ಬ್ರೇಕಿಂಗ್ ನ್ಯೂಸ್
26-09-20 01:11 pm Headline Karnataka News Network ದೇಶ - ವಿದೇಶ
ಕೀವ್, ಸೆಪ್ಟಂಬರ್ 26: ಉಕ್ರೇನ್ ವಾಯುಪಡೆಯ ವಿಮಾನ, ಪೂರ್ವಪ್ರಾಂತ್ಯದ ಖರ್ಕೀವ್ ಬಳಿ ಪತನಗೊಂಡು ಮಿಲಿಟರಿ ಸಿಬ್ಬಂದಿ ಸೇರಿದಂತೆ ಕನಿಷ್ಠ 22 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ರಕ್ಷಣಾ ಸಚಿವಾಲಯ ಪ್ರಕಟಿಸಿದೆ.
"ಇಪ್ಪತ್ತೆರಡು ಮಂದಿ ಮೃತಪಟ್ಟಿದ್ದಾರೆ" ಎಂದು ರಕ್ಷಣಾ ಖಾತೆ ಉಪಸಚಿವ ಅಂಟೋನ್ ಜೆರೆಶ್ನೆಕೋವ್ ಪ್ರಕಟಿಸಿದ್ದಾರೆ. ನಾಪತ್ತೆಯಾಗಿರುವ ಇಬ್ಬರಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ಹೇಳಿದ್ದಾರೆ. ಈ ಸಾರಿಗೆ ವಿಮಾನ 28 ಪ್ರಯಾಣಿಕರನ್ನು ಒಯ್ಯುತ್ತಿತ್ತು ಎನ್ನಲಾಗಿದ್ದು, ಇವರಲ್ಲಿ 21 ಮಂದಿ ಸೇನಾ ವಿದ್ಯಾರ್ಥಿಗಳು ಹಾಗೂ ಏಳು ಮಂದಿ ತಂತ್ರಜ್ಞರು.
"ಇದು ಆಘಾತಕಾರಿ ಘಟನೆ. ಅಪಘಾತಕ್ಕೆ ನಿಖರ ಕಾರಣ ಏನು ಎನ್ನುವುದು ಇನ್ನೂ ತಿಳಿದುಬಂದಿಲ್ಲ" ಘಟನಾ ಸ್ಥಳಕ್ಕೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆಕ್ಸಿ ಶನಿವಾರ ಭೇಟಿ ನೀಡಲಿದ್ದಾರೆ. ಈ ದುರಂತದ ಕಾರಣ ಪತ್ತೆ ಮಾಡಲು ತನಿಖಾ ಆಯೋಗವನ್ನು ನೇಮಕ ಮಾಡಲಾಗುವುದು ಎಂದು ಅವರು ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಅಂಟನೋವ್-26 ಸಾರಿಗೆ ವಿಮಾನ, ಚುಯೀವ್ ಸೇನಾ ನೆಲೆಯಿಂದ ಎರಡು ಕಿಲೋಮೀಟರ್ ದೂರದಲ್ಲಿ ಸ್ಥಳೀಯ ಕಾಲಮಾನದ ಪ್ರಕಾರ ರಾತ್ರಿ 8.50ಕ್ಕೆ ಅಪಘಾತಕ್ಕೀಡಾಗಿದೆ. ಅಪಘಾತ ಸಂಭವಿಸಿದ ತಕ್ಷಣ ವಿಮಾನಕ್ಕೆ ಬೆಂಕಿ ಹತ್ತಿಕೊಂಡಿದ್ದು, ಒಂದು ಗಂಟೆ ಕಾಲ ಉರಿಯುತ್ತಿತ್ತು ಎಂದು ಹೇಳಲಾಗಿದೆ.
Join our WhatsApp group for latest news updates (2)
video
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:23 am
HK News Desk
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
ಭಾರತದ ಮೇಲೆ ದಾಳಿಗೆ ಟರ್ಕಿ ಡ್ರೋಣ್ ಬಳಕೆ ; ಒಂದೇ ರಾ...
11-05-25 06:25 pm
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
12-05-25 11:26 am
HK News Desk
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm