ಬ್ರೇಕಿಂಗ್ ನ್ಯೂಸ್
10-04-23 01:50 pm Source: news18 ಸಿನಿಮಾ
ದೇಶಕ್ಕೆ ದೇಶವೇ ಹೆಮ್ಮೆ ಪಟ್ಟ ಕಾಂತಾರ ಕನ್ನಡ ಮಾತ್ರ ಅಲ್ಲ, ಬೇರೆ ಬೇರೆ ಭಾಷೆಯಲ್ಲೂ ಮೋಡಿ ಮಾಡಿತ್ತು. ಕಾಂತಾರ ನೋಡಿ ಮೆಚ್ಚದವರಿಲ್ಲ. ಎಲ್ಲರೂ ರಿಷಬ್ ಶೆಟ್ಟಿಯ ಅದ್ಭುತ ನಟನೆಯನ್ನು ಹೊಗಳಿದ್ದರು. ತುಳುನಾಡಿನ ಕತೆ ವಿಶ್ವದಾದ್ಯಂತ ಸದ್ದು ಮಾಡಿತ್ತು. ಈಗ ತುಳು ಭಾಷೆಯಲ್ಲೇ ಸಿನಿಮಾ ಬರ್ತಿದೆ. ಸ್ಟಾರ್ ಸುವರ್ಣದಲ್ಲಿ ಏಪ್ರಿಲ್ 15 ರಂದು ಮಧ್ಯಾಹ್ನ 1 ಗಂಟೆಗೆ ಸಿನಿಮಾ ಪ್ರಸಾರವಾಗಲಿದೆ.


ಏಪ್ರಿಲ್ 15ರಂದು ತುಳುವರ ಹೊಸ ವರ್ಷ ದಿನ. ಅಂದೇ ಸ್ಟಾರ್ ಸುವರ್ಣದಲ್ಲಿ ಸಿನಿಮಾ ಪ್ರಸಾರವಾಗುತ್ತಿದೆ. ಈ ಸುದ್ದಿ ಕೇಳಿ ತುಳು ಜನ ಖುಷಿಯಾಗಿದ್ದಾರೆ. ವಾವ್ ನಿಜಕ್ಕೂ ಖುಷಿಯ ವಿಚಾರ.ತುಳು ಭಾಷೆಯಲ್ಲೇ ಸಿನಿಮಾ ಪ್ರಸಾರ ಆಗ್ತಾ ಇರೋದಕ್ಕೆ. ಇದೇ ತರ ಹೆಚ್ಚೆಚ್ಚು ತುಳು ಸಿನಿಮಾಗಳನ್ನ ಪ್ರಸಾರ ಮಾಡಿ ಎಂದು ಕೆಲ ಅಭಿಮಾನಿಗಳು ಕಾಮೆಂಟ್ ಹಾಕಿದ್ದಾರೆ.


ಕನ್ನಡದ ಬ್ಲಾಕ್ ಬಸ್ಟರ್ ಸಿನಿಮಾ ಕಾಂತಾರ ಹಲವು ದಾಖಲೆಯನ್ನು ಬ್ರೇಕ್ ಮಾಡಿದೆ. ರಿಷಬ್ ಶೆಟ್ಟಿ ನಿರ್ದೇಶನ, ಸಿನಿಮಾ ಮೇಕಿಂಗ್, ನಟನೆ ಬಗ್ಗೆ ವಿವಿಧ ಸಿನಿಮಾ ರಂಗಗಳ ಗಣ್ಯರು ಪ್ರತಿಕ್ರಿಯೆ ನೀಡಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಸೆಪ್ಟೆಂಬರ್ 30 ರಂದು ಕನ್ನಡ, ಅಕ್ಟೋಬರ್ 14 ರಂದು ಹಿಂದಿ ಭಾಷೆಯಲ್ಲಿ ಬಿಡುಗಡೆಯಾಗಿದ್ದ ಕಾಂತಾರ ಸಿನಿಮಾ ಹಲವು ದಾಖಲೆಗಳನ್ನು ನಿರ್ಮಿಸಿತ್ತು. ಅದರಲ್ಲೂ ಸಿನಿಮಾ ನಿರ್ದೇಶಕ ರಿಷಬ್ ಶೆಟ್ಟಿ ಹಾಗೂ ನಿರ್ಮಾಣ ಸಂಸ್ಥೆ ಹೆಂಬಾಳೆ ಫಿಲ್ಮ್ಸ್ಗೆ ಭಾರೀ ಹೆಸರನ್ನು ತಂದುಕೊಟ್ಟಿದೆ.


ಹಿಂದಿಯಲ್ಲಿ ಬಿಡುಗಡೆಯಾಗಿದ್ದ ಕಾಂತಾರ ಸಿನಿಮಾ ಹಲವು ಬಾಲಿವುಡ್ ಸಿನಿಮಾಗಳಿಗೆ ಸೆಡ್ಡು ಹೊಡೆದು ಬಾಕ್ಸ್ ಆಫೀಸ್ನಲ್ಲಿ ಸದ್ದು ಮಾಡಿತ್ತು. ಹಲವು ಸಿನಿಮಾ ವಿಮರ್ಶಕರು ಸಿನಿಮಾ ಬಗ್ಗೆ ನಿರಂತರವಾಗಿ ಮೆಚ್ಚುಗೆ ಸೂಚಿಸಿದ್ದರು ಕಾಂತಾರ ಸಿನಿಮಾ ಕುರಿತಂತೆ ಸಂದರ್ಶನವೊಂದರಲ್ಲಿ ರಾಜಮೌಳಿ ಮಾತನಾಡಿದ್ದು, ಬಿಗ್ ಬಜೆಟ್ ಸಿನಿಮಾಗಳ ನಡುವೆ ಏಕಾಏಕಿ ಮುನ್ನುಗ್ಗಿ ಬಂದ ಕಾಂತಾರ ಸಿನಿಮಾ ಉತ್ತಮ ನಂಬರ್ ಗಳನ್ನು ಪಡೆದುಕೊಳ್ತು. ಇದು ದೊಡ್ಡ ನಂಬರ್ ಗಳನ್ನು ಗಳಿಸಲು ಬಿಗ್ ಸ್ಕೇಲ್ ಸಿನಿಮಾಗಳ ಅಗತ್ಯವಿಲ್ಲ ಎಂದು ಹೇಳಿದ್ರು.
kantara kannada film telecast in star suvarna channel in tulu language.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm