ಬ್ರೇಕಿಂಗ್ ನ್ಯೂಸ್
27-11-22 01:09 pm HK News Desk ಸಿನಿಮಾ
ಕಾಂತಾರಕ್ಕೆ ಬಂಡವಾಳ ಹೂಡಿದ ಹೊಂಬಾಳೆ ಫಿಲ್ಮ್ಸ್ಗೆ ಭರ್ಜರಿ ಆದಾಯ ಸಿಕ್ಕಿದೆ. 16 ಕೋಟಿಯ ಸಿನಿಮಾ ಈಗ 400 ಕೋಟಿಗೂ ಹೆಚ್ಚು ಗಳಿಸಿ ಮುನ್ನುಗ್ಗುತ್ತಿದೆ.
ಅಂದಹಾಗೆ ಪುಷ್ಪಾ ಸಿನಿಮಾದ ಬಜೆಟ್ ಹಾಗೂ ಕಲೆಕ್ಷನ್ ಅನ್ನು ಕಾಂತಾರ ಸಿನಿಮಾದ ಬಜೆಟ್ ಹಾಗೂ ಕಲೆಕ್ಷನ್ಗೆ ಹೋಲಿಕೆ ಮಾಡಲಾಗುತ್ತಿದೆ.

160ರಿಂದ 170 ಕೋಟಿ ಬಜೆಟ್ನಲ್ಲಿ ಸಿದ್ಧವಾದ ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ಅಭಿನಯದ ಪುಷ್ಪಾ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ 350 ಕೋಟಿಯಷ್ಟು ಕಲೆಕ್ಷನ್ ಮಾಡಿದೆ.
ಬರೀ 16 ಕೋಟಿಯಲ್ಲಿ ರೆಡಿಯಾದ ಕಾಂತಾರ ಸಿನಿಮಾ 350 ಕೋಟಿಗೂ ಹೆಚ್ಚು ಕಲೆಕ್ಷನ್ ಮಾಡಿದೆ. ಇದೀಗ ನೆಟ್ಟಿಗರು ಎರಡೂ ಸಿನಿಮಾಗಳ ಬಜೆಟ್ ಹಾಗೂ ಬಾಕ್ಸ್ ಆಫೀಸ್ ಕಲೆಕ್ಷನ್ ಮೊತ್ತ ಹೋಲಿಕೆ ಮಾಡುತ್ತಿದ್ದಾರೆ.

ಎಲ್ಲೆಲ್ಲಿ ಎಷ್ಟೆಷ್ಟು ಗಳಿಸಿದೆ 'ಕಾಂತಾರ'?
'ಕಾಂತಾರ' ಸಿನಿಮಾವು ವಿಶ್ವಾದ್ಯಂತ 400 ಕೋಟಿ ರೂ. ಗಳಿಸಿದ್ದು, ಅದರಲ್ಲಿ ಕರ್ನಾಟಕದ ಪಾಲೇ ಜಾಸ್ತಿ ಇದೆ. ಈ ಸಿನಿಮಾವು ಕರ್ನಾಟಕದಲ್ಲಿ ಸುಮಾರು 168.50 ಕೋಟಿ ರೂ. ಕಲೆಕ್ಷನ್ ಆಗಿದೆ. ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿ 'ಕಾಂತಾರ' ಸಿನಿಮಾವು 60 ಕೋಟಿ ರೂ. ಕಲೆಕ್ಷನ್ ಮಾಡಿದೆ. ತಮಿಳುನಾಡಿನಲ್ಲಿ 12.70 ಕೋಟಿ ರೂ. ಮತ್ತು ಕೇರಳದಲ್ಲಿ 19.20 ಕೋಟಿ ರೂ. ಗಳಿಕೆ ಆಗಿದೆ. 'ಕಾಂತಾರ' ಸಿನಿಮಾಗೆ ವಿದೇಶದಲ್ಲಿ ಸಿಕ್ಕಿರುವುದು ಬರೋಬ್ಬರಿ 44.50 ಕೋಟಿ ರೂ. ಕಲೆಕ್ಷನ್. ಹಾಗೆಯೇ, ಉತ್ತರ ಭಾರತದಲ್ಲಿ ಸುಮಾರು 96 ಕೋಟಿ ರೂ. ನಿರ್ಮಾಪಕರಿಗೆ ಸಿಕ್ಕಿದೆ. ಒಟ್ಟು ವಿಶ್ವಾದ್ಯಂತ 400.90 ಕೋಟಿ ರೂಪಾಯಿ ಹಣ 'ಕಾಂತಾರ'ಗೆ ಸಿಕ್ಕಿದೆ.

ಹೊಂಬಾಳೆ ಫಿಲ್ಮ್ಸ್ ಬ್ಯಾನರ್ನಡಿ ವಿಜಯ್ ಕಿರಗಂದೂರು ನಿರ್ಮಿಸಿರುವ ‘ಕಾಂತಾರ’ ಚಿತ್ರವು ಯಶಸ್ವಿಯಾಗಿ 50 ದಿನಗಳನ್ನು ಪೂರೈಸಿದೆ. ಸೆ. 30ರಂದು ಬಿಡುಗಡೆಯಾದ ಚಿತ್ರವು ರಾಜ್ಯದ 300ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲದೆ, ವಿದೇಶಗಳಲ್ಲೂ ಹಲವು ಚಿತ್ರಮಂದಿರಗಳಲ್ಲಿ 50 ದಿನಗಳನ್ನು ಮುಗಿಸಿದೆ. ಬರೀ ಕನ್ನಡವಷ್ಟೇ ಅಲ್ಲ, ತೆಲುಗು, ತಮಿಳು, ಹಿಂದಿ ಮತ್ತು ಮಲಯಾಳಂಗೆ ಡಬ್ ಆಗಿರುವ ‘ಕಾಂತರ’, ಅಲ್ಲೂ ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿದ್ದು, ಸದ್ಯದಲ್ಲೇ ಅಲ್ಲೂ 50 ದಿನಗಳನ್ನು ಪೂರೈಸಲಿದೆ. ಓಟಿಟಿಯಲ್ಲಿ ಸಿನಿಮಾ ತೆರೆಕಂಡ ಬಳಿಕವೂ 'ಕಾಂತಾರ' ಚಿತ್ರಮಂದಿರದಲ್ಲಿ ಪ್ರದರ್ಶನವಾಗುವುದು ಖಚಿತ. ಯಾಕೆಂದರೆ, ಈಗಲೂ ಸಿನಿಮಾಗೆ ಸಖತ್ ಕ್ರೇಜ್ ಇದೆ.
No one would have thought that a story originating from regional grounds will go on to book such a phenomenal global presence. Kantara is that cinematic wonder that comes once in a lifetime and goes on to create a rage. Ever since its release, the film has been ringing the books of the box office with its massive collection figures. Be it in India or internationally, Kantara is constantly registering a great rise at the box office and now its total collection has crossed the figure of 400 Cr. Gross and still counting.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm