ಬ್ರೇಕಿಂಗ್ ನ್ಯೂಸ್
01-05-23 01:09 pm Source: news18 ಸಿನಿಮಾ
ಮೇ 5ರಂದು ರಿಲೀಸ್ ಆಗಲಿರುವ ದಿ ಕೇರಳ ಸ್ಟೋರಿ ಸಿನಿಮಾ ಈಗಾಗಲೇ ಭಾರೀ ಸದ್ದು ಮಾಡುತ್ತಿದೆ. ಬಾಲಿವುಡ್ ನಟಿ ಆದಾ ಶರ್ಮಾ ಪ್ರಮುಖ ಪಾತ್ರದಲ್ಲಿ ನಟಿಸಿರುವ ಈ ಸಿನಿಮಾ ಟ್ರೈಲರ್ ರಿಲೀಸ್ ಆಗಿ ಭಾರೀ ವಿವಾದ ಸೃಷ್ಟಿಸಿದೆ. ಈ ಸಿನಿಮಾವನ್ನು ಯಾವುದೇ ಕಾರಣಕ್ಕೂ ಬಿಡುಗಡೆ ಮಾಡಲು ಅವಕಾಶ ನೀಡಬಾರದು ಎಂದು ಕೇರಳ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸುತ್ತಿದೆ. ಒಂದು ಸಮುದಾಯವನ್ನು ಅವಮಾನಿಸುವ, ವಿಷ ಬೀಜ ಬಿತ್ತುವ ಸಿನಿಮಾ ರಿಲೀಸ್ ಬೇಡ ಎಂದು ಸರ್ಕಾರಕ್ಕೆ ಮನವಿ ಮಾಡಿದೆ.


ಈ ಒಂದು ಬೆಳವಣಿಗೆ ಬಗ್ಗೆ ಚೇತನ್ ಅವರು ಪ್ರತಿಕ್ರಿಯಿಸಿದ್ದಾರೆ. ವಿವಾದಾತ್ಮಕ ಚಿತ್ರ 'ದಿ ಕೇರಳ ಸ್ಟೋರಿ' ಮೇ 5 ರಂದು ತೆರೆಗೆ ಬರಲಿದೆ. ನಾನು ಈ ಹಿಂದೆ ಸಮುದಾಯದ/ಲಿಂಗದ ವಿರುದ್ಧ ದ್ವೇಷ ಮತ್ತು ಅವಹೇಳನ ಮಾಡುವ ಚಲನಚಿತ್ರಗಳಲ್ಲಿ ನಟಿಸಲು ನಿರಾಕರಿಸಿದ್ದೆ. ಆದರೆ, ಸೈದ್ಧಾಂತಿಕ ಆಧಾರದ ಮೇಲೆ ಸೆನ್ಸಾರ್ ಮಂಡಳಿಯಿಂದ ಅನುಮತಿ ಪಡೆದ ಚಲನಚಿತ್ರವನ್ನು ರಾಜ್ಯವು ನಿಷೇಧಿಸಬೇಕು ಎಂದು ಹೇಳುವುದನ್ನು ನಾನು ಒಪ್ಪುವುದಿಲ್ಲ. ನಮಗೆ ಅಭಿವ್ಯಕ್ತಿ ಸ್ವಾತಂತ್ರ್ಯ ಅತ್ಯಗತ್ಯ ಎಂದು ನಟ ಚೇತನ್ ಅವರು ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದಾರೆ.


ವಿವಾದಾತ್ಮಕ ಸಿನಿಮಾ ದಿ ಕೇರಳ ಸ್ಟೋರಿ ಮೇ 5ರಂದು ಥಿಯೇಟರ್ಗಳಲ್ಲಿ ರಿಲೀಸ್ ಆಗಲಿದೆ. ಸಿನಿಮಾ ರಿಲೀಸ್ಗೆ ಇನ್ನೂ ಬೆರಳೆಣಿಕೆಯ ದಿನಗಳಷ್ಟೇ ಬಾಕಿ ಇದೆ. ಸಿನಿಮಾ ಬಿಡುಗಡೆಗೆ ಕೆಲವೇ ದಿನ ಬಾಕಿ ಇರುವಂತಹ ಸಂದರ್ಭದಲ್ಲಿ ಕಾಂಗ್ರೆಸ್ ಶುಕ್ರವಾರ ಕೇರಳ ಸರ್ಕಾರದ ಮುಂದೆ ಹೊಸ ಬೇಡಿಕೆ ಇಟ್ಟಿದೆ. ಸುಳ್ಳುಗಳು ತುಂಬಿರುವ, ಮುಸ್ಲಿಂ ಸಮುದಾಯವನ್ನು ಕೆಟ್ಟದಾಗಿ ತೋರಿಸಿರುವ ಈ ಸಿನಿಮಾದ ಪ್ರದರ್ಶನಕ್ಕೆ ಅವಕಾಶ ನೀಡಬಾರದು ಎಂದು ಕಾಂಗ್ರೆಸ್ ಕೇರಳ ಸರ್ಕಾರಕ್ಕೆ ಮನವಿ ಮಾಡಿದೆ.



ಕೇರಳದ ಆಡಳಿತ ಪಕ್ಷ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (Marxist)ನ ಯೂತ್ ವಿಂಗ್ ದಿ ಡೆಮಾಕ್ರೆಟಿಕ್ ಯೂತ್ ಫೆಡರೇಷನ್ ಆಫ್ ಇಂಡಿಯಾ (ಡಿವೈಎಫ್ಐ) (DYFI) ಕೂಡಾ ಸಿನಿಮಾವನ್ನು ವಿರೋಧಿಸಿದೆ. ಸಂಘ ಪರಿವಾದ ಪ್ರಭಾವಿ ಮಾಧ್ಯಮವನ್ನು ಬಳಸಿಕೊಂಡು ಕೇರಳ ರಾಜ್ಯ ಹಾಗೂ ಪೂರ್ತಿ ಸಮುದಾಯವನ್ನು ಅವಮಾನಿಲಸು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದೆ. ಆದಾ ಶರ್ಮಾ ಸಣ್ಣ ಹಳ್ಳಿಯ ಹುಡುಗಿ ಪಾತ್ರವನ್ನು ಮಾಡಿದ್ದು ಆಕೆ ಯಾವ ರೀತಿ ಪ್ರೀತಿಯಲ್ಲಿ ಬೀಳುತ್ತಾಳೆ, ಮುಸ್ಲಿಂ ಆಗಿ ಮತಾಂತರವಾಗುತ್ತಾಳೆ ಎಂಬೆಲ್ಲ ವಿಚಾರಗಳನ್ನು ಈ ಸಿನಿಮಾದಲ್ಲಿ ತಿಳಿಸಲಾಗಿದೆ.
sandalwood actor chethan reacts to the kerala story movie controversy.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm