ಬ್ರೇಕಿಂಗ್ ನ್ಯೂಸ್
04-12-20 10:47 am Source: FILMIBEAT ಸಿನಿಮಾ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಇತ್ತೀಚಿಗೆ ನಿರ್ದೇಶಕ ಹಾಗೂ ನಟ ರಿಷಬ್ ಶೆಟ್ಟಿಯನ್ನು ಭೇಟಿಯಾಗಿ ಅಚ್ಚರಿ ಮೂಡಿಸಿದ್ದಾರೆ. ರಿಷಬ್ ಶೆಟ್ಟಿ, ಚಾಲೆಂಜಿಂಗ್ ಸ್ಟಾರ್ ಗೆ ಸಿನಿಮಾ ಮಾಡ್ತಿದ್ದಾರಾ? ಸೈಲೆಂಟ್ ಆಗಿ ಸಿನಿಮಾ ಮಾತುಕತೆ ನಡೆಯುತ್ತಿದೆಯಾ? ಎಂದು ಯೋಚಿಸುತ್ತಿದ್ದೀರಾ. ಇಬ್ಬರು ಸಿನಿಮಾ ಮಾಡಿದರೂ ಅಚ್ಚರಿ ಇಲ್ಲ. ರಿಷಬ್ ಶೆಟ್ಟಿ ಮತ್ತು ತಂಡ ಸದ್ಯ ಮೈಸೂರಿನಲ್ಲಿ ಬೀಡುಬಿಟ್ಟಿದೆ. ಹರಿಕಥೆ ಅಲ್ಲ ಗಿರಿಕಥೆ ಸಿನಿಮಾದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಮೈಸೂರಿನಲ್ಲಿ ಭರ್ಜರಿಯಾಗಿ ಚಿತ್ರೀಕರಣ ಮಾಡುತ್ತಿರುವ ತಂಡವನ್ನು ದರ್ಶನ್ ಸಹಜವಾಗಿ ಭೇಟಿಯಾಗಿ ಅಚ್ಚರಿ ಮೂಡಿಸಿದ್ದಾರೆ.
ಸಾಮಾನ್ಯವಾಗಿ ಮೈಸೂರಿನಲ್ಲಿ ಚಿತ್ರೀಕರಣ ನಡೆಯುತ್ತಿದ್ದರೆ ದರ್ಶನ್ ಚಿತ್ರೀಕರಣ ಸೆಟ್ ಗೆ ಹೋಗಿ ಭೇಟಿಯಾಗಿ ಮಾತುಕತೆ ನಡೆಸುತ್ತಾರೆ. ಚಿತ್ರತಂಡದ ಜೊತೆ ಕಾಲಕಳೆದು ತಂಡಕ್ಕೆ ಶುಭಕೋರಿ ವಾಪಸ್ ಆಗುತ್ತಾರೆ. ಹಾಗೆ ಹರಿಕಥೆ ಅಲ್ಲ ಗಿರಿಕಥೆತಂಡವನ್ನು ಭೇಟಿಯಾಗಿದ್ದಾರೆ. ದರ್ಶನ್ ಮತ್ತು ನಿರ್ಮಾಪಕ ಸಂದೇಶ್ ನಾಗರಾಜ್ ಇಬ್ಬರು ರಿಷಬ್ ಶೆಟ್ಟಿ ಮತ್ತು ತಂಡವನ್ನು ಭೇಟಿಯಾಗಿದ್ದಾರೆ.

ದರ್ಶನ್ ಭೇಟಿಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಂದಹಾಗೆ ಇತ್ತೀಚಿಗಷ್ಟೆ ಹರಿಕಥೆ ಅಲ್ಲ ಗಿರಿಕಥೆ ಸಿನಿಮಾದಲ್ಲಿ ದೊಡ್ಡ ಬದಲಾವಣೆ ಆಗಿದೆ. ಚಿತ್ರದಿಂದ ನಿರ್ದೇಶಕ ಗಿರಿಕೃಷ್ಣ ಹೊರನಡೆದಿದ್ದಾರೆ. ಅನಾರೋಗ್ಯದ ಕಾರಣ ನಿರ್ದೇಶಕ ಗಿರಿಕೃಷ್ಣ ಸಿನಿಮಾದ ಹೊರನಡೆದಿದ್ದಾರೆ ಎಂದು ಹೇಳಲಾಗುತ್ತಿದೆ.

ಇದೀಗ ಚಿತ್ರಕ್ಕೆ ಹೊಸ ನಿರ್ದೇಶಕರು ಎಂಟ್ರಿ ಕೊಟ್ಟಿದ್ದಾರೆ. ಕರಣ್ ಅನಂತ್ ಮತ್ತು ಅನಿರುದ್ಧ ಮಹೇಶ್ ಇಬ್ಬರು ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ ಎಂದು ಹೇಳಾಗುತ್ತಿದೆ. ರಿಷಬ್ ಶೆಟ್ಟಿ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ನಟನೆಯ ಜೊತೆಗೆ ನಿರ್ದೇಶನದಲ್ಲೂ ನಿರತರಾಗಿದ್ದಾರೆ.
This News Article is a Copy of FILMIBEAT
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 05:29 pm
HK News Staffer
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm