ಬ್ರೇಕಿಂಗ್ ನ್ಯೂಸ್
13-08-22 01:33 pm Source: Vijayakarnataka ಸಿನಿಮಾ
ಸಂಪೂರ್ಣ ನಗೆಗಡಲಲ್ಲಿ ತೇಲಿಸುವ ‘ಹರಿಕಥೆ ಅಲ್ಲ ಗಿರಿಕಥೆ’ ( Harikathe Alla Girikathe ) ಸಿನಿಮಾ ಓಟಿಟಿಯಲ್ಲಿ ರಿಲೀಸ್ ಆಗುತ್ತಿದೆ. ಈ ಚಿತ್ರದಲ್ಲಿ ರಚನಾ ಇಂದೆರ್ ಹಾಗೂ ಪ್ರಮೋದ್ ಶೆಟ್ಟಿ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ‘ಹರಿಕಥೆ ಅಲ್ಲ ಗಿರಿಕಥೆ’ ವೂಟ್ ಸೆಲೆಕ್ಟ್ನಲ್ಲಿ ಶುಕ್ರವಾರ ಪ್ರಸಾರವಾಗಲಿದೆ. ಹೊಟ್ಟೆ ಹುಣ್ಣಾಗುವಷ್ಟು ಹಾಸ್ಯ ತುಂಬಿರುವ ಈ ಚಿತ್ರ ಪ್ರೇಕ್ಷಕರನ್ನು ನಗಿಸಲು ಆಗಸ್ಟ್ 12 ರಂದು ಓಟಿಟಿಯಲ್ಲಿ ರಿಲೀಸ್ ಆಗಲಿದೆ.
ಕರಣ್ ಅನಂತ್ ಹಾಗೂ ಅನಿರುದ್ಧ ಮಹೇಶ್, ಚಿತ್ರಕ್ಕೆ ಕಥೆ ಬರೆದು ನಿರ್ದೇಶಿಸಿದರೆ, ಸಂದೇಶ್ ನಾಗರಾಜ್ ಚಿತ್ರವನ್ನು ನಿರ್ಮಿಸಿದ್ದಾರೆ. 'ಹರಿಕಥೆ ಅಲ್ಲ ಗಿರಿಕಥೆ' ಚಿತ್ರದಲ್ಲಿ ರಿಷಭ್ ಶೆಟ್ಟಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಹೊನ್ನವಳ್ಳಿ ಕೃಷ್ಣ, ರಚನಾ ಇಂದೆರ್, ತಪಸ್ವಿನಿ ಪೂಣಚ್ಛ, ಪ್ರಮೋದ್ ಶೆಟ್ಟಿ ಇತರರು ತಾರಾಗಣದಲ್ಲಿದ್ದಾರೆ.
ಮೂವರು ಗಿರಿಗಳ ನೆಲೆಗಟ್ಟಿನಲ್ಲಿ ಈ ಚಿತ್ರವನ್ನು ಹೆಣೆಯಲಾಗಿದೆ. ಒಬ್ಬ ಗಿರಿ ಉದಯೋನ್ಮುಖ ನಿರ್ದೇಶಕನಾದರೆ, ಮತ್ತೊಬ್ಬ ವಿಲನ್ ಹಾಗೂ ಮತ್ತೋರ್ವ ನಟಿ ಗಿರಿಜಾ ಈ ಮೂವರು ಅಕಸ್ಮಿಕವಾಗಿ ಸೇರಿಕೊಳ್ಳುತ್ತಾರೆ. ಈ ಮೂವರು ಸೇರಿಕೊಂಡು ಸಿನಿಮಾ ಮಾಡಲು ನಿರ್ಧರಿಸುತ್ತಾರೆ. ಇದೇ ಚಿತ್ರದ ಮೂಲ ತಿರುಳು. ಇದೊಂದು ಪಕ್ಕಾ ಮನರಂಜನಾತ್ಮಕ ಸಿನಿಮಾವಾಗಿದ್ದು, ಪ್ರೇಕ್ಷಕರನ್ನು ಎರಡು ಗಂಟೆ ನಗಿಸಬೇಕು ಎಂಬುದೇ ಸಿನಿಮಾದ ಮೂಲ ಉದ್ದೇವಾಗಿದೆ.
ರಿಷಭ್ ಶೆಟ್ಟಿ ಹಾಗೂ ಹಿರಿಯ ನಟ ಹೊನ್ನವಳ್ಳಿ ಕೃಷ್ಣ ನಟನೆ ಗಮನಸೆಳೆಯುತ್ತದೆ. ಇಬ್ಬರ ನಡುವಿನ ಹಾಸ್ಯ ಸಂಭಾಷಣೆ, ನೋಡುಗರನ್ನು ಹಿಡಿದಿಟ್ಟುಕೊಳ್ಳುತ್ತದೆ. ಜತೆಗೆ ಸಾಕಷ್ಟು ಮನರಂಜನೆಯಾಗಿದೆ. ಈ ಮೂವರ ನಡುವಿನ ಹಾಸ್ಯ ಭರಿತ ಸಂಭಾಷಣೆಯನ್ನು ಆಗಸ್ಟ್ 12 ರಂದು ವೂಟ್ಸೆಲೆಕ್ಟ್ನಲ್ಲಿ ವೀಕ್ಷಿಸಬಹುದು.
‘ನಾನು ಮೊದಲಿಗೆ ಕಥೆ ಓದಿಗಾಗಲೇ ಬೌಲ್ಡ್ ಆದೆ. ಇದೊಂದು ಹಾಸ್ಯಭರಿತ ಒಟಿಟಿಯಲ್ಲಿ ಜನ ಯಾವ ರೀತಿ ಸ್ವೀಕರಿಸುತ್ತಾರೆ ಎಂಬುದು ಕುತೂಹಲ ಮೂಡಿಸಿದೆ. ನನಗೆ ಸಿಕ್ಕಿದ್ದ ಪಾತ್ರ ತುಂಬಾ ಸವಾಲಿನಿಂದ ಕೂಡಿತ್ತು. ವೂಟ್ನಲ್ಲಿ ಚಿತ್ರ ವೀಕ್ಷಿಸಲು ಉತ್ಸುಕನಾಗಿದ್ದೇನೆ. ಅಲ್ಲದೆ, ಜನರ ಪ್ರತಿಕ್ರಿಯೆ ಯಾವ ರೀತಿ ಬರುತ್ತದೆ ನೋಡಬೇಕು. ಇದೊಂದು ವಿಶೇಷ ಜರ್ನಿ. ಇಂಥ ತಂಡದೊಂದಿಗೆ ಕೆಲಸ ಮಾಡಿದ್ದು ತುಂಬಾ ಖುಷಿ ನೀಡಿತು’ ಎಂದು ನಟ ರಿಷಭ್ ಶೆಟ್ಟಿ ತಿಳಿಸಿದ್ದಾರೆ.
‘ಚಿತ್ರ ಹರಿಕಥೆ ಅಲ್ಲ ಗಿರಿಕಥೆ ಹಾಗೂ ನನ್ನ ಪಾತ್ರ ಗಿರಿಜಾ ಮನಸಿಗೆ ತುಂಬಾ ಹತ್ತಿರವಾಗಿದೆ. ಚಿತ್ರಕ್ಕಾಗಿ ಸಾಕಷ್ಟು ವರ್ಕ್ ಮಾಡಿದ್ದೆ. ಪ್ರತಿಯೊಂದು ಸಂಭಾಷಣೆ, ಸನ್ನಿವೇಶ ಅದ್ಭುತವಾಗಿ ಮೂಡಿ ಬಂದಿದೆ. ನಮ್ಮನಡುವಿನ ಕೆಮಿಸ್ಟ್ರಿ ಆನ್ಸ್ಕ್ರೀನ್ನಲ್ಲಿ ತುಂಬಾ ಚೆನ್ನಾಗಿ ಬಂದಿದೆ. ವೂಟ್ ಸೆಲೆಕ್ಟ್ನಲ್ಲಿ ಚಿತ್ರ ನೋಡಲು ಉತ್ಸುಕನಾಗಿರುವೆ’ ಎಂದು ಚಿತ್ರದ ನಾಯಕಿ ರಚನಾ ಇಂದೆರ್ ಹೇಳಿಕೊಂಡಿದ್ದಾರೆ.
"ಈ ಸಿನಿಮಾ ತುಂಬಾ ವಿಶೇಷದಿಂದ ಕೂಡಿದೆ. ಸಿನಿಮಾ ಚಿತ್ರಿಕರಣದ ವೇಳೆ ಉತ್ತಮ ಅನುಭವ ಉಂಟಾಯಿತು. ಸಿನಿಮಾ ವೀಕ್ಷಿಸುವಾಗಿ ಪ್ರತಿಯೊಂದು ಸೆಕೆಂಡ್ ಕೂಡ ನಗು ತರಿಸುತ್ತದೆ. ಒಂದು ಅದ್ಭುತ ತಂಡದೊಂದಿಗೆ ಕೆಲಸ ಮಾಡಿದ ತೃಪ್ತಿಯಿದೆ. ಇದೊಂದು ಅದ್ಭುತ ಜರ್ನಿಯಾಗಿತ್ತು. ಮೂವರ ಜರ್ನಿ ಕುರಿತು ಚಿತ್ರಿಕರಿಸಿರುವ ಈ ಚಿತ್ರದ ವೈಯಕ್ತಿಕ ಬದುಕನ್ನು ಅನಾವರಣಗೊಳಿಸಿದೆ. ವೂಟ್ ಮೂಲಕ ಸಿನಿರಸಿಕರಿಗೆ ಮತ್ತಷ್ಟು ಮನಮುಟ್ಟಲಿದೆ" ಎಂಬುದು ಚಿತ್ರತಂಡದ ಮಾತು.
Rachana Inder Pramod Shetty Starrer Harikathe Alla Girikathe Movie Streaming On Voot August 12.
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm