ಬ್ರೇಕಿಂಗ್ ನ್ಯೂಸ್
29-05-23 01:23 pm Source: news18 ಸಿನಿಮಾ
ಶೀಘ್ರದಲ್ಲೇ ಅಂಬಿ ಮನೆಯಲ್ಲಿ ಮದುವೆ ಸಂಭ್ರಮ ಮನೆ ಮಾಡಲಿದೆ. ಅಭಿಷೇಕ್ ಅಂಬರೀಷ್ ಹಾಗೂ ಅವಿವ ಬಿದ್ದಪ್ಪ ಮದುವೆಗೆ ಭರ್ಜರಿ ತಯಾರಿ ಕೂಡ ನಡೆಯುತ್ತಿದೆ. ಇಂದು (ಮೇ.29) ಅಂಬಿ ಹುಟ್ಟುಹಬ್ಬವಾದ ಹಿನ್ನೆಲೆ ಸಮಾಧಿ ಬಳಿ ಮದುವೆ ಆಮಂತ್ರಣ ಪತ್ರಿಕೆ ಇಟ್ಟು ಪೂಜೆ ಸಲ್ಲಿಸಿದ್ರು. ಸೋಶಿಯಲ್ ಮೀಡಿಯಾದಲ್ಲಿ ಅಭಿಷೇಕ್ ಹಾಗೂ ಅಂಬರೀಷ್–ಅವಿವ ವಿವಾಹದ ಆಮಂತ್ರಣ ಪತ್ರ ವೈರಲ್ ಆಗಿದೆ. ಅಭಿಮಾನಿಗಳು ಹಾಗೂ ಸೆಲೆಬ್ರೆಟಿಗಳು ಯಂಗ್ ರೆಬಲ್ ಸ್ಟಾರ್ಗೆ ಶುಭ ಕೋರಿದ್ದಾರೆ.
ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಕಳೆದ ವರ್ಷ ಡಿಸೆಂಬರ್ 11ರಂದು ಅಭಿಷೇಕ್ ಹಾಗೂ ಅವಿವ ನಿಶ್ಚಿತಾರ್ಥ ನೆರವೇರಿತು. ಕುಟುಂಬಸ್ಥರು, ಆಪ್ತರು ಹಾಗೂ ಕೆಲ ಗಣ್ಯರ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯಿತು. ಜೂನ್ 4ರಂದು ಜೆಪಿ ನಗರದ ಅಂಬಿ ನಿವಾಸದಲ್ಲಿ ಚಪ್ಪರ ಪೂಜೆ ನಡೆಯಲಿದೆ. ಜೂನ್ 5ರಂದು ಮಾಣಿಕ್ಯ-ಚಾಮರ ವಜ್ರದಲ್ಲಿ ಬೆಳಿಗ್ಗೆ ಕರ್ಕಾಟಕ ಲಗ್ನದಲ್ಲಿ (9:30-10:30) ಮದುವೆ ಸಮಾರಂಭ ನಡೆಯಲಿದೆ.


ಜೂನ್ 7ಕ್ಕೆ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ನ ತ್ರಿಪುರ ವಾಸಿನಿಯಲ್ಲಿ ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಮಂಡ್ಯದಲ್ಲಿ ಅದ್ಧೂರಿ ಆರತಕ್ಷತೆ ನಡೆಯುತ್ತದೆ ಎಂದು ಸುದ್ದಿಯಾಗಿತ್ತು. ಆದ್ರೆ ಕಾರ್ಯಕ್ರಮ ಬೆಂಗಳೂರಲ್ಲೇ ನಡೆಯಲಿದೆ. ಜೂನ್ 16 ರಂದು ಮಂಡ್ಯದಲ್ಲಿ ಬೀಗರ ಊಟ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಬೀಗರ ಔತಣಕೂಟಕ್ಕೆ ಸುಮಾರು 1 ಲಕ್ಷ ಜನರು ಸೇರುವ ಸಾಧ್ಯತೆ ಇದೆ. 1ಲಕ್ಷಕ್ಕೂ ಹೆಚ್ಚು ಜನರಿಗೆ ಭೋಜನ ವ್ಯವಸ್ಥೆ ಮಾಡಲಾಗುತ್ತದೆ.


ಜೂನ್ ತಿಂಗಳಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡ್ತಿರೋ ಈ ಜೋಡಿ, ಬಹು ದಿನಗಳ ಸ್ನೇಹಿತರೇ ಆಗಿದ್ದಾರೆ. ಈ ಬಗ್ಗೆ ಎಲ್ಲೂ ಅಭಿ ಹೇಳಿಕೊಂಡಿರಲಿಲ್ಲ. ಅವಿವಾ ಕೂಡ ಏನೂ ಎಲ್ಲೂ ಹೇಳಿರಲಿಲ್ಲ. ಆದರೆ ಇವರ ಸ್ನೇಹ ಎಂಗೇಜ್ಮೆಂಟ್ ಟೈಮ್ ಅಲ್ಲಿಯೇ ರಿವೀಲ್ ಆಯಿತು. ಅಭಿಷೇಕ್ ಅಂಬರೀಶ್ ಅಭಿನಯದ ಬ್ಯಾಡ್ಮ್ಯಾನರ್ಸ್ ರಿಲೀಸ್ಗೆ ರೆಡಿ ಆಗುತ್ತಿದೆ. ಕಾಳಿ ಸಿನಿಮಾವನ್ನ ಕೂಡ ಅಭಿಷೇಕ್ ಈಗಾಗಲೇ ಒಪ್ಪಿಕೊಂಡಿದ್ದಾರೆ.
abhishek ambareesh and aviva bidapa marriage invitation card viral.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm