ಬ್ರೇಕಿಂಗ್ ನ್ಯೂಸ್
17-10-22 02:21 pm Source: Vijayakarnataka ಸಿನಿಮಾ
ಸ್ಯಾಂಡಲ್ವುಡ್ನಲ್ಲಿ ಕೃಷ್ಣ ಸರಣಿಯಲ್ಲಿ ಸಿನಿಮಾ ಮಾಡಿ ಯಶಸ್ಸು ಕಂಡವರು ನಿರ್ದೇಶಕ ಶಶಾಂಕ್. ಅವರ 'ಕೃಷ್ಣನ್ ಲವ್ ಸ್ಟೋರಿ', 'ಕೃಷ್ಣ ಲೀಲಾ' ಸಿನಿಮಾಗಳು ದೊಡ್ಡ ಹಿಟ್ ಆಗಿದ್ದವು. ಇದೀಗ ಶಶಾಂಕ್ ತಮ್ಮ ಸಿನಿಮಾಗೆ ಕೃಷ್ಣ ಅವರನ್ನೇ ಹೀರೋ ಆಗಿ ಆಯ್ಕೆ ಮಾಡಿಕೊಂಡಿದ್ದಾರೆ. ಹೌದು, ಶಶಾಂಕ್ ಮತ್ತು 'ಡಾರ್ಲಿಂಗ್' ಕೃಷ್ಣ ಅವರ ಕಾಂಬಿನೇಷನ್ನ ಸಿನಿಮಾ ಶುರುವಾಗಿದೆ. ಈ ಸಿನಿಮಾಗೆ 'ಕೌಸಲ್ಯಾ ಸುಪ್ರಜಾ ರಾಮ' ಅಂತ ಹೆಸರಿಟ್ಟಿರುವುದು ವಿಶೇಷ.
ಈಗಾಗಲೇ ಬೆಂಗಳೂರಿನಲ್ಲಿ ಶೂಟಿಂಗ್ ಆರಂಭಿಸಿರುವ ಚಿತ್ರತಂಡ, ಒಂದು ಸಣ್ಣ ವಿಡಿಯೋ ಟೀಸರ್ ಮೂಲಕ ಟೈಟಲ್ ಅನೌನ್ಸ್ ಮಾಡಿ, ಗಮನಸೆಳೆದಿದೆ. 'ಕೌಸಲ್ಯಾ ಸುಪ್ರಜಾ ರಾಮ' ಅನ್ನೋ ಟೈಟಲ್ಗೆ ಎಲ್ಲರಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅಂದಹಾಗೆ, ಈ ಸಿನಿಮಾವನ್ನು ಸಚಿವ ಬಿ ಸಿ ಪಾಟೀಲ್ ಅವರ ಕೌರವ ಪ್ರೊಡಕ್ಷನ್ ಮತ್ತು ಶಶಾಂಕ್ ಸಿನಿಮಾಸ್ ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ.
ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಳ್ಳುವ ನಿರ್ದೇಶಕ ಶಶಾಂಕ್, 'ನಾವು ದಿನ ಬೆಳಗ್ಗೆ ಕೇಳುವ ಸುಮಧುರ ಸುಪ್ರಭಾತದ ಮೊದಲ ಸಾಲು 'ಕೌಸಲ್ಯಾ ಸುಪ್ರಜಾ ರಾಮ..'. ಹೆಸರೇ ಹೇಳುವಂತೆ ಇದೊಂದು ತಾಯಿ ಮಗನ ಭಾವನಾತ್ಮಕ ಸನ್ನಿವೇಶಗಳಿರುವ ಚಿತ್ರ. ಹಾಗಂತ ನಮ್ಮ ಚಿತ್ರದಲ್ಲಿ ಮನರಂಜನೆಗೆ ಕೊರತೆಯಿಲ್ಲ. ಉತ್ತಮ ಮನರಂಜನೆ ಹಾಗೂ ಸೆಂಟಿಮೆಂಟ್ ಎರಡು ಇರುವ, ಕುಟುಂಬ ಸಮೇತ ನೋಡಬಹುದಾದ ಸುಂದರ ಕೌಟುಂಬಿಕ ಚಿತ್ರ. ಈ ಚಿತ್ರದ ನಾಯಕರಾಗಿ ಡಾರ್ಲಿಂಗ್ ಕೃಷ್ಣ ನಟಿಸುತ್ತಿದ್ದು, ಅವರ ತಾಯಿ - ತಂದೆ ಪಾತ್ರದಲ್ಲಿ ಸುಧಾ ಬೆಳವಾಡಿ, ರಂಗಾಯಣ ರಘು ಅಭಿನಯಿಸುತ್ತಿದ್ದಾರೆ' ಎಂದು ಮಾಹಿತಿ ಹಂಚಿಕೊಳ್ಳುತ್ತಾರೆ.
