ಬ್ರೇಕಿಂಗ್ ನ್ಯೂಸ್
16-11-22 12:38 pm Source: Vijayakarnataka ಸಿನಿಮಾ
60ರ ದಶಕದಲ್ಲಿ ತೆರೆಕಂಡ ಡಾ. ರಾಜ್ಕುಮಾರ್ ಹಾಗೂ ಲೀಲಾವತಿ ಅಭಿನಯಿಸಿದ್ದ 'ವೀರ ಕೇಸರಿ' ಚಿತ್ರದ 'ಮೆಲ್ಲುಸಿರೆ ಸವಿಗಾನ..' ಹಾಡು ದೊಡ್ಡ ಹಿಟ್ ಆಗಿತ್ತು. ಈಗಲೂ ಕೂಡ ಈ ಹಾಡನ್ನು ಸಿನಿಪ್ರಿಯರು ಗುನುಗುತ್ತಾರೆ. ಇದೀಗ ಅದೇ ಹಾಡನ್ನು ಮತ್ತೊಮ್ಮೆ ಬಳಕೆ ಮಾಡಿಕೊಳ್ಳಲಾಗಿದೆ. 'ಸ್ಪೂಕಿ ಕಾಲೇಜ್' ಚಿತ್ರದಲ್ಲಿ ಈ ಹಾಡನ್ನು ಮರುಬಳಕೆ ಮಾಡಿಕೊಳ್ಳಲಾಗಿದೆ. ವಿಶೇಷವೆಂದರೆ, ಈ ಹಾಡಿನಲ್ಲಿ 'ಏಕ್ ಲವ್ ಯಾ' ಚಿತ್ರದ ಖ್ಯಾತಿಯ ರೀಷ್ಮಾ ನಾಣಯ್ಯ ಹೆಜ್ಜೆ ಹಾಕಿದ್ದಾರೆ. ಇತ್ತೀಚಿಗೆ ಈ ಹಾಡಿನ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಹಿರಿಯ ನಿರ್ದೇಶಕ ಭಗವಾನ್, ಸಾಹಿತಿ ಪದ್ಮಶ್ರೀ ದೊಡ್ಡರಂಗೇಗೌಡ ಮುಂತಾದವರು ಕಾರ್ಯಕ್ರಮದಲ್ಲಿದ್ದರು.
ಹಳೇ ಹಾಡಿಗೆ ಎಲ್ಲಿಯೂ ಲೋಪವಾಗಿಲ್ಲ ಎಂದ ಭಗವಾನ್
ಈ ವೇಳೆ ಮಾತನಾಡಿದ ನಿರ್ದೇಶಕ ಭಗವಾನ್, 'ಆ ಕಾಲದಲ್ಲಿ ಸಿನಿಮಾ ಮಾಡುವುದು ಅಷ್ಟು ಸುಲಭ ಇರಲಿಲ್ಲ. ಈಗ ತಂತ್ರಜ್ಞಾನ ಮುಂದುವರೆದಿದೆ. 'ಮೆಲ್ಲುಸಿರೆ ಸವಿಗಾನ..' ಹಾಡಿಗೆ ಯಾವುದೇ ಲೋಪವಾಗದಂತೆ ಅಚ್ಚುಕಟ್ಟಾಗಿ ಈ ಚಿತ್ರದಲ್ಲಿ ಬಳಸಿಕೊಂಡಿದ್ದಾರೆ. ರೀಷ್ಮಾ ನಾಣಯ್ಯ ಅಭಿನಯ, ಭೂಷಣ್ ನೃತ್ಯ ನಿರ್ದೇಶನ ಎಲ್ಲವೂ ಚೆನ್ನಾಗಿದೆ. ನಿರ್ದೇಶಕ ಭರತ್ ನನ್ನ ಶಿಷ್ಯ. ಚಿತ್ರಕ್ಕೆ ಒಳ್ಳೆಯ ನಾಯಕಿ..' ಎಂದು ಹಾರೈಸಿದರು. ಸಾಹಿತಿ ದೊಡ್ಡರಂಗೇಗೌಡ ಮಾತನಾಡಿ, 'ಅರವತ್ತರ ದಶಕದ ಈ ಹಾಡನ್ನು ಈಗಿನ ರೀತಿಗೆ ಚಿತ್ರೀಕರಿಸುವುದು ಕಷ್ಟಸಾಧ್ಯ. ಅದರೆ ಅದನ್ನು ನಿರ್ದೇಶಕ ಭರತ್ ಸಾಧ್ಯವಾಗಿಸಿದ್ದಾರೆ' ಎಂದರು.
ಈ ಹಾಡಿಗೆ ದಾಂಡೇಲಿಯಲ್ಲಿ ಚಿತ್ರೀಕರಣ
ಹಾಡನ್ನು ಚಿತ್ರೀಕರಿಸಿದ ಬಗ್ಗೆ ಮಾಹಿತಿ ಹಂಚಿಕೊಂಡ ನಿರ್ದೇಶಕ ಭರತ್, 'ಈ ಹಾಡನ್ನು ದಾಂಡೇಲಿಯಲ್ಲಿ ಚಿತ್ರಿಸಿಕೊಳ್ಳಲಾಯಿತು. ಸುಮಾರು 250 ಮಂದಿ ಇದಕ್ಕಾಗಿ ಕೆಲಸ ಮಾಡಿದ್ದಾರೆ. ಭೂಷಣ್ ನೃತ್ಯ ನಿರ್ದೇಶನದಲ್ಲಿ ರೀಷ್ಮಾ ನಾಣಯ್ಯ ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಈ ಹಾಡಿಗೆ ಅಜನೀಶ್ ಲೋಕನಾಥ್ ಹೊಸ ಸ್ಪರ್ಶ ನೀಡಿದ್ದಾರೆ. ಐಶ್ವರ್ಯಾ ರಂಗರಾಜನ್ ಗಾಯನ ಹಾಗೂ ಮನೋಹರ್ ಜೋಷಿ ಅವರ ಛಾಯಾಗ್ರಹಣ ಈ ಹಾಡಿನ ಅಂದವನ್ನು ಮತ್ತಷ್ಟು ಹೆಚ್ಚಿಸಿದೆ. ವಿಶ್ವಾಸ್ ಕಲಾ ನಿರ್ದೇಶನ ಕೂಡ ಕಣ್ಮನ ಸೆಳೆಯುತ್ತದೆ. ಹಾಡು ಹಾಗೂ ಚಿತ್ರ ಅದ್ದೂರಿಯಾಗಿ ಮೂಡಿಬರಲು ನಿರ್ಮಾಪಕ ಎಚ್ ಕೆ ಪ್ರಕಾಶ್ ಅವರ ಸಹಕಾರ ಹಾಗೂ ನನ್ನ ಚಿತ್ರತಂಡದ ಶ್ರಮ ಕಾರಣ. ಸದ್ಯದಲ್ಲೇ ಚಿತ್ರ ಬಿಡುಗಡೆಯಾಗುತ್ತಿದೆ' ಎಂದರು.
'ಏಕ್ ಲವ್ ಯಾ' ಸಿನಿಮಾದಿಂದ ಸ್ಯಾಂಡಲ್ವುಡ್ನಲ್ಲಿ ಗುರುತಿಸಿಕೊಂಡಿರುವ ನಟಿ ರೀಷ್ಮಾ ನಾಣಯ್ಯ, ಈಚೆಗಷ್ಟೇ 'ರಾಣ' ಚಿತ್ರದಲ್ಲೂ ನಟಿಸಿದ್ದಾರೆ. ಈಗ 'ಮೆಲ್ಲುಸಿರೆ ಸವಿಗಾನ..' ಚಿತ್ರಕ್ಕಾಗಿ ಹೆಜ್ಜೆ ಹಾಕಿದ್ದಾರೆ. ಅಂದಹಾಗೆ, ಈ ಸಿನಿಮಾದಲ್ಲಿ ಪ್ರೀಮಿಯರ್ ಪದ್ಮಿನಿ ಖ್ಯಾತಿಯ ವಿವೇಕ್ ಸಿಂಹ ಹೀರೋ ಆಗಿದ್ದರೆ, ದಿಯಾ ಸಿನಿಮಾ ಖ್ಯಾತಿಯ ಖುಷಿ ರವಿ ನಾಯಕಿ. ಛಾಯಾಗ್ರಹಣವನ್ನು ಮನೋಹರ್ ಜೋಷಿ ಮಾಡಿದ್ದಾರೆ. 'ರಂಗಿತರಂಗ', 'ಅವನೇ ಶ್ರೀಮನ್ನಾರಾಯಣ' ಖ್ಯಾತಿಯ ಎಚ್ ಕೆ ಪ್ರಕಾಶ್ ಈ ಸಿನಿಮಾಕ್ಕೆ ಹಣ ಹಾಕಿದ್ದಾರೆ.
Reeshma Nanaiah Kushee Ravi Vivek Simha Starrer Spooky College Movie Mellusire Song Released.
15-03-25 03:55 pm
HK News Desk
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 04:11 pm
Mangalore Correspondent
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
Mangalore, VHP, NIA, Illegal Arms: ಕರಾವಳಿಯಲ್ಲ...
14-03-25 10:35 pm
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm