ದ ಸಾಲಿಸಿಟರ್ ಜನರಲ್, ಇಡಿ ಪ್ರಕರಣಗಳಲ್ಲಿ ಸುಮಾರು 200ಕ್ಕೂ ಹೆಚ್ಚು ದೂರುದಾರರಿದ್ದು, ಕೆಲವು ಸಂದರ್ಭಗಳಲ್ಲಿ ಮಧ್ಯಂತರ ತಡೆ ನೀಡುವುದು ಪ್ರಕರಣದ ವಿಚಾರಣೆಗೆ ತೊಡಕಾಗುತ್ತದೆ. ಇದರಿಂದಾಗಿ ತ್ವರಿತ ವಿಲೇವಾರಿಗೆ ತಡೆಯಾಗಿದೆ ಎಂದು ಹೇಳಿದ್ದರು.
The government on Tuesday told the Supreme Court that Rs 18,000 crore has been recovered by the banks in relation to the scams done by fugitives Vijay Mallya, Nirav Modi and Mehul Choksi. The bench led by Justice A M Khanwilkar was hearing a slew of petitions that challenged the wider scope of powers of the enforcement directorate (ED) for search, investigation, and attachment of proceeds of crime under the law.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am