'ಈಗಾಗಲೇ ಬೆಂಗಳೂರಿನಲ್ಲಿ ಚಿತ್ರೀಕರಣ ನಡೆಯುತ್ತಿದೆ. ನಮ್ಮ ಶಶಾಂಕ್ ಸಿನಿಮಾಸ್ ಹಾಗೂ ಬಿ.ಸಿ.ಪಾಟೀಲ್ ಅವರ ಕೌರವ ಪ್ರೊಡಕ್ಷನ್ ಹೌಸ್ ಜಂಟಿಯಾಗಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ನಾನು ಬಿ ಸಿ ಪಾಟೀಲ್ ಅಭಿನಯದ 'ಕೌರವ' ಚಿತ್ರದಲ್ಲಿ ಎಸ್. ಮಹೇಂದರ್ ಅವರ ಬಳಿ ಕೆಲಸ ಮಾಡಿದ್ದೆ. ಆಗಿನಿಂದಲೂ ಬಿ ಸಿ ಪಾಟೀಲ್ ಅವರು ಪರಿಚಯ. ಈಗ ಅವರ ಜೊತೆ ನಿರ್ಮಾಣ ಮಾಡುತ್ತಿರುವುದು ಸಂತಸ ತಂದಿದೆ' ಎನ್ನುತ್ತಾರೆ ಶಶಾಂಕ್.
ಕನ್ನಡ ಟೈಟಲ್ ಸಿಕ್ಕ ಖುಷಿಯಲ್ಲಿ ಡಾರ್ಲಿಂಗ್ ಕೃಷ್ಣ
'ಸದಭಿರುಚಿ ಚಿತ್ರಗಳ ನಿರ್ದೇಶಕ ಶಶಾಂಕ್ ಅವರ ನಿರ್ದೇಶನದಲ್ಲಿ ನಟಿಸಬೇಕೆಂಬ ಆಸೆ ಈಗ ಈಡೇರಿದೆ. 'ಕೌಸಲ್ಯಾ ಸುಪ್ರಜಾ ರಾಮ' ಸುಂದರ ಶೀರ್ಷಿಕೆ. 'ಲವ್ ಮಾಕ್ಟೇಲ್', 'ಲಕ್ಕಿ ಮ್ಯಾನ್' ಸೇರಿದಂತೆ ನನ್ನ ಅನೇಕ ಚಿತ್ರಗಳ ಶೀರ್ಷಿಕೆ ಇಂಗ್ಲಿಷ್ನಲ್ಲಿದೆ. ಈಗ ಇಂಗ್ಲಿಷ್ ಇಲ್ಲದ ಶೀರ್ಷಿಕೆ ಸಿಕ್ಕಿದೆ. ಕಥೆ ಹಾಗೂ ನನ್ನ ಪಾತ್ರ ತುಂಬಾ ಚೆನ್ನಾಗಿದೆ' ಎಂದರು ಡಾರ್ಲಿಂಗ್ ಕೃಷ್ಣ.
ಈ ಚಿತ್ರದಲ್ಲಿ ಅಚ್ಯುತ್ ಕುಮಾರ್, ನಿರ್ದೇಶಕ ಬಿ.ಎಂ. ಗಿರಿರಾಜ್ ಕೂಡ ನಟಿಸುತ್ತಿದ್ದಾರೆ. ಇಬ್ಬರು ನಾಯಕಿಯರಿರುತ್ತಾರೆ. ಅದರಲ್ಲಿ ಒಬ್ಬರು ಹೊಸಬರು. ಸದ್ಯದಲ್ಲೇ ನಾಯಕಿಯರ ಪರಿಚಯ ಮಾಡಿಸಲಿದೆ ಚಿತ್ರತಂಡ. ಐದು ಹಾಡುಗಳಿದೆ. ಅರ್ಜುನ್ ಜನ್ಯ ಸಂಗೀತ ನೀಡುತ್ತಿದ್ದಾರೆ. ಸುಜ್ಞಾನ್ ಈ ಚಿತ್ರದ ಛಾಯಾಗ್ರಾಹಕರು. ಹನುಮಂತ ರಾವ್ ಅವರು ಸಹ ನಿರ್ಮಾಪಕರಾಗಿದ್ದಾರೆ.
Darling Krishna And Director Shashanks New Movie Titled Kousalya Supraja Rama.
15-03-25 03:55 pm
HK News Desk
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 08:32 pm
Mangalore Correspondent
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
Mangalore, VHP, NIA, Illegal Arms: ಕರಾವಳಿಯಲ್ಲ...
14-03-25 10:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm