ಬ್ರೇಕಿಂಗ್ ನ್ಯೂಸ್
25-09-20 02:56 pm Headline Karnataka News Network ದೇಶ - ವಿದೇಶ
ಬೆಂಗಳೂರು, ಸೆಪ್ಟಂಬರ್ 25: ಖ್ಯಾತ ಸಂಗೀತ ದಿಗ್ಗಜ, ಗಾಯಕರಾದ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಚಲನಚಿತ್ರರಂಗದ ಶ್ರೇಷ್ಠ ಗಾಯಕರಾಗಿದ್ದ ಅವರು, ಹಿಂದಿ ಸೇರಿದಂತೆ ದಕ್ಷಿಣ ಭಾರತದ ಎಲ್ಲ ಭಾಷೆಗಳ ಚಲನಚಿತ್ರ ಗೀತೆಗಳಿಗೆ ಹಿನ್ನೆಲೆ ಗಾಯನ ಮಾಡಿ ಅಪಾರ ಜನಪ್ರಿಯತೆಯನ್ನು ಗಳಿಸಿದ್ದರು. ನಟನೆ, ಸಂಗೀತ ಸಂಯೋಜನೆ, ಸಂಗೀತ ಕಾರ್ಯಕ್ರಮಗಳ ನಿರ್ವಹಣೆಯನ್ನೂ ಮಾಡಿ ಸಂಗೀತ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆಯನ್ನು ಮಾಡಿದ್ದರು. ಹತ್ತಕ್ಕಿಂತ ಹೆಚ್ಚು ಭಾಷೆಗಳಲ್ಲಿ 40 ಸಾವಿರಕ್ಕೂ ಮೀರಿ ಹಾಡುಗಳನ್ನು ಹಾಡಿದ ಕೀರ್ತಿ ಅವರದ್ದು ಎಂದು ಎಸ್ಪಿಬಿ ಸಾಧನೆಯ ಬಗ್ಗೆ ಹೇಳಿದ್ದಾರೆ.
ಕನ್ನಡ ಮತ್ತು ಕನ್ನಡಿಗರ ಬಗ್ಗೆ ವಿಶೇಷ ಅಭಿಮಾನವನ್ನು ಹೊಂದಿದ್ದರು. ಪದ್ಮಶ್ರೀ, ಪದ್ಮವಿಭೂಷಣ ಪ್ರಶಸ್ತಿ ಹಾಗೂ ಇನ್ನಿತರ ಪ್ರಶಸ್ತಿ ಗೌರವಗಳನ್ನು ಪಡೆದ ಸುಪ್ರಸಿದ್ಧ ಗಾಯಕರು. ಅವರ ಹಾಡುಗಳು ಜನಮಾನಸದಲ್ಲಿ ಚಿರಸ್ಥಾಯಿಯಾಗಿ ನೆಲೆಸಿದೆ. ಆದರೆ ಇದೀಗ ಅವರ ನಿಧನದಿಂದ ಸಂಗೀತ ಕ್ಷೇತ್ರದ ಪ್ರಮುಖ ಕೊಂಡಿಯೊಂದು ಕಳಚಿದಂತಾಗಿದೆ ಎಂದಿದ್ದಾರೆ.
ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ. ಅವರ ಕುಟುಂಬ ಮತ್ತು ಕೋಟ್ಯಾಂತರ ಅಭಿಮಾನಿಗಳಿಗೆ ಭಗವಂತ ದು:ಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ತಮ್ಮ ಅಸಾಧಾರಣ ಕಂಠಸಿರಿಯಿಂದ ವಿಶ್ವದಾದ್ಯಂತ ಸಂಗೀತಪ್ರಿಯರ ಮನೆಮನಗಳಲ್ಲಿ ಸ್ಥಾನಪಡೆದ ಗಾನಗಂಧರ್ವ, ಭಾರತದ ಹೆಮ್ಮೆ, ಪದ್ಮಭೂಷಣ ಡಾ ಎಸ್.ಪಿ.ಬಾಲಸುಬ್ರಹ್ಮಣ್ಯಂ ವಿಧಿವಶರಾಗಿರುವುದು ಇಡೀ ಭಾರತೀಯ ಕಲಾಲೋಕಕ್ಕೆ ಎಂದೂ ತುಂಬಲಾಗದ ನಷ್ಟ. ಅಕ್ಷರಗಳಲ್ಲಿ ಹಿಡಿದಿಡಲಾಗದಷ್ಟು ಸಾಧನೆ ಮಾಡಿದ್ದ ಎಸ್.ಪಿ.ಬಿ ತಮ್ಮ ಗೀತೆಗಳ ಮೂಲಕ ಅಮರರಾಗಿದ್ದಾರೆ. (1/3) pic.twitter.com/DZmWjJU5AR
— B.S. Yediyurappa (@BSYBJP) September 25, 2020
ಅವರ ಕುಟುಂಬದವರಿಗೆ ಮತ್ತು ಅಸಂಖ್ಯಾತ ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ದಯಪಾಲಿಸಲಿ ಎಂದು ಅವರ ಅಭಿಮಾನಿಗಳಲ್ಲಿ ಒಬ್ಬನಾಗಿ ಪ್ರಾರ್ಥಿಸುತ್ತಾ, ಆ ಮಹಾನ್ ಸಾಧಕನಿಗೆ ನನ್ನ ನುಡಿನಮನಗಳನ್ನು ಸಲ್ಲಿಸುತ್ತೇನೆ. (3/3) pic.twitter.com/S6SHgjPJVy
— B.S. Yediyurappa (@BSYBJP) September 25, 2020
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 04:38 pm
HK News Desk
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm