ಬ್ರೇಕಿಂಗ್ ನ್ಯೂಸ್
12-03-22 08:52 pm HK Desk news ದೇಶ - ವಿದೇಶ
ನವದೆಹಲಿ, ಮಾ.12: ಪಂಚ ರಾಜ್ಯಗಳ ಚುನಾವಣೆಯಲ್ಲಿ ಎದುರಾದ ಸೋಲಿನ ನೈತಿಕ ಹೊಣೆ ಹೊತ್ತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್ ಗಾಂಧಿ, ಜನರಲ್ ಸೆಕ್ರಟರಿ ಪ್ರಿಯಾಂಕಾ ಗಾಂಧಿ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಲು ಮುಂದಾಗಿದ್ದಾರೆಂಬ ಮಾಹಿತಿ ಹೊರಬಿದ್ದಿದೆ. ಭಾನುವಾರ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಮೂವರು ನಾಯಕರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಲಿದ್ದಾರೆ ಎನ್ನಲಾಗುತ್ತಿದೆ.
ಮೂಲಗಳ ಪ್ರಕಾರ, ಭಾನುವಾರದ ಸಭೆಯಲ್ಲಿ ಕಾರ್ಯಕಾರಿ ಮಂಡಳಿಯನ್ನೇ ವಿಸರ್ಜಿಸಲು ನಿರ್ಧರಿಸಲಾಗಿದೆ. ಆನಂತರ ಹೊಸತಾಗಿ ಕಾರ್ಯಕಾರಿ ಸಮಿತಿ ರಚಿಸಲು ಚುನಾವಣೆ ನಡೆಸಲಾಗುತ್ತದೆ. ಇದಲ್ಲದೆ, ಆಯಾ ರಾಜ್ಯಗಳ ಚುನಾವಣೆ ಉಸ್ತುವಾರಿ ಹೊತ್ತಿದ್ದವರು ಪಕ್ಷದ ಸೋಲಿನ ಹೊಣೆಯನ್ನು ಹೊತ್ತುಕೊಳ್ಳಲಿದ್ದಾರೆ.
ಭಾನುವಾರ ಸಂಜೆ ನಾಲ್ಕು ಗಂಟೆಗೆ ಎಐಸಿಸಿ ಕಚೇರಿಯಲ್ಲಿ ಸೋನಿಯಾ ಗಾಂಧಿ ಅಧ್ಯಕ್ಷತೆಯಲ್ಲಿ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ. ಇದಕ್ಕೂ ಮುನ್ನ ಬೆಳಗ್ಗೆ 10.30 ಗಂಟೆಗೆ ಸೋನಿಯಾ ಗಾಂಧಿ, ಸಂಸದೀಯ ಸಲಹಾ ಸಮಿತಿ ಸಭೆಯನ್ನೂ ಕರೆದಿದ್ದಾರೆ. ಪಂಜಾಬ್ ಸೇರಿದಂತೆ ಐದು ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಕಂಡಿರುವ ಹಿನ್ನೆಲೆಯಲ್ಲಿ ಪಕ್ಷದ ಪ್ರಮುಖರು ಚಿಂತನೆಗೆ ಶುರು ಮಾಡಿದ್ದಾರೆ. ಹೀಗಾಗಿ ಈ ಬಗ್ಗೆ ಸಭೆ ಕರೆದು ಚರ್ಚಿಸಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ.
ಚುನಾವಣೆ ಸೋಲಿನ ಹಿನ್ನೆಲೆಯಲ್ಲಿ ಜಿ-23 ಭಿನ್ನಮತೀಯ ನಾಯಕರು ಶುಕ್ರವಾರ ತುರ್ತಾಗಿ ಗುಲಾಂ ನಬಿ ಆಜಾದ್ ಮನೆಯಲ್ಲಿ ಸಭೆ ನಡೆಸಿದ್ದು ಪಕ್ಷದ ಸಂಘಟನಾ ಸಮಿತಿಯನ್ನು ಪುನರ್ ರಚಿಸುವ ಬಗ್ಗೆ ಚರ್ಚೆ ನಡೆಸಿದ್ದಾರೆ. ಭಾನುವಾರದ ಕಾರ್ಯಕಾರಿ ಸಮಿತಿ ಸಭೆಗೂ ಮುನ್ನ ಭಿನ್ನರು ಸೇರಿ ಸಭೆ ನಡೆಸಿದ್ದು ಮಹತ್ವ ಮೂಡಿಸಿದೆ. ಕಳೆದ ಬಾರಿ ಕೇರಳ, ಪುದುಚೇರಿ, ಅಸ್ಸಾಂ, ಪಶ್ಚಿಮ ಬಂಗಾಳದಲ್ಲಿ ಎದುರಾದ ಸೋಲಿನ ಬಳಿಕ ಈ ನಾಯಕರು ಪಕ್ಷದಲ್ಲಿ ಬದಲಾವಣೆ ತರಲು ಸಲಹೆ ನೀಡಿದ್ದರು. ಆದರೆ, ಸೋನಿಯಾ ಗಾಂಧಿ ನೇತೃತ್ವದ ಹೈಕಮಾಂಡ್, ಭಿನ್ನ ನಾಯಕರ ಒತ್ತಡಕ್ಕೆ ಸೊಪ್ಪು ಹಾಕಿರಲಿಲ್ಲ.
ಭಾನುವಾರದ ಸಭೆಯಲ್ಲಿ ಈ ಭಿನ್ನ ರಾಗದ ನಾಯಕರು ಕೂಡ ಪಾಲ್ಗೊಳ್ಳಲಿದ್ದು, ಹೊಸ ಅಧ್ಯಕ್ಷರ ನೇಮಕದ ಬಗ್ಗೆ ವಿಳಂಬ ಧೋರಣೆ ಅನುಸರಿಸದಂತೆ ಆಗ್ರಹ ಮಾಡಲಿದ್ದಾರೆ. ಅಲ್ಲದೆ, ಪಕ್ಷದ ಕಾರ್ಯಕಾರಿ ಸಮಿತಿಯಲ್ಲಿ ಪ್ರಮುಖ ಬದಲಾವಣೆಗೆ ಸಲಹೆ ನೀಡಲಿದ್ದಾರೆ. ಅಸೆಂಬ್ಲಿ ಚುನಾವಣೆಗಳ ಸೋಲಿನ ಬಗ್ಗೆ ಗಂಭೀರವಾಗಿ ಪರಿಗಣಿಸುವಂತೆ ಒತ್ತಡ ಹೇರಲಿದ್ದಾರೆ ಎನ್ನುವ ಮಾಹಿತಿಗಳು ಇವೆ. ಶುಕ್ರವಾರ ಗುಲಾಂ ನಬಿ ಆಜಾದ್ ಮನೆಯಲ್ಲಿ ನಡೆಸಿದ ಸಭೆಯಲ್ಲಿ ಹಿರಿಯ ನಾಯಕರಾದ ಕಪಿಲ್ ಸಿಬಲ್, ಮನೀಶ್ ತಿವಾರಿ, ಆನಂದ್ ಶರ್ಮಾ, ಅಖಿಲೇಶ್ ಪ್ರಸಾದ್ ಸಿಂಗ್ ಸೇರಿದಂತೆ ಪ್ರಮುಖ ನಾಯಕರು ಭಾಗವಹಿಸಿದ್ದರು.
Congress president Sonia Gandhi will chair a meeting of the Congress Working Committee (CWC) on Sunday to take stock of the poll debacle in the five states. Sources said the CWC will take responsibility for the party’s loss in the poll-bound states, and that dates for fresh elections could be announced soon.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am