ಬ್ರೇಕಿಂಗ್ ನ್ಯೂಸ್
05-01-23 01:18 pm Source: Vijayakarnataka ಸಿನಿಮಾ
'ಡಾರ್ಲಿಂಗ್' ಕೃಷ್ಣ ಮತ್ತು ಮಿಲನಾ ನಾಗರಾಜ್ ಜೋಡಿ ಈವರೆಗೂ ಹಲವು ಸಿನಿಮಾಗಳಲ್ಲಿ ಒಟ್ಟಿಗೆ ನಟಿಸಿದ್ದಾರೆ. 'ಲವ್ ಮಾಕ್ಟೇಲ್' ಸಿನಿಮಾ ಈ ಇಬ್ಬರಿಗೂ ದೊಡ್ಡ ಬ್ರೇಕ್ ನೀಡಿತ್ತು. ಆನಂತರ ಈ ಜೋಡಿ 'ಲವ್ ಮಾಕ್ಟೇಲ್ 2' ಕೂಡ ಮಾಡಿದ್ದರು. 'ಡಾರ್ಲಿಂಗ್' ಕೃಷ್ಣ ಮತ್ತು ಮಿಲನಾ ನಾಗರಾಜ್ ಒಟ್ಟಿಗೆ ನಟಿಸಿರುವ ಮತ್ತೊಂದು ಸಿನಿಮಾ ಈ ವಾರ ತೆರೆಗೆ ಬರುತ್ತಿದೆ. ಹೌದು, 'Mr. ಬ್ಯಾಚುಲರ್' ಹೆಸರಿನ ಹೊಸ ಸಿನಿಮಾದಲ್ಲಿ ಕೃಷ್ಣ ಮತ್ತು ಮಿಲನಾ ನಟಿಸಿದ್ದಾರೆ. ನಿಮಿಕಾ ರತ್ನಾಕರ್ ಕೂಡ ಈ ಸಿನಿಮಾದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. 'Mr. ಬ್ಯಾಚುಲರ್' ಸಿನಿಮಾ ಜನವರಿ 6ರಂದು ರಿಲೀಸ್ ಆಗುತ್ತಿದೆ.
ಈ ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡ 'ಡಾರ್ಲಿಂಗ್' ಕೃಷ್ಣ, 'ನಾನು ಮೊದಲೇ ಹೇಳಿದ ಹಾಗೆ, ಈ ಚಿತ್ರದ ಮೇಲೆ ನನಗೆ ವಿಶೇಷ ಪ್ರೀತಿ ಇದೆ. ಯಾಕೆಂದರೆ, ನಾನು ಈ ಚಿತ್ರ ಒಪ್ಪಿಕೊಂಡ ನಂತರ ನಿರ್ಮಾಪಕನಾಗಿ 'ಲವ್ ಮಾಕ್ಟೇಲ್' ಸಿನಿಮಾ ಮಾಡಿದೆ. ಈ ಚಿತ್ರದ ಸಂಭಾವನೆಯಿಂದಲೇ ನಾನು 'ಲವ್ ಮಾಕ್ಟೇಲ್' ಶುರು ಮಾಡಿದ್ದು. ಹಾಗಾಗಿ ನನಗೆ ಈ ಚಿತ್ರದ ಮೇಲೆ ವಿಶೇಷ ಪ್ರೀತಿ. ಇನ್ನುಈ ಚಿತ್ರದ ಬಗ್ಗೆ ಹೇಳಬೇಕೆಂದರೆ ನಿರ್ದೇಶಕ ನಾಯ್ಡು ಅವರು ಒಳ್ಳೆಯ ಕಥೆ ಆಯ್ಕೆ ಮಾಡಿಕೊಂಡು ಈ ಸಿನಿಮಾ ಮಾಡಿದ್ದಾರೆ. ಅವರು ಕಥೆ ಹೇಳಲು ಬಂದಾಗಲೇ, ಕಥೆ ಕೇಳಿ ಸಾಕಷ್ಟು ಎಂಜಾಯ್ ಮಾಡಿದ್ದೆ. ನಾನು ಇಲ್ಲಿಯವರೆಗೆ ಯಾವ ಚಿತ್ರದಲ್ಲೂ ಹಾಕಿರದಷ್ಟು ಬಟ್ಟೆಗಳನ್ನು ಈ ಚಿತ್ರದಲ್ಲಿ ಹಾಕಿದ್ದೇನೆ. ಅದಕ್ಕೆ ನಿರ್ದೇಶಕರೇ ಕಾರಣ. ಅವರಿಗೆ ಸಾಕಷ್ಟು ಅಭಿರುಚಿ ಇದೆ. ಮಿಲನಾ ನಾಗರಾಜ್ ಅವರು ಈ ಚಿತ್ರದ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ. ನಿಮಿಕಾ ರತ್ನಾಕರ್ ಸೇರಿದಂತೆ ಎಲ್ಲಾ ಕಲಾವಿದರ ಅಭಿನಯ ಹಾಗೂ ತಂತ್ರಜ್ಞರ ಕಾರ್ಯವೈಖರಿ ಚೆನ್ನಾಗಿದೆ..' ಎಂದರು.
ಚಿತ್ರದ ಬಗ್ಗೆ ಮಾತನಾಡಿದ ನಟಿ ಮಿಲನಾ ನಾಗರಾಜ್, 'ನಿರ್ದೇಶಕ ನಾಯ್ಡು ಅವರು ಈ ಚಿತ್ರದ ಕಥೆ ಹೇಳಿದಾಗಲೇ ಇಷ್ಟವಾಯಿತು. ನಾನು ಕೂಡ ಈ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಅಭಿನಯಿಸಿದ್ದೇನೆ. ಚಿತ್ರಕ್ಕೆ ಒಳ್ಳೆಯದಾಗಲಿ..' ಎಂದು ಹೇಳಿದರು. ನಾಯಕಿಯಾಗಿ ಕಾಣಿಸಿಕೊಂಡಿರುವ ನಿಮಿಕಾ ರತ್ನಾಕರ್ಗೆ ಈ ಸಿನಿಮಾದಲ್ಲಿ ನಟಿಸಿದ್ದು ಸಖತ್ ಖುಷಿ ನೀಡಿದೆಯಂತೆ.
ಈ ಸಿನಿಮಾವನ್ನು ನಾಯ್ಡು ನಿರ್ದೇಶನ ಮಾಡಿದ್ದಾರೆ. ಇದು ಅವರ ನಿರ್ದೇಶನದ ಮೊದಲ ಸಿನಿಮಾ. 'ನಾನು ಖ್ಯಾತ ನಿರ್ದೇಶಕ ಪುರಿ ಜಗನ್ನಾಥ್ ಅವರ ಬಳಿ ಕೆಲಸ ಮಾಡುತ್ತಿದ್ದೆ. ಇದು ನನ್ನ ಮೊದಲ ನಿರ್ದೇಶನದ ಚಿತ್ರ. 'ಡಾರ್ಲಿಂಗ್' ಕೃಷ್ಣ ಸೇರಿದಂತೆ ಎಲ್ಲಾ ಕಲಾವಿದರ ಹಾಗೂ ತಂತ್ರಜ್ಞರ ಸಹಕಾರದಿಂದ ಚಿತ್ರ ಚೆನ್ನಾಗಿ ಮೂಡಿಬಂದಿದೆ..' ಎಂದರು ನಾಯ್ಡು. ಈ ಸಿನಿಮಾಗೆ ಶ್ರೀನಿವಾಸ್, ಹನುಮಂತ ರಾವ್ ಹಾಗೂ ಸ್ವರ್ಣಲತಾ ಹಣ ಹಾಕಿದ್ದಾರೆ. ಹಾಡುಗಳಿಗೆ ಮಣಿಕಾಂತ್ ಕದ್ರಿ ಸಂಗೀತ ನಿರ್ದೇಶನ ಮಾಡಿದ್ದಾರೆ. ಛಾಯಾಗ್ರಹಣ ಮತ್ತು ಸಂಕಲನವನ್ನು ಶ್ರೀ ಕ್ರೇಜಿಮೈಂಡ್ಸ್ ಮಾಡಿದ್ದಾರೆ.
Darling Krishna Milana Nagaraj Nimika Ratnakar Starrer Mr Bachelor Movie Will Release On January 6th.
15-03-25 12:33 pm
HK News Desk
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
Shivarama Hebbar, S.T. Somashekar, Lingaraj P...
14-03-25 03:39 pm
Ranya Rao Gold Smuggling, Ips Ramchandra Rao:...
14-03-25 02:20 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 12:35 pm
Mangalore Correspondent
Mangalore, VHP, NIA, Illegal Arms: ಕರಾವಳಿಯಲ್ಲ...
14-03-25 10:35 pm
Mohan Gowda, Mangalore: ಬಿ.ಸಿ.ರೋಡಿನಲ್ಲಿ ಮಾ.16...
14-03-25 09:39 pm
Mangalore tulu Artist Vivek Madur death: ಕಲಾ...
14-03-25 11:02 am
Mangalore Accident, Kapikad, Murder: ನೆರೆಮನೆ...
13-03-25 09:20 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm