ಬ್ರೇಕಿಂಗ್ ನ್ಯೂಸ್
03-12-20 05:32 pm Source: FILMIBEAT Bharath Kumar K ಸಿನಿಮಾ
'ಕೆಜಿಎಫ್ ಚಾಪ್ಟರ್-2' ಸಿನಿಮಾದ ಬಳಿಕ ನಿರ್ದೇಶಕ ಪ್ರಶಾಂತ್ ನೀಲ್ ತೆಲುಗು ನಟ ಪ್ರಭಾಸ್ ಜೊತೆ ಸಿನಿಮಾ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಹೊಂಬಾಳೆ ಫಿಲಂಸ್ ಸಂಸ್ಥೆ ಈ ಚಿತ್ರ ನಿರ್ಮಾಣ ಮಾಡುತ್ತಿದೆ ಎಂದು ಅಧಿಕೃತ ಪಡಿಸಿದೆ. ರಾಕಿಂಗ್ ಸ್ಟಾರ್ ಯಶ್ ಮುಂದಿನ ಸಿನಿಮಾ ಯಾವುದು ಎಂಬ ಪ್ರಶ್ನೆ ಕಾಡುತ್ತಿದೆ. ಪರಭಾಷೆಯ ಸ್ಟಾರ್ ನಿರ್ದೇಶಕರು ಯಶ್ ಅವರ ಕಾಲ್ಶೀಟ್ ಪಡೆಯಲು ಪ್ರಯತ್ನಿಸಿದ್ದು, ಯಶ್ ಮುಂದಿನ ಸಿನಿಮಾ ಪ್ಯಾನ್ ಇಂಡಿಯಾ ಚಿತ್ರವಾಗಲಿದೆ ಎಂದು ಹೇಳಲಾಗಿದೆ. ಆದ್ರೀಗ, ಕನ್ನಡದ ನಿರ್ದೇಶಕರ ಜೊತೆಯೇ ಯಶ್ ತಮ್ಮ ಮುಂದಿನ ಸಿನಿಮಾ ಮಾಡುವ ತಯಾರಿ ನಡೆಸಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ.

ನರ್ತನ್ ಜೊತೆ ಯಶ್ ಸಿನಿಮಾ!
'ಮಫ್ತಿ' ಚಿತ್ರದ ಯಶಸ್ಸಿನ ಬಳಿಕ ನಿರ್ದೇಶಕ ನರ್ತನ್ ರಾಕಿಂಗ್ ಸ್ಟಾರ್ ಯಶ್ಗೆ ಸಿನಿಮಾ ಮಾಡಲಿದ್ದಾರೆ ಎಂಬ ಸುದ್ದಿ ಚರ್ಚೆಯಲ್ಲಿದೆ. ಈ ಸಂಬಂಧ ನರ್ತನ್ ಮತ್ತು ಯಶ್ ಇಬ್ಬರು ಭೇಟಿ ಮಾಡಿ ಚರ್ಚೆ ನಡೆಸಿದ್ದು, ಸಿದ್ಧತೆ ಸಹ ಮಾಡಿಕೊಳ್ಳುತ್ತಿದ್ದಾರೆ ಎಂಬ ಸುದ್ದಿ ಬಹಿರಂಗವಾಗಿದೆ.

ಪ್ಯಾನ್ ಇಂಡಿಯಾ ಸಿನಿಮಾ!
ಕೆಜಿಎಫ್ ಸ್ಟಾರ್ ಮತ್ತು ನರ್ತನ್ ಕಾಂಬಿನೇಷನ್ನಲ್ಲಿ ಮೂಡಿ ಬರಲಿದೆ ಎಂದು ಹೇಳಲಾಗುತ್ತಿರುವ ಚಿತ್ರ ಪ್ಯಾನ್ ಇಂಡಿಯಾ ಬಿಡುಗಡೆಯಾಗಲಿದೆಯಂತೆ. ಕೆಜಿಎಫ್ ಬಳಿಕ ನ್ಯಾಷನಲ್ ಸ್ಟಾರ್ ಎನಿಸಿಕೊಂಡಿರುವ ಯಶ್ ಅವರ ಇಮೇಜ್ ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ನಟನ ಮೇಲಿದ್ದು ಹಾಗಾಗಿ ಪ್ಯಾನ್ ಇಂಡಿಯಾ ಪ್ರಾಜೆಕ್ಟ್ ಮಾಡುವ ಬಗ್ಗೆ ಆಸಕ್ತಿ ಹೊಂದಿದ್ದಾರೆ.

'ಮಫ್ತಿ' ರೀಮೇಕ್ನಿಂದ ಹೊರಬಂದ ನರ್ತನ್
ರೋರಿಂಗ್ ಸ್ಟಾರ್ ಶ್ರೀಮುರಳಿ ಮತ್ತು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯಲ್ಲಿ ಬಂದಿದ್ದ ಮಫ್ತಿ ಸಿನಿಮಾವನ್ನು ತಮಿಳಿನಲ್ಲಿ ರೀಮೇಕ್ ಮಾಡಲಾಗುತ್ತಿದೆ. ತಮಿಳಿನಲ್ಲಿ ಈ ಚಿತ್ರಕ್ಕೆ ನರ್ತನ್ ಆಕ್ಷನ್ ಕಟ್ ಹೇಳಬೇಕಿತ್ತು. ಆದ್ರೆ, ಅಂತಿಮ ಹಂತದಲ್ಲಿ ನರ್ತನ್ ಈ ಪ್ರಾಜೆಕ್ಟ್ನಿಂದ ಹೊರಬಂದಿದ್ದಾರೆ.
This News Article is a Copy of FILMIBEAT
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm