ಬ್ರೇಕಿಂಗ್ ನ್ಯೂಸ್
06-06-23 01:19 pm Source: news18 ಸಿನಿಮಾ
ಜೂನ್ 15ಕ್ಕೆ SSE ಸಿನಿಮಾ ರಿಲೀಸ್ ಡೇಟ್ ಅನೌನ್ಸ್
ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ಬಗ್ಗೆ ಅಭಿಮಾನಿಗಳಲ್ಲಿ ಭಾರೀ ಕುತೂಹಲವಿದೆ. ಪ್ರತಿ ಬಾರಿ ಹೊಸತನದೊಂದಿಗೆ ತೆರೆ ಮೇಲೆ ಬರುವ ರಕ್ಷಿತ್ ಶೆಟ್ಟಿ, ಈ ಬಾರಿ ಕೂಡ ಮ್ಯಾಜಿಕ್ ಮಾಡಲಿದ್ದಾರೆ ಎನ್ನುವ ನಿರೀಕ್ಷೆಯಲ್ಲಿ ಅಭಿಮಾನಿಗಳಿದ್ದಾರೆ. ಜನ್ಮದಿನದಂದು ರಕ್ಷಿತ್ ಶೆಟ್ಟಿ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ಬಗ್ಗೆ ಬಿಗ್ ಅಪ್ಡೇಟ್ ನೀಡಿದ್ದಾರೆ. ಜೂನ್ 15 ರಂದು ಸಿನಿಮಾ ರಿಲೀಸ್ ಡೇಟ್ ಅನೌನ್ಸ್ ಮಾಡುವುದಾಗಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 ಪಾರ್ಟ್ಗಳಾಗಿ ತೆರೆ ಮೇಲೆ ಬರಲಿದೆ SSE
ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಸಿನಿಮಾ ಬಗ್ಗೆ ಮಾಹಿತಿ ನೀಡಿದ ರಕ್ಷಿತ್ ಶೆಟ್ಟಿ, ನಿಮ್ಮ ಮನು ಇಂದು ಸ್ಪೆಷಲ್ ಅನೌನ್ಸ್ಮೆಂಟ್ ಮಾಡಲು ಬಂದಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಸಮಯ, ಪ್ರೀತಿ ಮತ್ತು ಕನಸುಗಳನ್ನು ಸ್ಪಷ್ಟವಾಗಿ ಕೆತ್ತಿದ ಎಸ್ಎಸ್ಇ ಈಗ ಎರಡು ಭಾಗಗಳಲ್ಲಿ ನಿಮ್ಮ ಮುಂದೆ ಬರಲಿದೆ , ಸೈಡ್ ಎ ಮತ್ತು ಸೈಡ್ ಬಿ ಚಿತ್ರೀಕರಣ ಮುಗಿದಿದೆ. ಈ ಸಿನಿಮಾದ ಎರಡೂ ಭಾಗಗಳ ಬಿಡುಗಡೆ ದಿನಾಂಕವನ್ನು ಜೂನ್ 15 ರಂದು ಪ್ರಕಟಿಸಲಾಗುವುದು. ನೀವು ನಮ್ಮನ್ನು ಯಾವಾಗಲೂ ಪ್ರೀತಿಯಿಂದ ಸ್ವೀಕರಿಸುತ್ತೀರಿ ಎಂದು ನಾವು ಭಾವಿಸುತ್ತೇವೆ ಎಂದು ರಕ್ಷಿತ್ ಶೆಟ್ಟಿ ಬರೆದುಕೊಂಡಿದ್ದಾರೆ.

ಮನು-ಸುರಭಿ ಪ್ರೇಮಕಥೆ
ಸಪ್ತ ಸಾಗರದಾಚೆ ಸಿನಿಮಾ ಟೀಸರ್ ರಿಲೀಸ್ ಆಗಿದ್ದು, ಟೀಸರ್ಗೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರೇಮಿಗಳ ದಿನದಂದು 36 ಸೆಕೆಂಡ್ ಇರುವ ಈ ಟೀಸರ್ ಅನ್ನು ಬಿಡುಗಡೆ ಮಾಡಲಾಗಿತ್ತು. ಟೀಸರ್ನಲ್ಲಿ ರಕ್ಷಿತ್ ಶೆಟ್ಟಿ ಹಾಗೂ ರುಕ್ಮಿಣಿ ವಸಂತ್ ಮಾತ್ರ ಕಾಣಿಸಿಕೊಂಡಿದ್ದರು. ಮನು-ಸುರಭಿ ಪ್ರೇಮ ಕಥೆಯ ಝಲಕ್ ಅನ್ನು ಟೀಸರ್ ನಲ್ಲಿ ಕಾಣಬಹುದಾಗಿದೆ. ಟೀಸರ್ ನೋಡಿದ ಪ್ರೇಕ್ಷಕರಿಗೆ ರಕ್ಷಿತ್ ಸಿನಿಮಾ ಮೇಲೆ ಮತ್ತಷ್ಟು ನಿರೀಕ್ಷೆ ಹೆಚ್ಚಾಗಿದೆ.

ಮೋಡಿ ಮಾಡುತ್ತಾ ರಕ್ಷಿತ್-ರುಕ್ಮಿಣಿ ಜೋಡಿ?
ನಿರ್ದೇಶಕ ಹೇಮಂತ್ ರಾವ್ ಮತ್ತು ರಕ್ಷಿತ್ ಶೆಟ್ಟಿ ಕಾಂಬಿನೇಷನ್ನಲ್ಲಿ 'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ತಯಾರಾಗ್ತಿದೆ. ಸಿನಿಮಾದ ಶೂಟಿಂಗ್ ಬಹುತೇಕ ಮುಕ್ತಾಯಗೊಂಡಿದೆ. ಶೀರ್ಷಿಕೆ ಮೂಲಕವೇ ಕುತೂಹಲ ಮೂಡಿಸಿದ್ದ ಈ ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ 'ಮನು' ಪಾತ್ರಕ್ಕೆ ಜೀವ ತುಂಬಿದ್ದಾರೆ. ನಟಿ ರುಕ್ಮಿಣಿ ವಸಂತ್ ಸುರಭಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
'ಸಪ್ತ ಸಾಗರದಾಚೆ ಎಲ್ಲೋ' ಸಿನಿಮಾ ಹೆಸರೇ ಹೇಳುವಂತೆ ಸಮುದ್ರ ಕೂಡ ಈ ಚಿತ್ರದಲ್ಲಿ ಮುಖ್ಯ ಪಾತ್ರವಹಿಸಲಿದೆ ಎನ್ನಬಹುದು. ಸಿನಿಮಾ ತಂಡ ರಿಲೀಸ್ ಮಾಡಿರುವ 2 ಟೀಸರ್ಗಳಲ್ಲೂ ಸಮುದ್ರದ ಬಗ್ಗೆ ಮಾತುಕತೆ ಇದೆ.
actor rakshit shetty sapta sagaradaache ello movie big update.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm