ಬ್ರೇಕಿಂಗ್ ನ್ಯೂಸ್
            
                        12-01-23 01:48 pm Source: news18 ಸಿನಿಮಾ
            ಇದೇ ಥೈಕ್ಕುಡಂ ಬ್ರಿಡ್ಜ್ ಟೀಮ್ನ ಸಂಗೀತ ಸಂಜೆ ಕಾರ್ಯಕ್ರಮವೊಂದು ಬೆಂಗಳೂರಿನಲ್ಲಿ ನಡೆಯಲಿದೆ. ಇತ್ತೀಚಿಗಷ್ಟೇ ಭಾರೀ ಜನಮೆಚ್ಚುಗೆ ಗಳಿಸಿದ ಕನ್ನಡದ ಸಿನಿಮಾ ಕಾಂತಾರದ ವರಾಹ ರೂಪಂ ಹಾಡಿಗೆ ಕೃತಿಚೌರ್ಯದ ಆರೋಪ ಎದುರಾಗಿತ್ತು. ಈ ಆರೋಪ ಮಾಡಿದ್ದು ಥೈಕ್ಕುಡಂ ಬ್ರಿಡ್ಜ್.
ಥೈಕ್ಕುಡಂ ಬ್ರಿಡ್ಜ್ ವಿರುದ್ಧ ಕಾಂತಾರ ಅಭಿಮಾನಿಗಳು ಭಾರೀ ಸಿಟ್ಟಿಗೆದ್ದಿದ್ದರು. ಕೊನೆಗೆ ಥೈಕ್ಕುಡಂ ಬ್ರಿಡ್ಜ್ vs ಕಾಂತಾರ ಕೋರ್ಟ್ ಮೆಟ್ಟಿಲೇರಿತ್ತು.

ಇದೀಗ ಇದೇ ಥೈಕ್ಕುಡಂ ಬ್ರಿಡ್ಜ್ ಟೀಮ್ನ ಸಂಗೀತ ಸಂಜೆ ಕಾರ್ಯಕ್ರಮವೊಂದು ಬೆಂಗಳೂರಿನಲ್ಲಿ ನಡೆಯಲಿದೆ. ಜನವರಿ 26 ಮತ್ತು 27 ರಂದು ಕೊತನೂರ್ನ ವಿಂಗ್ಸ್ ಅರೆನಾಸ್ ಮತ್ತು ನೆಕ್ಸಸ್ ಕೋರಮಂಗಲ ಮಾಲ್ನಲ್ಲಿ ಕೇರಳ ಮೂಲದ ಜನಪ್ರಿಯ ಸಂಗೀತ ಬ್ಯಾಂಡ್ ಥೈಕ್ಕುಡಂ ಬ್ರಿಡ್ಜ್ನ ಎರಡು ಬೃಹತ್ ಕಾರ್ಯಕ್ರಮಗಳು ನಡೆಯಲಿವೆ.

ಎರಡೂ ಪ್ರದರ್ಶನಗಳು ಸಂಜೆ 6 ಗಂಟೆಗೆ ಪ್ರಾರಂಭವಾಗಲಿವೆ. ಈ ಸಂಗೀತ ಸಂಜೆಯ ಟಿಕೆಟ್ಗಳು ₹1,268 ರಿಂದ ಆರಂಭವಾಗಲಿವೆ. ಎಲ್ಲಾ ವಯೋಮಾನದವರಿಗೆ ಈ ಈವೆಂಟ್ಗಳು ಪ್ರವೇಶ ಮುಕ್ತವಾಗಿದೆ.

ಕಾಂತಾರ ಸಿನಿಮಾ ಎರಡು ಆಸ್ಕರ್ ಕ್ವಾಲಿಫಿಕೇಷನ್ಗಳನ್ನು ಪಡೆದಿದ್ದು ಹೊಂಬಾಳೆ ಫಿಲ್ಮ್ಸ್ ಈ ಗುಡ್ನ್ಯೂಸ್ ಅನ್ನು ಅಭಿಮಾನಿಗಳ ಜೊತೆ ಶೇರ್ ಮಾಡಿದೆ. ಕಾಂತಾರ ಸಿನಿಮಾಗೆ ರಿಷಬ್ ಶೆಟ್ಟಿ ಕತೆ ಬರೆದು ನಿರ್ದೇಶನ ಮಾಡಿದ್ದು ಶಿವ ಎಂಬ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾ ಈಗಾಗಲೇ 450 ಕೋಟಿಗೂ ಹೆಚ್ಚು ಗಳಿಸಿದೆ. ಸಿನಿಮಾದಲ್ಲಿ ರಿಷಬ್ ಜೊತೆ ಸಪ್ತಮಿ ಗೌಡ, ಅಚ್ಯುತ್ ಕುಮಾರ್, ಕಿಶೋರ್ ಕುಮಾರ್, ಪ್ರಮೋದ್ ಶೆಟ್ಟಿ ಕೂಡಾ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
            
            
            Thaikkudam Bridge music shows in Bangalore on January 26.
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             03-11-25 12:33 pm
                        
            
                  
                Mangalore Correspondent    
            
                    
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm