ಬ್ರೇಕಿಂಗ್ ನ್ಯೂಸ್
06-05-22 06:23 pm HK Desk News ದೇಶ - ವಿದೇಶ
ನವದೆಹಲಿ, ಮೇ 6: ಕೊರೊನಾ ಕಾಲದಲ್ಲಿ ಭಾರತದಲ್ಲಿ ಅಂದಾಜು 47 ಲಕ್ಷ ಜನರು ಸತ್ತಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಲ್ಲದೆ, ಭಾರತ ಸರಕಾರ ಕೊಟ್ಟಿರುವ ಮಾಹಿತಿಗಳಿಂದ ಹೊರತಾದ ಅಂಕಿ ಸಂಖ್ಯೆಗಳನ್ನು ನೀಡುವ ಮೂಲಕ ವಿಶ್ವ ಆರೋಗ್ಯ ಸಂಸ್ಥೆಯು ಜಗತ್ತಿನ ಜನರಿಗೆ ಮತ್ತು ಆರೋಗ್ಯ ಕ್ಷೇತ್ರವನ್ನು ತಪ್ಪು ದಾರಿಗೆಳೆಯುವಂತೆ ಮಾಡಿದೆ ಎಂದು ಹೇಳಿದೆ.
ಕೋವಿಡ್ 19 ಕಾರಣದಿಂದ ಇಡೀ ಜಗತ್ತಿನಲ್ಲಿ ಅಂದಾಡು 14.9 ಮಿಲಿಯನ್ ಜನರು ಕೊರೊನಾದ ನೇರ ಮತ್ತು ಪರೋಕ್ಷ ಪರಿಣಾಮದಿಂದ ಸಾವಿಗೀಡಾಗಿದ್ದಾರೆ. ಆ ಪೈಕಿ ಬಾರತದಲ್ಲಿ 4.7 ಮಿಲಿಯನ್(47 ಲಕ್ಷ) ಜನರು ಸತ್ತಿದ್ದಾರೆ ಎಂದು ವಿಶ್ವ ಆರೋಗ್ಯ ಸಂಸ್ಥೆಯು ಎರಡು ದಿನಗಳ ಹಿಂದೆ ಹೇಳಿಕೆ ಬಿಡುಗಡೆ ಮಾಡಿತ್ತು. ಆದರೆ ಭಾರತದಲ್ಲಿ ಸರಕಾರದ ಅಧಿಕೃತ ಮಾಹಿತಿ ಪ್ರಕಾರ ಈವರೆಗೆ 5.24 ಲಕ್ಷ ಜನರು ಕೊರೊನಾ ಕಾರಣದಿಂದ ಸಾವು ಕಂಡಿದ್ದಾರೆ. 2020ರ ಡಿಸೆಂಬರ್ ನಿಂದ 2021ರ ಜನವರಿ ವರೆಗಿನ ಅವಧಿಯಲ್ಲಿ ಜಗತ್ತಿನಲ್ಲಿ ಕೊರೊನಾ ಸೋಂಕಿನ ನೇರ ಮತ್ತು ಪರೋಕ್ಷ ಪರಿಣಾಮಗಳಿಂದ ಸಾವು ಸಂಭವಿಸಿರುವುದನ್ನು ವಿಶ್ವ ಆರೋಗ್ಯ ಸಂಸ್ಥೆಯು ಪ್ರಕಟಿಸಿತ್ತು.
ಭಾರತ ಸರಕಾರ ನೀಡಿರುವ ಅಧಿಕೃತ ಮಾಹಿತಿಯಲ್ಲದೆ, ಹೆಚ್ಚಿನ ಸಂಖ್ಯೆಯನ್ನು ತೋರಿಸಿರುವ ವಿಶ್ವ ಆರೋಗ್ಯ ಸಂಸ್ಥೆಯ ಕ್ರಮವನ್ನು ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಯಾವ ಅಂಕಿ ಅಂಶಗಳ ಆಧಾರದಲ್ಲಿ ಸಾವಿನ ಸಂಖ್ಯೆಯನ್ನು ಹೆಚ್ಚು ತೋರಿಸಲಾಗಿದೆ ಎಂದು ಪ್ರಶ್ನೆ ಮಾಡಿದೆ.
ಭಾರತ ಸರಕಾರದ ಕೋವಿಡ್ ಟಾಸ್ಕ್ ಫೋರ್ಸ್ ಮುಖ್ಯಸ್ಥ ಹಾಗೂ ನೀತಿ ಆಯೋಗದ ಸದಸ್ಯ ವಿ.ಕೆ.ಪೌಲ್, ವಿಶ್ವ ಆರೋಗ್ಯ ಸಂಸ್ಥೆಯ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ನಮ್ಮಲ್ಲಿನ ಆರೋಗ್ಯ ನೀತಿಗಳು, ವ್ಯವಸ್ಥೆಗಳಲ್ಲಿ ಲೋಪ ಆಗಿದ್ದರೆ ಹೇಳಬೇಕು. ಅದು ಬಿಟ್ಟು ಮಾಧ್ಯಮಗಳದ್ದೋ, ಯಾವುದೋ ವೆಬ್ ಸೈಟ್ ಗಳದ್ದೋ ಮಾಹಿತಿಯನ್ನು ಆಧರಿಸಿ ಸಾವಿನ ಸಂಖ್ಯೆಯನ್ನು ಅಂದಾಜಿಸುವುದು ಸರಿಯಲ್ಲ. ವಿಶ್ವ ಆರೋಗ್ಯ ಸಂಸ್ಥೆಯ ಅಧಿಕಾರಿಗಳ ಕ್ರಮಕ್ಕೆ ನಾವು ಆಕ್ಷೇಪಿಸುತ್ತೇವೆ ಎಂದು ಹೇಳಿದ್ದಾರೆ.
A top health ministry source has called the World Health Organisation's finding that 4.7 million people had died in India directly due to Covid or due to the pandemic’s impact on health systems and society "mischievous".The official said: “The data was presented in advance to WHO. It could have analysed the data instead of adding a footnote at the bottom. The WHO’s action was mischievous.”
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm