ಬ್ರೇಕಿಂಗ್ ನ್ಯೂಸ್
            
                        10-01-23 01:16 pm Source: news18 ಸಿನಿಮಾ
            ಕಾಂತಾರ ಸಿನಿಮಾ ಎರಡು ಆಸ್ಕರ್ ಕ್ವಾಲಿಫಿಕೇಷನ್ಗಳನ್ನು ಪಡೆದಿದ್ದು ಹೊಂಬಾಳೆ ಫಿಲ್ಮ್ಸ್ ಈ ಗುಡ್ನ್ಯೂಸ್ ಅನ್ನು ಅಭಿಮಾನಿಗಳ ಜೊತೆ ಶೇರ್ ಮಾಡಿದೆ. ಕನ್ನಡದ 2022ರ ಟಾಪ್ ಸಿನಿಮಾ ಕಾಂತಾರ ತಂಡ ಆಸ್ಕರ್ಗೆ ಅರ್ಜಿ ಸಲ್ಲಿಸಿದ್ದು ಗೊತ್ತೇ ಇದೆ. ಈಗ ಈ ಸಂಬಂಧ ಹೊಸ ಅಪ್ಡೇಟ್ ಒಂದು ಹೊರಬಿದ್ದಿದೆ.
ತ್ರಿಬಲ್ ಆರ್ ಸೇರಿದಂತೆ ಭಾರತದಲ್ಲಿ ಹಲವು ಟಾಪ್ ಸಿನಿಮಾ ಆಸ್ಕರ್ಗೆ ಅರ್ಜಿ ಸಲ್ಲಿಸಿದೆ. ಕಾಂತಾರ ಸಿನಿಮಾ ಕಡೆಯಿಂದಲೂ ಅರ್ಜಿ ಸಲ್ಲಿಸಲಾಗಿದೆ ಎಂದು ಈ ಹಿಂದೆ ನಿರ್ಮಾಪಕ ವಿಜಯ್ ಕಿರಗಂದೂರು ಹೇಳಿದ್ದರು.

ಇದೀಗ ಈ ಬಗ್ಗೆ ಹೊಂಬಾಳೆ ಫಿಲ್ಮ್ಸ್ ಹೊಸ ಅಪ್ಡೇಟ್ ಹಂಚಿಕೊಂಡಿದ್ದಾರೆ. ಆಸ್ಕರ್ ಹಾಗೂ ಕಾಂತಾರ ಸಂಬಂಧ ಗುಡ್ನ್ಯೂಸ್ ಕೊಟ್ಟಿದ್ದಾರೆ. ಕಾಂತಾರ 2 ಆಸ್ಕರ್ ಕ್ವಾಲಿಫಿಕೇಷನ್ಗಳನ್ನು ಗಳಿಸಿದೆ. ನಮ್ಮನ್ನು ಬೆಂಬಲಿಸಿದ ಎಲ್ಲರಿಗೂ ಹೃದಯಪೂರ್ವಕ ಧನ್ಯವಾದಗಳು. ನಿಮ್ಮೆಲ್ಲರ ಬೆಂಬಲದೊಂದಿಗೆ ಈ ಜರ್ನಿಯನ್ನು ಎದುರು ನೋಡುತ್ತಿದ್ದೇವೆ. ಆಸ್ಕರ್ನಲ್ಲಿ ಸಿನಿಮಾ ಶೈನ್ ಆಗುವುದನ್ನು ನೋಡಲು ಕಾಯುತ್ತಿದ್ದೇವೆ ಎಂದು ಬರೆದಿದ್ದಾರೆ.

ಟ್ವೀಟ್ ಮೂಲಕ ಹೊಂಬಾಳೆ ಫಿಲ್ಮ್ಸ್ ಖುಷಿ ಹಂಚಿಕೊಂಡ ತಕ್ಷಣ ಅಭಿಮಾನಿಗಳು ಶುಭಾಶಯಗಳ ಸುರಿಮಳೆ ಸುರಿಸಿದ್ದಾರೆ. ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ. ಕಾಂತಾರ ಸಿನಿಮಾಗೆ ರಿಷಬ್ ಶೆಟ್ಟಿ ಕತೆ ಬರೆದು ನಿರ್ದೇಶನ ಮಾಡಿದ್ದು ಶಿವ ಎಂಬ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾ ಈಗಾಗಲೇ 450 ಕೋಟಿಗೂ ಹೆಚ್ಚು ಗಳಿಸಿದೆ. ಸಿನಿಮಾದಲ್ಲಿ ರಿಷಬ್ ಜೊತೆ ಸಪ್ತಮಿ ಗೌಡ, ಅಚ್ಯುತ್ ಕುಮಾರ್, ಕಿಶೋರ್ ಕುಮಾರ್, ಪ್ರಮೋದ್ ಶೆಟ್ಟಿ ಕೂಡಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
            
            
            Kantara receives 2 Oscar qualifications hombale films shares good news.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm