ಬ್ರೇಕಿಂಗ್ ನ್ಯೂಸ್
21-02-23 01:18 pm Source: news18 ಸಿನಿಮಾ
ಸೋಮವಾರ ನಡೆದ ದಾದಾಸಾಹೇಬ್ ಫಾಲ್ಕೆ ಇಂಟರ್ ನ್ಯಾಶನಲ್ ಫಿಲ್ಮ್ ಫೆಸ್ಟಿವಲ್ ಅವಾರ್ಡ್ಸ್ 2023 ರಲ್ಲಿ ಕಾಂತಾರ ನಟ ರಿಷಬ್ ಶೆಟ್ಟಿ ಅತ್ಯಂತ ಭರವಸೆಯ ನಟ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಫೆ.20ರಂದು ಮುಂಬೈನಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ರಿಷಬ್ ಅವರು ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಆ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ರೆಡ್ ಕಾರ್ಪೆಟ್ ಮೇಲೆ ವಿನಮ್ರವಾಗಿ ಪ್ರಶಸ್ತಿಯೊಂದಿಗೆ ಪೋಸ್ ನೀಡುತ್ತಿರುವಾಗ, ಕಪ್ಪು ಅಂಗಿ ಮತ್ತು ಬಿಳಿ ಪಂಚೆಯೊಂದಿಗೆ ಎಲ್ಲರ ಗಮನ ಸೆಳೆದಿದ್ದಾರೆ. ನಮ್ಮ ಸಂಸ್ಕೃತಿಯನ್ನು ಎಲ್ಲ ಕಡೆಗಳಲ್ಲಿ ಪಸರಿಸುತ್ತಿದ್ದಾರೆ ಎಂದು ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ಕಾಂತಾರ ನಟ ರಿಷಬ್ ಶೆಟ್ಟಿ ತಮ್ಮ ಗೆಲುವನ್ನು ಕನ್ನಡದ ನಟ ಪುನೀತ್ ರಾಜ್ಕುಮಾರ್ ಮತ್ತು ನಿರ್ದೇಶಕ ಎಸ್ಕೆ ಭಗವಾನ್ ಅವರಿಗೆ ಅರ್ಪಿಸಿದ್ದಾರೆ.
ನನ್ನ ಮೇಲೆ ವಿಶ್ವಾಸವಿಟ್ಟು ಅವಕಾಶ ನೀಡಿದ ಹೊಂಬಾಳೆ ಫಿಲಂಸ್ ಮತ್ತು ವಿಜಯ್ ಕಿರಂಗಂದೂರು ಅವರಿಗೆ ನಾನು ಆಭಾರಿಯಾಗಿದ್ದೇನೆ. ಒಟ್ಟಿಗೆ ಸೇರಿಕೊಂಡು ಹೆಚ್ಚು ಉತ್ತಮ ಚಿತ್ರಗಳನ್ನು ಮಾಡಬೇಕು ಎಂದು ರಿಷಬ್ ಅವರು ಹೇಳಿದ್ದಾರೆ. ಕಾಂತಾರದ ತಂಡಕ್ಕೆ ಧನ್ಯವಾದ ಹೇಳಿದ್ದಾರೆ. ಅಲ್ಲದೇ ನನ್ನ ಜೀವನದ ಪಿಲ್ಲರ್ ನನ್ನ ಪತ್ನಿ ಪ್ರಗತಿ ಶೆಟ್ಟಿಗೆ ನಾನು ಸದಾ ಅಭಾರಿಯಾಗಿರುತ್ತೇನೆ. ನನ್ನ ಎಲ್ಲಾ ಕನಸುಗಳ ಜೊತೆ ಅವರು ಇರುತ್ತಾರೆ ಎಂದಿದ್ದಾರೆ.
ಯಾರು ನನ್ನ ಸಿನಿಮಾ ನೋಡಿ ಬೆಂಬಲಿಸಿದ್ದೀರೋ ಅವರೆಲ್ಲರಿಗೂ ನಾನು ತುಂಬು ಹೃದಯದಿಂದ ಧನ್ಯವಾದ ಅರ್ಪಿಸುತ್ತೇನೆ ಎಂದಿದ್ದಾರೆ. ರಿಷಬ್ ಶೆಟ್ಟಿ ಅವರು ಪಂಚೆ ಉಟ್ಟು ಪ್ರಶಸ್ತಿ ಸ್ವೀಕರಿಸಿದ್ದು ಜನರಿಗೆ ತುಂಬಾ ಇಷ್ಟ ಆಗಿದೆ. ಆ ಫೋಟೋಗಳು ಎಲ್ಲೆಡೆ ವೈರಲ್ ಆಗ್ತಾ ಇವೆ.
Actor Rishabh Shetty dedicates Dadasaheb Phalke award to Puneeth Rajkumar and sk Bhagavan.
10-08-25 09:12 pm
HK News Desk
ಗುಜರಾತ್, ಮಹಾರಾಷ್ಟ್ರದಂತೆ ನಮಗೂ ಆದ್ಯತೆ ಕೊಡಿ, ಮೆಟ...
10-08-25 06:27 pm
PM Modi, Operation Sindhoor: ಆಪರೇಶನ್ ಸಿಂಧೂರಕ್...
10-08-25 06:06 pm
ಚಾಲಕ ರಹಿತ ಮೆಟ್ರೋ ಹಳದಿ ಮಾರ್ಗಕ್ಕೆ ಪ್ರಧಾನಿ ಮೋದಿ...
10-08-25 01:57 pm
ಗಿಟಾರಿಗೆ ಹೊದಿಕೆ ಹೊದಿಸಿ ಏಳನೇ ಕ್ಲಾಸ್ ಹುಡುಗನ ಸಾವ...
09-08-25 10:12 pm
09-08-25 11:09 pm
HK News Desk
ಯಾರ ಮುಂದೆಯೂ ಭಾರತ ತಲೆ ಬಾಗದು ; ಸಾವಿರ ಬಾರಿ ಯತ್ನಿ...
09-08-25 07:38 pm
ಭದ್ರತಾ ಸಲಹೆಗಾರ ಅಜಿತ್ ದೋವಲ್ - ರಷ್ಯಾ ಉಪ ಪ್ರಧಾನಿ...
09-08-25 02:49 pm
ಮಧ್ಯಪ್ರದೇಶದ ಈ ಜಾಗದಲ್ಲಿದ್ಯಂತೆ ಅಪಾರ ಪ್ರಮಾಣದ ಚಿನ...
07-08-25 10:02 pm
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
10-08-25 04:32 pm
Udupi Correspondent
Six Arrested, Dharmasthala Incident, Kudla Ra...
10-08-25 02:26 pm
Dharmasthala, Janardhan Poojary, SIT Probe: ದ...
10-08-25 01:01 pm
Mangalore Dharmasthala Case: ಧರ್ಮಸ್ಥಳ ಕೇಸ್ ;...
10-08-25 12:37 pm
No Evidence, Bahubali Hill in Dharmasthala: ಬ...
09-08-25 10:53 pm
08-08-25 10:07 pm
Bangalore Correspondent
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm