ಬ್ರೇಕಿಂಗ್ ನ್ಯೂಸ್
28-02-22 06:50 pm HK Desk news ದೇಶ - ವಿದೇಶ
ನವದೆಹಲಿ, ಫೆ 28: ರಷ್ಯಾ ನಡೆಸಿದ ಬಾಂಬ್ ಹಾಗೂ ಶೆಲ್ ದಾಳಿಯಿಂದಾಗಿ ಉಕ್ರೇನ್ನಲ್ಲಿ ಕನಿಷ್ಠ 16 ಮಕ್ಕಳು ಸಾವನ್ನಪ್ಪಿದ್ದಾರೆ. ನಾಗರಿಕರ ಸಾವು-ನೋವು ಅಪಾರವಾಗಿದೆ ಎಂದು ಭಾರತದಲ್ಲಿನ ಉಕ್ರೇನ್ ರಾಯಭಾರಿ ಡಾ. ಇಗೊರ್ ಪೊಲಿಖಾ ತಿಳಿಸಿದ್ದಾರೆ.
ದೆಹಲಿಯಲ್ಲಿ ನಡೆದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಉಕ್ರೇನ್ ಮೇಲೆ ರಷ್ಯಾದ ಆಕ್ರಮಣದ ಸಮಯದಲ್ಲಿ ನಮ್ಮ ದೇಶದ 16 ಮಕ್ಕಳು ಸಾವನ್ನಪ್ಪಿದ್ದಾರೆ. ವಿವಿಧ ದೇಶಗಳ ನಿರ್ಬಂಧಗಳಿಂದಾಗಿ ರಷ್ಯಾದ ಆರ್ಥಿಕತೆಯು ಪ್ರತಿದಿನವೂ ದುರ್ಬಲಗೊಳ್ಳುತ್ತಿದೆ. ಇದುವರೆಗೆ ಸುಮಾರು 5,300 ರಷ್ಯಾದ ಸೈನಿಕರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ.

ರಷ್ಯಾದ ವಿಮಾನಗಳಿಗಾಗಿ ಯುರೋಪಿನ ವಾಯುಪ್ರದೇಶವನ್ನು ಭಾನುವಾರ ಮುಚ್ಚಲಾಗಿದೆ. ಆ ದೇಶದ ಆರ್ಥಿಕತೆಯು ಪ್ರತಿದಿನ ದುರ್ಬಲಗೊಳ್ಳುತ್ತಿದೆ. ರಷ್ಯಾವು ಸಂಪೂರ್ಣವಾಗಿ ಸಾವುನೋವುಗಳನ್ನು ಎದುರಿಸುತ್ತಿದೆ. ಸರಿಸುಮಾರು 5,300 ರಷ್ಯಾದ ಸೈನಿಕರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಎಲ್ಲಾ ವಿದೇಶಿ ಪಾಲುದಾರ ರಾಷ್ಟ್ರಗಳು ಯುದ್ಧ ನಿಲ್ಲಿಸಲು ವ್ಲಾಡಿಮಿರ್ ಪುಟಿನ್ ಮೇಲೆ ಒತ್ತಡ ಹೇರಬೇಕು ಎಂದು ಇದೇ ವೇಳೆ ಉಕ್ರೇನ್ ರಾಯಭಾರಿ ವಿನಂತಿಸಿದ್ದಾರೆ.

ಶಾಂತಿ ಮಾತುಕತೆಯ ಸಮಯದಲ್ಲೂ ದಾಳಿ ಆರೋಪ;
ಯುದ್ಧವನ್ನು ನಿಲ್ಲಿಸಲು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಮೇಲೆ ಒತ್ತಡ ಹೇರಲು ನಾವು ನಮ್ಮ ಎಲ್ಲಾ ಪಾಲುದಾರ ದೇಶಗಳನ್ನು ಕೇಳಿಕೊಳ್ಳುತ್ತಿದ್ದೇವೆ. ಇಂದು, ನಮ್ಮ ನಿಯೋಗವು ಮೊದಲ ಸುತ್ತಿನ ಶಾಂತಿ ಮಾತುಕತೆ ನಡೆಸಲು ಹೋಗಿದೆ. ಶಾಂತಿ ಮಾತುಕತೆಯ ಸಮಯದಲ್ಲಿಯೂ ನಿರಂತರ ಶೆಲ್ ದಾಳಿ, ಬಾಂಬ್ ದಾಳಿ ನಡೆಯುತ್ತಿವೆ ಎಂದು ಅಸಹಾಯಕತೆಯನ್ನು ತೋಡಿಕೊಂಡರು.

ಉಕ್ರೇನಿಯನ್ ನಿರಾಶ್ರಿತರ ಸಂಖ್ಯೆ 4 ಲಕ್ಷವನ್ನು ಮೀರಿದೆ. ಯುದ್ಧವನ್ನು ನಿಲ್ಲಿಸದಿದ್ದರೆ ಈ ಸಂಖ್ಯೆ 7 ಮಿಲಿಯನ್ ದಾಟಬಹುದು. ಗಡಿಯಲ್ಲಿ ಬಹಳ ಉದ್ದವಾದ ಸರತಿ ಸಾಲುಗಳಲ್ಲಿ ಉಕ್ರೇನ್ ಜನ ನಿಂತಿದ್ದು, ಗಡಿ ದಾಟಲು ಪ್ರಯತ್ನಿಸುತ್ತಿದ್ದಾರೆ. ಉಕ್ರೇನ್ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳ ಬಗ್ಗೆ ಮಾತನಾಡಿದ ಇಗೊರ್ ಪೊಲಿಖಾ, ಭಾರತೀಯ ಅಧಿಕಾರಿಗಳೊಂದಿಗೆ ನಾನು ನಿರಂತರ ಸಂಪರ್ಕದಲ್ಲಿದ್ದೇನೆ ಎಂದಿದ್ದಾರೆ.
At least 16 children have died in Ukraine due to Russian bombing and shelling. The death toll of civilians is immense, said Ukraine's Ambassador to India Dr. Said Igor Polikha.
18-04-26 05:59 pm
HK News Staffer
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
18-04-26 11:39 pm
HK News Desk
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
ದುರಂತ ಅಂತ್ಯ ಕಂಡ ವಿಚ್ಛೇದನ ಕಲಹ ; ಪತ್ನಿಗೆ ಗುಂಡಿಕ...
17-04-26 08:08 pm
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
19-04-26 10:41 pm
HK News Staffer
ಪುತ್ತೂರು ಜಾತ್ರೆ ; ಸುಡುಮದ್ದು ಉತ್ಸವದಲ್ಲಿ ಬೆಂಕಿ...
18-04-26 11:31 pm
ಕುಂಪಲದಲ್ಲಿ ಏಕಾಏಕಿ ಕುಸಿದು ಬಿದ್ದ ಭಾರೀ ಗಾತ್ರದ ಆವ...
18-04-26 11:09 pm
ದಾವಣಗೆರೆ ಫಲಿತಾಂಶ ಏನಾಗುತ್ತೆಂದು ಹೇಳಲು ನಾನು ಜ್ಯೋ...
18-04-26 08:10 pm
ಕೊಣಾಜೆ ; ಪೊಳಲಿ ಜಾತ್ರೆಗೆ ತೆರಳಿದ್ದ ಅಪ್ರಾಪ್ತ ಬಾಲ...
17-04-26 10:32 pm
20-04-26 11:13 am
HK News Staffer
ಬೈಕಿನಲ್ಲಿ 46 ಲಕ್ಷ ಮೌಲ್ಯದ ಡ್ರಗ್ಸ್ ಇಟ್ಟುಕೊಂಡು ವ...
19-04-26 10:23 pm
ಶಿವಮೊಗ್ಗ ; ಹುಟ್ಟುಹಬ್ಬದ ಪಾರ್ಟಿ ವೇಳೆ ಚಿಕನ್ ಮೂಳೆ...
19-04-26 02:58 pm
15 ವರ್ಷಗಳ ಹಿಂದೆ ಜೈಲಿನಿಂದ ತಪ್ಪಿಸಿಕೊಂಡು ಮುಂಬೈ,...
19-04-26 02:24 pm
ಅಂಬ್ಲಮೊಗರು ; ಸ್ನೇಹಿತರೊಂದಿಗೆ ಕೆರೆ ನೀರಲ್ಲಿ ಆಟವಾ...
19-04-26 10:20 am