ಬ್ರೇಕಿಂಗ್ ನ್ಯೂಸ್
09-02-23 12:39 pm Source: news18 ಸಿನಿಮಾ
ಮದಗಜ ಸಿನಿಮಾ ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ ಅವರಿಗೆ ಬಿಡಿಎ ನೋಟಿಸ್ ಕೊಟ್ಟಿದೆ. HSR ಲೇಔಟ್ನ 3ನೇ ಸೆಕ್ಟರ್ನಲ್ಲಿರುವ ಬಿಡಿಎನ 6 ನಿವೇಶನವನ್ನು ನಿರ್ಮಾಪಕ ಉಮಾಪತಿ ಒತ್ತುವರಿ ಮಾಡಿಕೊಂಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಸ್ಯಾಂಡಲ್ವುಡ್ ನಿರ್ಮಾಪಕ ಉಮಾಪತಿ ಶ್ರೀನಿವಾಸ್ಗೌಡ ವಿರುದ್ಧ ಬಿಡಿಎ ಸೈಟ್ ಒತ್ತುವರಿ ಆರೋಪ ಕೇಳಿ ಬಂದಿದ್ದು, ಈ ಹಿನ್ನೆಲೆಯಲ್ಲಿ ಬಿಡಿಎ ನೋಟಿಸ್ ಕೂಡಾ ಜಾರಿ ಮಾಡಿದೆ. 8 ದಿನಗಳ ಒಳಗೆ ಈ ನೋಟಿಸ್ಗೆ ಉತ್ತರಿಸುವಂತೆ ಸೂಚನೆ ಕೊಡಲಾಗಿದೆ.
ಎಚ್ಎಸ್ಆರ್ ಲೇ ಔಟ್ನ 3ನೇ ಸೆಕ್ಟರ್ನಲ್ಲಿರುವ ಬಿಡಿಎನ 6 ನಿವೇಶನ ಜಾಗ 1,545 ಚದರ ಮೀಟರ್ ವಿಸ್ತೀರ್ಣ ಇದೆ. ಈಗ ಮಾಡಿರುವ ಒತ್ತುವರಿ ತೆರವು ಮಾಡುವಂತೆ ಸೂಚಿಸಲಾಗಿದೆ. ಒತ್ತುವರಿ ಮಾಡಿರುವ ನಿವೇಶನ ತೆರವು ಮಾಡಲು ಅನುಮತಿ ಕೊಡಬೇಕು ಎಂದು ಬಿಡಿಎ ಆಯುಕ್ತರಿಗೆ ಇಂಜಿನಿಯರ್ ದಾಖಲೆ ರವಾನಿಸಿದ್ದರು. ಒತ್ತುವರಿ ತೆರವು ಮಾಡುವ ಮುನ್ನ ಉಮಾಪತಿಗೆ ನೋಟೀಸ್ ನೀಡಲಾಗಿದೆ.


ಒತ್ತುವರಿ ಮಾಡಿಕೊಂಡಿರುವ ಜಾಗ ನಿಮಗೆ ಸಂಬಂಧಿಸಿದ್ದು ಎಂಬುದನ್ನು ಸಾಬೀತುಪಡಿಸುವ ದಾಖಲೆ ನೀಡುವಂತೆ ಉಮಾಪತಿಗೆ ಸೂಚಿಸಲಾಗಿದೆ. ಫೆ.15ರ ಒಳಗೆ ದಾಖಲೆ ಸಲ್ಲಿಕೆ ಮಾಡದೆ ಹೋದಲ್ಲಿ ತೆರವು ಕಾರ್ಯಾಚರಣೆ ನಡೆಯಲಿದೆ. ಉಮಾಪತಿ ಅವರು ಸುದೀಪ್ ಅಭಿನಯದ ಹೆಬ್ಬುಲಿ ಚಿತ್ರಕ್ಕೆ ಬಂಡವಾಳ ಹೂಡಿದ್ದರು. ಕಳೆದ ವರ್ಷ ರಿಲೀಸ್ ಆದ ‘ಮದಗಜ’ ಚಿತ್ರವನ್ನು ಅವರು ನಿರ್ಮಾಣ ಮಾಡಿದ್ದರು. ಉಮಾಪತಿ ನೋಟಿಸ್ಗೆ ಸ್ಪಷ್ಟ ಉತ್ತರ ನೀಡದೆ ಇದ್ದಲ್ಲಿ ನಿವೇಶನ ತೆರವು ಕಾರ್ಯಾಚರಣೆ ನಡೆಯುವುದು ಪಕ್ಕಾ ಆಗಿದೆ. ಅವರು ಈ ಕುರಿತು ಇನ್ನೂ ಪ್ರತಿಕ್ರಿಯಿಸಿಲ್ಲ.
BDA Site Illegal Acquiring Sandalwood Producer Umapathy Gowda gets Notice.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm